Categories: ಕ್ರೈಮ್

ಮಂಡ್ಯ ಲಾಳನಕೆರೆ ಗ್ರಾಮದಲ್ಲಿ ಆನೆದಾಳಿಗೆ ಮಹಿಳೆ ಸಾವು

ಮಂಡ್ಯ: ರಾಜ್ಯದಲ್ಲಿ ಕಾಡುಪ್ರಾಣಿಗಳ ಹಾವಳಿ ವಿಪರೀತವಾಗುತ್ತಿದೆ. ಕೆಲದಿನಗಳ ಹಿಂದೆ ಕೋತಿ ದಾಳಿಯಿಂದ ವ್ಯಕ್ತಿಯೊಬ್ಬರು ಮೃತಪಟ್ಟದ್ದರು. ಇದೀಗ ಮಂಡ್ಯದ ಲಾಳನಕೆರೆ-ಪೀಹಳ್ಳಿ ಗ್ರಾಮದ ಬಳಿ ಕಾಡಾನೆ ತುಳಿತಕ್ಕೆ ರೈತ ಮಹಿಳೆ ಸಾವನ್ನಪ್ಪಿದ್ದಾರೆ. ಲಾಳನಕೆರೆ ಗ್ರಾಮದ ಸಾಕಮ್ಮ ಎಂಬವರು ಇಂದು ಬೆಳಗ್ಗೆ ಜಮೀನಿನ ಬಳಿ ಹೋಗಿದ್ದಾಗ ಅಲ್ಲೇ ಇದ್ದ ಆನೆ ಅವರನ್ನು ಅಟ್ಟಿಸಿಕೊಂಡು ಬಂದು ದಾಳಿ ಮಾಡಿ ಕೊಂದು ಹಾಕಿದೆ. ಒಂಟಿ ಆನೆ ದಾಳಿಗೆ ಸಾಕಮ್ಮ ಮೃತಪಟ್ಟಿದ್ದಾಳೆ ಎಂದು ಗ್ರಾಮಸ್ಥರು ಹೇಳಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿಗಳು ದೌಡಾಯಿಸಿದ್ದಾರೆ.

ಮಹಿಳೆಯನ್ನು ಕೊಂದ ಆನೆಯೂ ಪತ್ತೆಯಾಗಿದ್ದು, ಅದು ತೋಟವನ್ನು ದಾಟಿ ವಿಸಿ ನಾಲೆಯಲ್ಲಿ ಈಜಾಡುತ್ತಿರುವುದು ಕಂಡುಬಂದಿದೆ.

Umesha HS

Recent Posts

ʼಮೇ 18-19 ಹಳ್ಳಿಗಟ್ಟು ಬೋಡ್ ನಮ್ಮೆ: ಮೇ 11 ರಂದು ದೇವ ಕಟ್ಟ್ ಬೀಳುವುದುʼ

ಕೆಸರಿನ ಓಕುಳಿಯ ಹಬ್ಬವೆಂದು ಖ್ಯಾತಿ ಪಡೆದಿರುವ ಹಳ್ಳಿಗಟ್ಟು ಶ್ರೀ ಭದ್ರಕಾಳಿ ಹಾಗೂ ಶ್ರೀ ಗುಂಡಿಯತ್ ಅಯ್ಯಪ್ಪ ದೇವರ ವಾರ್ಷಿಕ ಬೋಡ್…

17 mins ago

ಪೂಜೆಗೆ ಅರಳಿ ಹೂವು ಬಳಕೆ ನಿಲ್ಲಿಸಲು ಟಿಡಿಬಿ ತೀರ್ಮಾನ

ಕೇರಳದ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿಯು (ಟಿಡಿಬಿ) ತನ್ನ ಸುಪರ್ದಿಯಲ್ಲಿರುವ ದೇವಾಲಯಗಳಲ್ಲಿ ಪೂಜೆಗೆ ಅರಳಿ ಹೂವು (ಒಲಿಯಾಂಡರ್‌-ಕಣಗಿಲು ಜಾತಿಗೆ ಸೇರಿದ…

38 mins ago

50 ಕೋ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಮಂತ್ರಿಮಾಲ್‌: ಬೀಗ ಜಡಿದ ಬಿಬಿಎಂಪಿ

ಸರಿ ಸುಮಾರು 50 ಕೋಟಿಗಿಂತ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬೆಂಗಳೂರಿನ ಪ್ರತಿಷ್ಠಿತ ಮಾಲ್‌ಗೆ ಬಿಬಿಎಂಪಿ ಬೆಳ್ಳಂಬೆಳಗ್ಗೆಯೇ  ಬೀಗ…

44 mins ago

ಆಟವಾಡುತ್ತಿದ್ದ ಮಗುವಿಗೆ ಕಚ್ಚಿದ ಬೀದಿ ನಾಯಿ : ಮಹಾನಗರ ಪಾಲಿಕೆ ವಿರುದ್ಧ ಆಕ್ರೋಶ

ಆಟವಾಡುತ್ತಿದ್ದ ಮಕ್ಕಳ ಮೇಲೆ ಎರಗಿ ಬೀದಿ ನಾಯಿಗಳು ಕಚ್ಚಿದ ಘಟನೆ ಬೆಳಗಾವಿ ನ್ಯೂ ಗಾಂಧಿನಗರದಲ್ಲಿ ನಡೆದಿದೆ.

1 hour ago

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ನಾಲ್ಕನೇ ಆರೋಪಿ ಸುಳ್ಯದ ಮುಸ್ತಾಫ ಸೆರೆ

ದೇಶವನ್ನೇ ಬೆಚ್ಚಿಬೀಳಿಸಿದ ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆಯಾಗಿದೆ. ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆ…

1 hour ago

ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಸುಳ್ಯದಲ್ಲಿ ಪತ್ತೆ

ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜು ಅವರನ್ನು ಪೊಲೀಸರು ಸುಳ್ಯದ ಅರಂತೋಡಿನಲ್ಲಿ ಪತ್ತೆ ಹಚ್ಚಿದ್ದಾರೆ

1 hour ago