ದಾವಣಗೆರೆ: ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ಅಧಿವೇಶನಕ್ಕೆ ಹೊರಟಿದ್ದ ಬಸ್ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದು ಚಾಲಕ ಸೇರಿ 20ಕ್ಕೂ ಹೆಚ್ಚು ಜನರಿಗೆ ಗಾಯಗಳಾದ ಘಟನೆ ನಡೆದಿದೆ.
ಚಿಕ್ಕಬಳ್ಳಾಪುರ, ಚಿಂತಾಮಣಿ ಸೇರಿದಂತೆ ವಿವಿಧ ಕಡೆಗಳಿಂದ ಮಾದಿಗ ದಂಡೋರ ಸಮಿತಿ ಸದಸ್ಯರು ಮೂರು ಬಸ್ಗಳಲ್ಲಿ ಬೆಳಗಾವಿ ಅಧಿವೇಶನಕ್ಕೆ ಹೊರಟಿದ್ದಾಗ ಮೂರು ಬಸ್ಸುಗಳಲ್ಲಿ ಒಂದು ಬಸ್ಸಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ.
ದಾವಣಗೆರೆ ನಗರದ ಹೊರವಲಯದ ಜಿಲ್ಲಾ ಪಂಚಾಯಿತ್ ಎದುರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಅಪಘಾತ ಸಂಭವಿಸಿದೆ. ಗಾಯಾಳುಗಳಿಗೆ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ನ್ಯಾಯಮೂರ್ತಿ ಎಜೆ ಸದಾಶಿವ ಆಯೋಗದ ವರದಿ ಜಾರಿಗೆ ನಿರ್ಧಾರ ತೆಗೆದುಕೊಳ್ಳುವಂತೆ ಆಗ್ರಹಿಸಲು ಬೆಳಗಾವಿಗೆ ತೆರಳುತ್ತಿದ್ದಾಗ ಅಪಘಾತವಾಗಿದೆ. ದಾವಣಗೆರೆ ನಗರದ ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.