ಬೆಂಗಳೂರು: ನಗರದ ಅಭಿನಯ ಜಂಕ್ಷನ್ನಲ್ಲಿರುವ ಪೊಲೀಸ್ ಚೌಕಿಯೊಳಗೆ ಇಟ್ಟಿದ್ದ ಮಹಿಳಾ ಪೊಲೀಸ್ ಅಧಿಕಾರಿಯ ಬ್ಯಾಗ್ ಅನ್ನು ಕಳ್ಳರು ಕದ್ದು ತಮ್ಮ ಕೈ ಚಳಕವನ್ನು ಪೊಲೀಸರಿಗೆ ತೋರಿಸಿದ್ದಾರೆ.
ನವೆಂಬರ್ 22 ರಂದು ಕೆಆರ್ ಮಾರ್ಕೆಟ್ ಸಂಚಾರಿ ಪೊಲೀಸ್ ಠಾಣೆಯ ಮಹಿಳಾ ಸಿಬ್ಬಂದಿ ಪೊಲೀಸ್ ಚೌಕಿಯೊಳಗೆ ಬಂದು ಬ್ಯಾಗ್ ಇಟ್ಟು ಬಳಿಕ ಸಂಚಾರ ದಟ್ಟಣೆ ನಿಯಂತ್ರಿಸಲು ಚೌಕಿಯಿಂದ ಹೊರಗೆ ಹೋಗಿದ್ದಾರೆ.
ಇದನ್ನು ಗಮನಿಸಿದ ಖದೀಮರು ಮಹಿಳಾ ಪೊಲೀಸ್ ಸಿಬ್ಬಂದಿಯ ಬ್ಯಾಗ್ ಕದ್ದು ಪರಾರಿಯಾಗಿದ್ದಾರೆ. ಬ್ಯಾಗ್ನಲ್ಲಿ ಜನಸ್ನೇಹಿ ಪೊಲೀಸ್ ವ್ಯವಸ್ಥೆಗೆ ಕೊಟ್ಟಿದ್ದ ಬಾಡಿ ವೊರ್ನ್ ಕ್ಯಾಮೆರಾವನ್ನು ಇಟ್ಟಿದ್ದರು.
ಘಟನೆ ಬಗ್ಗೆ ಮಹಿಳಾ ಪೊಲೀಸ್ ಸಿಬ್ಬಂದಿ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.