Categories: ಶಿಕ್ಷಣ

ಸಾಮಾನ್ಯ ಪ್ರವೇಶ ಪರೀಕ್ಷೆ 2023ರ ಫಲಿತಾಂಶ ಪ್ರಕಟ

ಬೆಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ವೃತ್ತಿಪರ ಕೋರ್ಸ್​ಗಳ ಪ್ರವೇಶಕ್ಕೆ ಸಿಇಟಿ ಪರೀಕ್ಷೆ ನಡೆಸಲಾಗಿತ್ತು. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್​ರಿಂದ ಫಲಿತಾಂಶ ಪ್ರಕಟವಾಗಿದೆ. ಬೆಂಗಳೂರಿನ ಮಲ್ಲೇಶ್ವರಂನ ಕೆಇಎ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಪ್ರಕಟಿಸಿದ್ದಾರೆ. ಒಟ್ಟು 2,44,345 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು

ಈ ಬಾರಿ ಪರೀಕ್ಷೆಯಲ್ಲಿ ಒಟ್ಟು 2,44,345 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶುಸಂಗೋಪನೆ, ಯೋಗ & ನ್ಯಾಚುರೋಪತಿ, ಡಿ ಫಾರ್ಮ ಕೋರ್ಸ್,​ ಬಿಎಸ್ಸಿ ನರ್ಸಿಂಗ್​ಗೆ ಪ್ರವೇಶ ಪರೀಕ್ಷೆ ನಡೆದಿತ್ತು. ಈ ಬಾರಿ ಸಿಇಟಿಯಲ್ಲೂ ಬಾಲಕಿಯರದ್ದೇ ಮೇಲುಗೈ. ಇಂಜಿನಿಯರಿಂಗ್ ವಿಭಾಗದಲ್ಲಿ ವಿಘ್ನೇಶ್​ ಪ್ರಥಮ ಸ್ಥಾನ, ಅರ್ಜುನ್ ಕೃಷ್ಣಸ್ವಾಮಿ ದ್ವಿತೀಯ ಸ್ಥಾನ, ಸಮೃದ್ಧ್​ ಶೆಟ್ಟಿ ತೃತೀಯ ಸ್ಥಾನ, ಎಸ್.ಸುಮೇಧ್​ಗೆ 4ನೇ ಸ್ಥಾನ, ಮಾಧವ ಸೂರ್ಯಗೆ 5ನೇ ಸ್ಥಾನ ಪಡೆದುಕೊಂಡಿದ್ದಾರೆ.

ಒಟ್ಟು 129,780 ಬಾಲಕಿಯರು ಕೆಸಿಇಟಿ ಪರೀಕ್ಷೆಗೆ ಹಾಜರಾಗಿದ್ದರು. ಅವರಲ್ಲಿ, 94,946 ವಿದ್ಯಾರ್ಥಿನಿಯರು BNYS ಪರೀಕ್ಷೆಯಲ್ಲಿ ಅರ್ಹತೆ ಪಡೆದಿದ್ದಾರೆ, 106,804 ವಿದ್ಯಾರ್ಥಿನಿಯರು ಎಂಜಿನಿಯರಿಂಗ್‌ನಲ್ಲಿ ಅರ್ಹತೆ ಪಡೆದಿದ್ದಾರೆ, 93,120 ವಿದ್ಯಾರ್ಥಿನಿಯರು BSc ಕೃಷಿ ಮತ್ತು 94,960 ವಿದ್ಯಾರ್ಥಿನಿಯರು ವೆಟರ್ನರಿ ಕೋರ್ಸ್‌ಗೆ ಅರ್ಹತೆ ಪಡೆದಿದ್ದಾರೆ. ಹೆಚ್ಚುವರಿಯಾಗಿ, 108,760 ವಿದ್ಯಾರ್ಥಿನಿಯರು ಬಿಫಾರ್ಮ ಕೋರ್ಸ್‌ಗೆ ಅರ್ಹರಾಗಿದ್ದಾರೆ ಮತ್ತು 108,791 ವಿದ್ಯಾರ್ಥಿನಿಯರು ಫಾರ್ಮಡಿಗೆ ಅರ್ಹತೆ ಪಡೆದಿದ್ದಾರೆ. BSc ನರ್ಸಿಂಗ್ ಕ್ಷೇತ್ರದಲ್ಲಿ 94,972 ವಿದ್ಯಾರ್ಥಿನಿಯರು ಅರ್ಹತೆ ಪಡೆದಿದ್ದಾರೆ.

ಅಭ್ಯರ್ಥಿಗಳು ತಮ್ಮ ಫಲಿತಾಂಶಗಳನ್ನು karresults.nic.in ನಲ್ಲಿ ಪರಿಶೀಲಿಸಬಹುದು.

Ashitha S

Recent Posts

ಗೀತಾಂಜಲಿ ಸಿಲ್ಕ್, ಶಾಂತಿಸಾಗರ್ ಹೊಟೇಲ್‌ ಸಂಸ್ಥಾಪಕ ನೀರೆ ಬೈಲೂರು ಗೋವಿಂದ ನಾಯಕ್ ನಿಧನ

ಉಡುಪಿಯ ಪ್ರತಿಷ್ಠಿತ ಜವಳಿ ಮಳಿಗೆ ‘ಗೀತಾಂಜಲಿ ಸಿಲ್ಕ್’ ಮತ್ತು ಶಾಂತಿಸಾಗರ್ ಹೊಟೇಲ್‌ನ ಸಂಸ್ಥಾಪಕರಾದ ನೀರೆ ಬೈಲೂರು ಗೋವಿಂದ ನಾಯಕ್ (89)…

57 seconds ago

ಸ್ಥಳೀಯ ವಾಹನಗಳಿಗೆ ಟೋಲ್ ಕಡಿತ: ಸ್ಥಳೀಯರಿಂದ ಸಾಸ್ತಾನ ಟೋಲ್ ಗೇಟ್ ಗೆ ಮುತ್ತಿಗೆ

ಕಳೆದ ಹಲವು ದಿನಗಳಿಂದ ಸ್ಥಳೀಯ ವಾಹನಗಳಿಗೆ ಫಾಸ್ಟ್ ಟ್ಯಾಗ್ ನಲ್ಲಿ ಶುಲ್ಕ ಕಡಿತವಾಗುತ್ತಿರುವುದನ್ನು ವಿರೋಧಿಸಿ ಸ್ಥಳೀಯರು ಸಾಸ್ತಾನ ಟೋಲ್ ಗೇಟ್…

16 mins ago

ವಿಮಾನದ ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ : ತುರ್ತು ಭೂ ಸ್ಪರ್ಶ

ಕೆಂಪೇಗೌಡ ವಿಮಾನ ನಿಲ್ದಾಣದಿಂದ ಕೇರಳದ ಕೊಚ್ಚಿಗೆ ಹೊರಟಿದ್ದ ವಿಮಾನದ ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಪರಿಣಾಮ ಏರ್ ಇಂಡಿಯಾ ವಿಮಾನವು…

29 mins ago

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ ಬಿಜೆಪಿ ಮುಖಂಡನ ಬಂಧನ : ಠಾಣೆಗೆ ಹರೀಶ್ ಪೂಂಜ ಮುತ್ತಿಗೆ

ಮೇಲಂತಬೆಟ್ಟು ಅಕ್ರಮ ಕೋರೆಗೆ ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಶಾಸಕ ಹರೀಶ್ ಪೂಂಜ ಆಪ್ತ ಬಿಜೆಪಿ ಯುವ ಮೋರ್ಚಾ ಮುಖಂಡ…

52 mins ago

ರಾತ್ರಿ 1:30 ಆದರೂ ನಿಲ್ಲದ ರೆಡ್​ ಆರ್ಮಿ ಹರ್ಷ; ವಿಡಿಯೋ ಮಾಡಿ ಶೇರ್​ ಮಾಡಿದ ಕೊಹ್ಲಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ 2024ರಲ್ಲಿ ಅದ್ಭುತವನ್ನೇ ಮಾಡಿದೆ. ಸತತ ಪಂದ್ಯಗಳಲ್ಲಿ ಸೋತು ಒಂದು ಹಂತದಲ್ಲಿ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ…

57 mins ago

ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರೆಂಟ್

ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ತಲೆಮರೆಸಿಕೊಂಡಿದ್ದಾರೆ. ಅವರ ವಿರುದ್ಧ ಶನಿವಾರ ಅರೆಸ್ಟ್ ವಾರಂಟ್…

1 hour ago