ಕಾಸರಗೋಡು: ಯುವಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬದಿಯಡ್ಕದಲ್ಲಿ ನಡೆದಿದೆ. ಬದಿಯಡ್ಕ ಶಾಸ್ತ್ರಿ ಕೌಂಪೌಂಡ್ ನ ದಿನೇಶ್ ಆಚಾರ್ಯ (35) ಮೃತಪಟ್ಟವರು.
ಇಂದು ಬೆಳಿಗ್ಗೆ ಮನೆ ಸಮೀಪ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಗುರುವಾರ ರಾತ್ರಿ ಊಟ ಮಾಡಿ ಮಲಗಿದ್ದ ಗಣೇಶ್ ಬೆಳಿಗ್ಗೆ ಮನೆಯವರು ಎದ್ದಾಗ ನಾಪತ್ತೆಯಾಗಿದ್ದರು. ಶೋಧ ನಡೆಸಿದಾಗ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೃತ ದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಶವಾಗಾರದಲ್ಲಿರಿಸಲಾಗಿದೆ. ಬದಿಯಡ್ಕ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.