Categories: ಕ್ರೈಮ್

ಬೆಳಗಾವಿ ಅಧಿವೇಶನಕ್ಕೆ ಹೊರಟಿದ್ದ ಬಸ್​ಗೆ ಅಪರಿಚಿತ ವಾಹನ ಡಿಕ್ಕಿ

ದಾವಣಗೆರೆ: ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ಅಧಿವೇಶನಕ್ಕೆ ಹೊರಟಿದ್ದ ಬಸ್​ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದು  ಚಾಲಕ ಸೇರಿ 20ಕ್ಕೂ ಹೆಚ್ಚು ಜನರಿಗೆ ಗಾಯಗಳಾದ ಘಟನೆ ನಡೆದಿದೆ.

ಚಿಕ್ಕಬಳ್ಳಾಪುರ, ಚಿಂತಾಮಣಿ ಸೇರಿದಂತೆ ವಿವಿಧ ಕಡೆಗಳಿಂದ ಮಾದಿಗ ದಂಡೋರ ಸಮಿತಿ ಸದಸ್ಯರು ಮೂರು ಬಸ್​ಗಳಲ್ಲಿ ಬೆಳಗಾವಿ ಅಧಿವೇಶನಕ್ಕೆ ಹೊರಟಿದ್ದಾಗ ಮೂರು ಬಸ್ಸುಗಳಲ್ಲಿ ಒಂದು ಬಸ್ಸಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ.

ದಾವಣಗೆರೆ ನಗರದ ಹೊರವಲಯದ ಜಿಲ್ಲಾ ಪಂಚಾಯಿತ್ ಎದುರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಅಪಘಾತ ಸಂಭವಿಸಿದೆ. ಗಾಯಾಳುಗಳಿಗೆ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ನ್ಯಾಯ‌ಮೂರ್ತಿ ಎಜೆ ಸದಾಶಿವ ಆಯೋಗದ ವರದಿ ಜಾರಿಗೆ ನಿರ್ಧಾರ ತೆಗೆದುಕೊಳ್ಳುವಂತೆ ಆಗ್ರಹಿಸಲು ಬೆಳಗಾವಿಗೆ ತೆರಳುತ್ತಿದ್ದಾಗ ಅಪಘಾತವಾಗಿದೆ. ದಾವಣಗೆರೆ ನಗರದ ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Ashika S

Recent Posts

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

35 mins ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

57 mins ago

ನಂಜನಗೂಡು ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ: ವಿದ್ಯಾರ್ಥಿನಿ ಬಾಂಧವ್ಯ ತಾಲೂಕಿಗೆ ಪ್ರಥಮ ‌

ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ ಬಂದಿದ್ದು, ನಂಜನಗೂಡಿನ ಸರ್ಕಾರಿ ಆದರ್ಶ ಶಾಲೆಯ ವಿದ್ಯಾರ್ಥಿನಿ ಬಾಂಧವ್ಯ ತಾಲ್ಲೂಕಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ…

1 hour ago

ಲೋಕಸಭೆ ಚುನಾವಣೆ: ಭಾಲ್ಕಿ ಕ್ಷೇತ್ರದಲ್ಲಿ ಅತ್ಯಧಿಕ ಮತದಾನ

ಬೀದರ್‌ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಶೇ 65.45ರಷ್ಟು ಮತದಾನ ದಾಖಲಾಗಿದ್ದು, ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಭಾಲ್ಕಿಯಲ್ಲಿ ಅತಿ ಹೆಚ್ಚು…

2 hours ago

ಕುಡಿಯುವ ನೀರಿನ ಸಮಸ್ಯೆ ನಿವಾರಣೆ: ಮಲಪ್ರಭಾ ಕಾಲುವೆಗೆ ಮೇ 14 ರಿಂದ 23 ರವರೆಗೆ ನೀರು

ಮೇ 14 ರಿಂದ 23 ರವರೆಗೆ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಹಾಗೂ ನರಗುಂದ ಶಾಖಾ ಕಾಲುವೆ ಮೂಲಕ ನವಲಗುಂದ ಅಣ್ಣಿಗೇರಿ,…

2 hours ago

ಬಿಜೆಪಿ ಸಾಮಾಜಿಕ ಜಾಲತಾಣ ಸಂಚಾಲಕ ಪ್ರಶಾಂತ್‌ ಮಾಕನೂರು ಬಂಧನ

ಎಸ್‌ಸಿ, ಎಸ್‌ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂದು ಬಿಜೆಪಿ ತನ್ನ ಎಕ್ಸ್‌ ಖಾತೆಯನ್ನು ವಿಡಿಯೋ ಜಾಹೀರಾತು ಪ್ರಕಟಿಸಿತ್ತು. ಈ ವಿಡಿಯೋ…

2 hours ago