ಮೂಡುಬಿದಿರೆ : ದೀಪಾವಳಿಯ ಪ್ರಯುಕ್ತ ನಡೆಯಲಿರುವ ಅಭ್ಯಂಗ ಸಪ್ತಾಹಕ್ಕೆ ಆಳ್ವಾಸ್ ಆಯುರ್ವೇದ ಆಸ್ಪತ್ರೆಯ ವೈದ್ಯಾಧಿಕಾರಿಗಳಾದ ಡಾ. ಮಂಜುನಾಥ್ ಭಟ್ ರವರು ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಸಹವೈದ್ಯಾಧಿಕಾರಿಗಳಾದ ಡಾ. ವಿಕ್ರಮ್ ಕುಮಾರ್, ಪಿಜಿ ಡೀನ್ ಡಾ. ರವಿಪ್ರಸಾದ್ ಹೆಗ್ಡೆ, ಪಿಎಚ್ಡಿ ಡೀನ್ ಡಾ. ಕೃಷ್ಣಮೂರ್ತಿ ಎಂ. ಎಸ್. ಪಂಚಕರ್ಮ ವಿಭಾಗದ ಮುಖ್ಯಸ್ಥ ಡಾ. ಪ್ರವೀಣ್ ಬಿ. ಎಸ್. ಕಾಯಕಲ್ಪ ವಿಭಾಗದ ಮುಖ್ಯಸ್ಥೆ ಡಾ. ರೋಹಿಣಿ ಪುರೋಹಿತ್, ಪಿಜಿ ವಿದ್ಯಾರ್ಥಿಗಳು, ಇಂಟರ್ನಿ ವಿದ್ಯಾರ್ಥಿಗಳು ಹಾಗೂ ಆಸ್ಪತ್ರೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಈ ಅಭ್ಯಂಗ ಸಪ್ತಾಹವು ಅಕ್ಟೋಬರ್ ೩೧ ರಿಂದ ನವೆಂಬರ್ ೭ ರವರೆಗೆ ಮೂಡುಬಿದಿರೆಯ ವಿದ್ಯಾಗಿರಿಯಲ್ಲಿರುವ ಆಳ್ವಾಸ್ ಆಯುರ್ವೇದ ಆಸ್ಪತ್ರೆಯ ಕಾಯಕಲ್ಪ ವಿಭಾಗದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಅಭ್ಯಂಗ, ಸ್ವೇದನ, ರೋಗನಿರೋಧಕ ಶಕ್ತಿ ಹೆಚ್ಚಿಸಲು ಕಾಂಪ್ಲಿಮೆಂಟರಿ ಪ್ಯಾಕ್ ಮುಂತಾದ ಸೌಲಭ್ಯಗಳನ್ನು ರಿಯಾಯಿತಿ ದರದಲ್ಲಿ ನೀಡಲಾಗಿದೆ.
ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ತಲೆಮರೆಸಿಕೊಂಡಿದ್ದಾರೆ. ಅವರ ವಿರುದ್ಧ ಶನಿವಾರ ಅರೆಸ್ಟ್ ವಾರಂಟ್…
ಭೀಕರ ಸರಣಿ ಅಪಘಾತವು ಬೆಳಗಿನ ಜಾವ 4 ಗಂಟೆ ಸಮಯದಲ್ಲಿ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಬಳಿ ನಡೆದಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಸೋಲು ಕಂಡಾಗ ಸ್ಯಾಂಡಲ್ವುಡ್ ನಟ ದಿವಂಗತ ಪುನೀತ್ ರಾಜ್ಕುಮಾರ್ ಅವರ ಪತ್ನಿ ಅಶ್ವಿನಿಯವರನ್ನು…
ಸಿನಿ, ರಾಜಕೀಯ, ಕ್ರೀಡಾ ಕ್ಷೇತ್ರದ ದಿಗ್ಗಜರ ಬದುಕಿನ ಮೇಲೆ ಸಿನಿಮಾ ಮಾಡುವುದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ಆದರೆ ಇತ್ತೀಚೆಗೆ…
ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಕೂತು ಸೈಬರ್ ವಂಚನೆ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರ…
ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನವಾಗಿ ಜಾಮೀನಿನ ಮೇಲೆ ಹೊರ ಬಂದಿರುವ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಮುಖ್ಯಮಂತ್ರಿ…