ಬೆಂಗಳೂರು: ಹೆಚ್ಎಸ್ಆರ್ ಲೇಔಟ್ ನಲ್ಲಿ ಪ್ರಿಯಕರನ ಜೊತೆ ಸೇರಿ ಪತ್ನಿ ತನ್ನ ಪತಿಯನ್ನೇ ಕೊಂದ ಘಟನೆ ನಡೆದಿದೆ.
ಸದ್ಯ ಹೆಚ್ಎಸ್ಆರ್ ಲೇಔಟ್ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.ನಂದಿನಿಬಾಯಿ ಮತ್ತು ನಿತೀಶ್ ಕುಮಾರ್ ಬಂಧಿತ ಆರೋಪಿಗಳು. ವೆಂಕಟ್ ನಾಯಕ್(30) ಕೊಲೆಯಾದ ವ್ಯಕ್ತಿ ಇದೇ ತಿಂಗಳ 09ರಂದು ಹೆಚ್ಎಸ್ಆರ್ ಲೇಔಟ್ನ ಮನೆಯಲ್ಲಿ ಆರೋಪಿ ನಂದಿನಿಬಾಯಿ ತನ್ನ ಪ್ರಿಯಕರ ನಿತೀಶ್ ಕುಮಾರ್ ಜೊತೆ ಸೇರಿ ತನ್ನ ಪತಿ ವೆಂಕಟ್ ನಾಯಕ್ ತಲೆ ಮೇಲೆ ರುಬ್ಬುವ ಗುಂಡು ಹಾಕಿ ಕೊಲೆ ಮಾಡಿದ್ದರು.
ನಂದಿನಿ ಬಾಯಿ ಗಂಡ ಮನೆಯಲ್ಲಿ ಇಲ್ಲ ಎಂದು ಹೇಳಿ ಜನವರಿ 09 ರಂದು ಪ್ರಿಯಕರ ನಿತೇಶ್ನನ್ನು ಹೆಚ್ಎಸ್ಆರ್ ಲೇಔಟ್ನ ತನ್ನ ಮನೆಗೆ ಕರೆಸಿಕೊಂಡಿದ್ದಳು. ಈ ವೇಳೆ ಗಂಡ ವೆಂಕಟನಾಯಕ್ ಧಿಡೀರ್ ಮನೆಗೆ ಬಂದಿದ್ದ. ಮನೆಗೆ ಕಾಲಿಡುತ್ತಿದ್ದಂತೆ ರೂಮ್ನಲ್ಲಿ ತನ್ನ ಪತ್ನಿ ಬೇರೊಬ್ಬನ ಜೊತೆ ಆತ್ಮೀಯ ಸಲುಗೆಯಲ್ಲಿದ್ದದನ್ನು ಕಂಡು ಕೋಪಗೊಂಡಿದ್ದ. ಬಳಿಕ ಪತಿ-ಪತ್ನಿ ನಡುವೆ ಗಲಾಟೆಯಾಗಿದ್ದು ಜಗಳ ತಾರಕ್ಕಕ್ಕೇರಿ ಕೊಲೆ ನಡೆದಿದೆ. ನಂದಿನಿ ಹಾಗೂ ಆಕೆಯ ಪ್ರಿಯಕರ ಇಬ್ಬರು ಸೇರಿ ವೆಂಕಟನಾಯಕ್ನ ತಲೆ ಮೇಲೆ ರುಬ್ಬುವ ಗುಂಡು ಎತ್ತಾಕಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ.