Categories: ಶಿಕ್ಷಣ

ಪಠ್ಯಪುಸ್ತಕ ಪರಿಷ್ಕರಿಸಿ ಆದೇಶ ಹೊರಡಿಸಿದ ಸರ್ಕಾರ

ಬೆಂಗಳೂರು: ಕಾಂಗ್ರೆಸ್​ ಅಧಿಕಾರಕ್ಕೆ ಬಂದ ಮೇಲೆ ಪಠ್ಯಪುಸ್ತಕ ಪರಿಷ್ಕರಣೆ  ವಿಚಾರ ಸಾಕಷ್ಟು ಚರ್ಚೆಯಾಗುತ್ತಿದೆ. ಪಠ್ಯಪುಸ್ತಕ ಪರಿಷ್ಕರಣೆ ಕುರಿತ ನಿರ್ಧಾರಕ್ಕೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತ ನಂತರ ಇದೀಗ ರಾಜ್ಯ ಸರ್ಕಾರ ಪರಿಷ್ಕರಣೆ ಮಾಡಿ ಆದೇಶ ಹೊರಡಿಸಿದೆ.

ಸಮಾಜ ವಿಜ್ಞಾನ ಪಠ್ಯಪುಸ್ತಕದ 9 ಪಾಠಗಳನ್ನು ಕೈ ಬಿಡಲಾಗಿದೆ. ಕನ್ನಡ ಭಾಷಾ ಪುಸ್ತಕದಲ್ಲಿ 9 ಪಾಠಗಳಿಗೆ ಕೋಕ್​ ನೀಡಲಾಗಿದೆ. ಆರ್​​ಎಸ್​ಎಸ್​ ಸ್ಥಾಪಕ ಕೇಶವ್ ಹೆಡ್ಗೇವಾರ್ ಅವರು ಬರೆದಿದ್ದ “ನಿಜವಾದ ಆದರ್ಶಪುರುಷ ಯಾರಾಗಬೇಕು” ಪಠ್ಯ, ಚಕ್ರವರ್ತಿ ಸೂಲಿಬೆಲೆಯವರು ಬರೆದಿದ್ದ ತಾಯಿ ಭಾರತಿಯ ಅಮರ ಪುತ್ರರು ಪಾಠವನ್ನು ಕೈ ಬಿಡಲಾಗಿದೆ. ಇನ್ನು ಶತಾವಧಾನಿ ಆರ್ ಗಣೇಶ್ ಅವರ ಶ್ರೇಷ್ಠ ಭಾರತೀಯ ಚಿಂತನೆಗಳು, ನಿರ್ಮಲಾ ಸುರತ್ಕಲ್, ರಮಾನಂದ ಆಚಾರ್ಯರ, ಪಾರಂಪಳ್ಳಿ ನರಸಿಂಹ ಐತಾಳ, ಲಕ್ಷ್ಮೀಶ, ಕೆಟಿ ಗಟ್ಟಿ ಪಾಠ ಮತ್ತು ಪಿ ಸತ್ಯನಾರಾಯಣ ಭಟ್ಟರ ಗದ್ಯಕ್ಕೂ ಕತ್ತರಿ ಹಾಕಲಾಗಿದೆ.

ಸಾವಿತ್ರಿಬಾಯಿ ಫುಲೆ, ಜವಹರಲಾಲ್ ನೆಹರು, ಡಾ. ಬಿಆರ್​​ ಅಂಬೇಡ್ಕರ್, ಸುಕುಮಾರಸ್ವಾಮಿ, ಸಾರಾ ಅಬೂಬ್ಕರ್, ವಿಜಯಮಾಲಾ ರಂಗನಾಥ್ ಅವರ ಪಾಠಗಳನ್ನು ಸೇರಿಸಲಾಗಿದೆ. ವಾಲ್ಮೀಕಿ ಮಹರ್ಷಿ, ಉರುಸ್​ಗಳಲ್ಲಿ ಭಾವೈಕ್ಯತೆ ಪಾಠಗಳನ್ನು ಸೇರಿಸಲಾಗಿದೆ. ಸಮಾಜ ವಿಜ್ಞಾನ ವಿಷಯದ ಪಠ್ಯದಲ್ಲೂ ಹಲವು ಅಧ್ಯಾಯಗಳನ್ನು ಸೇರ್ಪಡೆ ಮಾಡಲಾಗಿದೆ. ವೇದ ಕಾಲದ ಸಂಸ್ಕೃತಿ, ಹೊಸ ಧರ್ಮಗಳ ಉದಯ, ಮಿರ್ಜಾ ಇಸ್ಮಾಯಿಲ್, ಸರ್​​ ಎಂ ವಿಶ್ವೇಶ್ವರಯ್ಯ, ಒಡೆಯರ್ ಕುರಿತ ಪಾಠಗಳನ್ನು ಸೇರಿಸಲಾಗಿದೆ.

