News Karnataka Kannada
Wednesday, May 01 2024
ಕ್ರೈಮ್

ಉತ್ತರ ಕನ್ನಡ: ಆಯತಪ್ಪಿ ಬಾವಿಗೆ ಬಿದ್ದು 3 ವರ್ಷದ ಮಗು ಸಾವು

Uttara Kannada: 3-year-old boy dies after falling into well
Photo Credit : News Kannada

ಉತ್ತರ ಕನ್ನಡ: ಆಟವಾಡುತ್ತಿದ್ದಾಗ ಆಯತಪ್ಪಿ ಬಾವಿಗೆ ಬಿದ್ದು ಮೂರು ವರ್ಷದ ಮಗು ಸಾವನ್ನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಹರಿದೇವನಗರದಲ್ಲಿ ನಡೆದಿದೆ. ಮನೆ ಬಳಿ ಆಟವಾಡುತ್ತಿದ್ದಾಗ ಬಾವಿಗೆ ಬಿದ್ದು ಸ್ತುತಿ (3) ಮೃತಪಟ್ಟಿದ್ದಾಳೆ. ಬಾಲಕಿ ಆಟವಾಡುತ್ತಾ ಬಾವಿ ಬಳಿ ತೆರಳಿದ್ದಾಳೆ. ಈ ವೇಳೆ ಆಯತಪ್ಪಿ ಬಿದ್ದು ಸಾವನ್ನಪ್ಪಿದ್ದಾಳೆ.

ಆದರೆ ಪೋಷಕರಿಗೆ ಇದು ಗಮನಕ್ಕೆ ಬಾರದೇ ಎಲ್ಲ ಕಡೆ ಹುಡುಕಾಟ ನಡೆಸಿದ್ದಾರೆ. ಪೊಷಕರು ಹಾಗೂ ಬಡಾವಣೆಯ ನಿವಾಸಿಗಳೆಲ್ಲ ಮಗು ನಾಪತ್ತೆ ಎಂದು ಹುಡುಕಾಡುವಾಗ ಮಗುವಿನ ಮೃತದೇಹ ಬಾವಿಯಲ್ಲಿ ಪತ್ತೆಯಾಗಿದೆ. ಈ ಕುರಿತು ಕಾರವಾರ ನಗರ ಪೊಲೀಸ್​​​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು