Categories: ಶಿಕ್ಷಣ

ಶಾಲಾ ವಿದ್ಯಾರ್ಥಿಗಳಿಗೆ ಕೋಟಕ್ ಸುರಕ್ಷಾ ಸ್ಕಾಲರ್‌ಶಿಪ್‌ : ಇಂದೇ ಅರ್ಜಿ ಸಲ್ಲಿಸಿ

ಕೋಟಕ್ ಸೆಕ್ಯೂರಿಟೀಸ್ ಶಾಲಾ ವಿದ್ಯಾರ್ಥಿಗಳಿಗಾಗಿ ಕೋಟಕ್ ಸುರಕ್ಷಾ ಸ್ಕಾಲರ್‌ಶಿಪ್‌ ಪ್ರೋಗ್ರಾಮ್‌ 2024-25 ಅನ್ನು ಘೋಷಣೆ ಮಾಡಿದೆ. ಶಾಲಾ ವಿದ್ಯಾರ್ಥಿಗಳು ಹಣಕಾಸಿನ ನೆರವು ಪಡೆದು ತಮ್ಮ ಶೈಕ್ಷಣಿಕ ಗುರಿಗಳನ್ನು ತಲುಪಿ ಸಾಧನೆ ಮಾಡಲು ಈ ಸ್ಕಾಲರ್‌ಶಿಪ್‌ನ ಸದುಪಯೋಗ ಪಡೆದುಕೊಳ್ಳಲು ಕೋಟಕ್ ಸೆಕ್ಯೂರಿಟೀಸ್‌ ಪ್ರಕಟಣೆಯಲ್ಲಿ ತಿಳಿಸಿದೆ. ಈ ಸ್ಕಾಲರ್‌ಶಿಪ್‌ ಅನ್ನು ಪಡೆಯಲು ಅರ್ಹತೆಗಳೇನು, ಪ್ರಮುಖ ದಿನಾಂಕಗಳು ಯಾವುವು, ಅರ್ಜಿ ವಿಧಾನ ಹೇಗೆ ಎಂಬುದನ್ನು ಈ ಕೆಳಗಿನಂತೆ ತಿಳಿಸಲಾಗಿದೆ.

ಸ್ಕಾಲರ್‌ಶಿಪ್‌ ನೀಡುವ ಕಂಪನಿ: ಕೋಟಕ್ ಸೆಕ್ಯೂರಿಟೀಸ್‌.
ಸ್ಕಾಲರ್‌ಶಿಪ್‌ ಹೆಸರು : ಕೋಟಕ್ ಸುರಕ್ಷಾ ಸ್ಕಾಲರ್‌ಶಿಪ್‌ ಪ್ರೋಗ್ರಾಮ್‌ ( ಸ್ಕೂಲ್‌ ಸ್ಟೂಡೆಂಟ್‌ಗಳಿಗಾಗಿ)
ವಿದ್ಯಾರ್ಥಿವೇತನ ಮೊತ್ತ: ಶಾಲಾ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ.50,000.

ಅರ್ಹತೆಗಳು
– 9 ರಿಂದ 12ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
– ವಿಕಲಚೇತನ ವಿದ್ಯಾರ್ಥಿಗಳಾಗಿರಬೇಕು. ಅವರು ಮಾತ್ರ ಅರ್ಜಿ ಸಲ್ಲಿಸಬಹುದು.
– ಹಿಂದಿನ ಶಿಕ್ಷಣದಲ್ಲಿ ವಿದ್ಯಾರ್ಥಿಗಳು ಕನಿಷ್ಠ ಶೇಕಡ.55 ಅಂಕಗಳನ್ನು ಗಳಿಸಿರಬೇಕು.
– ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ ರೂ.3,20,000 ಮೀರಿರಬಾರದು.
– ದೇಶದಾದ್ಯಂತದ ಯಾವುದೇ ಪಿಡಬ್ಲ್ಯೂಡಿ ವಿದ್ಯಾರ್ಥಿ ಅರ್ಜಿ ಸಲ್ಲಿಸಬಹುದು.
– ಕೋಟಕ್ ಸೆಕ್ಯೂರಿಟೀಸ್‌ ಸಿಬ್ಬಂದಿಗಳ ಮಕ್ಕಳು ಅರ್ಜಿ ಸಲ್ಲಿಸಲು ಅರ್ಹರಲ್ಲ.

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು
ಆಧಾರ್ ಕಾರ್ಡ್‌ / ರೇಷನ್‌ ಕಾರ್ಡ್‌ / ವೋಟರ್‌ ಐಡಿ ಯಾವುದಾದರೊಂದು ಗುರುತಿನ ಚೀಟಿ ಹೊಂದಿರಬೇಕು.
ಪ್ರಸ್ತುತ ಓದುತ್ತಿರುವ ಶಿಕ್ಷಣದ ಪ್ರವೇಶ ದಾಖಲೆ ಇರಬೇಕು.
ಹಿಂದಿನ ವರ್ಷ ಶಿಕ್ಷಣದ ಅಂಕಪಟ್ಟಿ.
ಕುಟುಂಬದ ವಾರ್ಷಿಕ ಆದಾಯ ಪ್ರಮಾಣ ಪತ್ರ.
ವಿಕಲಚೇತನ ವಿದ್ಯಾರ್ಥಿ ಎಂಬ ಪ್ರಮಾಣ ಪತ್ರ.

ಅರ್ಜಿ ಸಲ್ಲಿಸುವುದು ಹೇಗೆ?
– ಶಾಲಾ ವಿದ್ಯಾರ್ಥಿಗಳು (9 ರಿಂದ 12ನೇ ತರಗತಿ ವಿದ್ಯಾರ್ಥಿಗಳು) ಈ ಸ್ಕಾಲರ್‌ಶಿಪ್‌ ಪಡೆಯಲು ‘Apply Online‘ ಲಿಂಕ್ ಕ್ಲಿಕ್ ಮಾಡಿ.
– ತೆರೆದ ವೆಬ್‌ಪೇಜ್‌ನಲ್ಲಿ ‘Kotak Suraksha Scholarship Program for School Students 2024-25’ ಎಂದಿರುವ ಕಾಲಂ ಅಡಿಯಲ್ಲಿ ‘Apply Now’ ಬಟನ್‌ ಕ್ಲಿಕ್ ಮಾಡಿ.
– ನಂತರ ಮೊಬೈಲ್‌ ನಂಬರ್, ಇ-ಮೇಲ್‌ ವಿಳಾಸ, ಜಿಮೇಲ್‌ ಮೂಲಕ ರಿಜಿಸ್ಟ್ರೇಷನ್‌ ಪಡೆಯಲು ವಿಂಡೋ ಓಪನ್‌ ಆಗುತ್ತದೆ.
– ನೀವು ಇಚ್ಚಿಸುವ ಮಾದರಿಯಲ್ಲಿ ರಿಜಿಸ್ಟ್ರೇಷನ್‌ ಪಡೆದು, ನಂತರ ಅರ್ಜಿ ಸಲ್ಲಿಸಿ.
– ಅಗತ್ಯ ದಾಖಲೆಗಳ ಸ್ಕ್ಯಾನ್‌ ಕಾಪಿ ಅಪ್‌ಲೋಡ್‌ ಮಾಡಿ.
– ಅರ್ಜಿ ಪೂರ್ಣಗೊಳಿಸಿ ಮುಂದಿನ ರೆಫರೆನ್ಸ್‌ಗಾಗಿ ಪ್ರಿಂಟ್‌ ತೆಗೆದುಕೊಳ್ಳಿ.

ಅರ್ಜಿ ಸಲ್ಲಿಸಿದವರನ್ನು ಅವರ ಶೈಕ್ಷಣಿಕ ಅಂಕಗಳು ಹಾಗೂ ವಾರ್ಷಿಕ ಆದಾಯದ ಆಧಾರದಲ್ಲಿ ಆಯ್ಕೆ ಮಾಡಲಾಗುತ್ತದೆ. ವಿದ್ಯಾರ್ಥಿಗಳು ಆನ್‌ಲೈನ್‌ ಮೂಲಕ ಮಾತ್ರ ಅರ್ಜಿ ಹಾಕಲು ಅವಕಾಶ ಇರುತ್ತದೆ.

Nisarga K

Recent Posts

ಆಧಾರ್‌ ದುರುಪಯೋಗ: ಕರ್ನಾಟಕದಿಂದ 2.95 ಲಕ್ಷ ದೂರು ದಾಖಲು

ಜನರು ದಾಖಲೆ ದುರುಪಯೋಗ ಪಡಿಸಿಕೊಂಡಿರುವ ಸೈಬರ್ ವಂಚಕರು, ಒಂದೇ ಸಂಖ್ಯೆ ಸಿಮ್‌ಗಳನ್ನು ಖರೀದಿಸಿರುವ ಸಂಬಂಧ ಟೆಲಿಕಾಂ ಅನಾಲಿಟಿಕಲ್‌ ಫಾರ್ ಫ್ರಾಡ್‌…

6 mins ago

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ: ಆರೆಂಜ್, ಯೆಲ್ಲೋ ಅಲರ್ಟ್‌ ಘೋಷಣೆ

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಿಂಚು ಮತ್ತು…

24 mins ago

ಆರೋಗ್ಯದ ವೃದ್ಧಿಗೆ ಕಾಮಕಸ್ತೂರಿ ಬೀಜದ ಪಾನಕ

ಮನುಷ್ಯ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ ಅದೇ ರೀತಿ ಖಾಲಿ ಹೊಟ್ಟೆಯಲ್ಲಿ ಕಾಮಕಸ್ತೂರಿ ಬೀಜಗಳನ್ನು ಕುಡಿಯುವುದು ಬಹಳಷ್ಟು…

32 mins ago

ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ ಹೀಗಿದೆ!

ಚಿನ್ನ ಮತ್ತು ಬೆಳ್ಳಿ ಬೆಲೆ ಈ ವಾರವೂ ಏರಿಳಿತಗಳನ್ನು ಕಂಡಿದ್ದು, ಬೆಳ್ಳಿ ಬೆಲೆ ಕಳೆದ 10 ದಿನದಲ್ಲಿ ಗ್ರಾಮ್​ಗೆ 4…

51 mins ago

ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ಗೆದ್ದು ಬೀಗಿದ ಆರ್​​​ಸಿಬಿ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್​ ಪಂದ್ಯದಲ್ಲಿ ವಿರಾಟ್…

1 hour ago

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

9 hours ago