ಬೆಂಗಳೂರು: ಗೀಸರ್ ಗ್ಯಾಸ್ ಸೋರಿಕೆಯಾಗಿ ಯುವತಿ ಸಾವನ್ನಪ್ಪಿದ ಘಟನೆ ಬಸವೇಶ್ವರ ನಗರದ ಕೃಷ್ಣ ಕಲ್ಯಾಣ ಮಂಟಪ ಬಳಿ ನಡೆದಿದೆ.
ರಾಜೇಶ್ವರಿ (23) ಮೃತ ಯುವತಿ. ಡಿಸೆಂಬರ್ 20 ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಡಿಸೆಂಬರ್ 20 2 ಗಂಟೆ ಸುಮಾರಿಗೆ ಸ್ನಾನಕ್ಕೆ ತೆರಳಿದ್ದ ರಾಜೇಶ್ವರಿ ಬಹಳ ಸಮಯವಾದರೂ ಹೊರಗಡೆ ಬಂದಿರಲಿಲ್ಲ, ಸ್ವಲ್ಪ ಸಮಯದ ನಂತರ ಮನೆಯವರು ಬಾಗಿಲು ತೆಗೆದು ನೋಡಿದಾಗ ರಾಜೇಶ್ವರಿ ತೀವ್ರ ಅಸ್ವಸ್ಥಳಾಗಿ ಕೆಳಗೆ ಬಿದ್ದಿದ್ದಳು, ಕೂಡಲೇ ಆಕೆಯನ್ನು ಕುಟುಂಬಸ್ಥರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅಷ್ಟರಲ್ಲೇ ಆಕೆ ಮೃತಪಟ್ಟಿದ್ದಾಳೆ.
ಘಟನೆ ಸಂಬಂಧ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.