Ashitha S

Recent Posts

ರಘುಪತಿ ಭಟ್ ಆರೋಪಕ್ಕೆ ಡಾ. ಧನಂಜಯ ಸರ್ಜಿ ತಿರುಗೇಟು

ಶಿವಮೊಗ್ಗ ಹರ್ಷಾ ಹತ್ಯೆ ವೇಳೆ ಕಮ್ಯುನಿಸ್ಟರ ಜೊತೆ ಸರ್ಜಿ ಪೌಂಡೇಷನ್ ಶಾಂತಿ ನಡಿಗೆ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ನೈರುತ್ಯ ಪದವೀಧರ…

4 mins ago

ಕುಡಿಯುವ ನೀರಿನ ಸಮಸ್ಯೆ: ಕಲುಷಿತ ನೀರು ಸೇವಿಸಿ 114 ಮಂದಿಗೆ ಕಾಲರಾ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಧಾನಸಭೆ ಕ್ಷೇತ್ರವಾದ ವರುಣದ ತಗಡೂರು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ಅಲ್ಲಿನ ಜನ…

11 mins ago

ಆರ್‌ಸಿಬಿ ಆಟಗಾರರಿಗೆ ಶೇಕ್ ಹ್ಯಾಂಡ್ ಮಾಡದೇ ಮೈದಾನದಿಂದ ತೆರಳಿದ ಧೋನಿ..!

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 27 ರನ್​ಗಳಿಂದ…

21 mins ago

ಬಿಸಿಲಿಗೆ ಸಿಲುಕಿ ಕೆಂಪಾಗಿದ್ದ ಚಾಮುಂಡಿಬೆಟ್ಟಕ್ಕೀಗ ಬಂದಿದೆ ಹಸಿರು ಕಳೆ

ಬೇಸಿಗೆಯ ಬಿಸಿಲಿಗೆ ಸಿಲುಕಿ ಕೆಂಪಾಗಿದ್ದ ಚಾಮುಂಡಿಬೆಟ್ಟಕ್ಕೀಗ ವರುಣನ ಕೃಪೆಯಿಂದ ಹಸಿರು ಕಳೆ ಬಂದಿದೆ.  ಜನವರಿಯಿಂದ ಏಪ್ರಿಲ್ ತನಕವೂ ಮಳೆ ಸುರಿಯದ…

32 mins ago

ಆರ್​ಸಿಬಿಗೆ ಟ್ವೀಟ್​ ಮೂಲಕ ವಿಜಯ್​ ಮಲ್ಯ ಅಭಿನಂದನೆ

ಶನಿವಾರ ತಡರಾತ್ರಿ ನಡೆದ ಐಪಿಎಲ್​ನ ರೋಚಕ ಪಂದ್ಯದಲ್ಲಿ ಕನ್ನಡಿಗರ ನೆಚ್ಚಿನ ತಂಡವಾದ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಹಾಲಿ ಚಾಂಪಿಯನ್​…

42 mins ago

ತಾಯಿಯ ಶವದ ಜೊತೆಗೆ ನಾಲ್ಕು ದಿನ ಕಳೆದಿದ್ದ ಬುದ್ಧಿಮಾಂದ್ಯ ಪುತ್ರಿಯೂ ಮೃತ್ಯು

ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿದ ತನ್ನ ತಾಯಿಯ ಮೃತದೇಹದ ಮುಂದೆ ಅನ್ನ ನೀರು ಇಲ್ಲದೆ ಇದ್ದ ವಿಶೇಷಚೇತನ ಮಗಳು ಕೂಡ…

48 mins ago