News Karnataka Kannada
Monday, May 13 2024
ಆರೋಗ್ಯ

ಆಹಾರದಲ್ಲಿ ಹೆಚ್ಚು ಉಪ್ಪು ಬಳಕೆಯಿಂದ ಪಾರ್ಶ್ವವಾಯು ಅಪಾಯ ಜಾಸ್ತಿ

Photo Credit :

ಆಹಾರದಲ್ಲಿ ಹೆಚ್ಚು ಉಪ್ಪು ಬಳಕೆಯಿಂದ ಪಾರ್ಶ್ವವಾಯು ಅಪಾಯ ಜಾಸ್ತಿ

ನ್ಯೂಯಾರ್ಕ್: ಹದಿಹರೆಯದಲ್ಲಿ ಅತಿ ಹೆಚ್ಚು ಉಪ್ಪು ಬಳಕೆಯಿಂದ ಪ್ರೌಢಾವಸ್ಥೆಯಲ್ಲಿ ಪಾರ್ಶ್ವವಾಯು ಎದುರಾಗುವ ಸಾಧ್ಯತೆ ಹೆಚ್ಚಿರುತ್ತದೆ ಎಂದು ಹೊಸ ಅಧ್ಯಯನ ವರದಿ ಹೇಳಿದೆ.

ಅತಿ ಹೆಚ್ಚು ಉಪ್ಪು ಬಳಕೆ ಹೃದಯರಕ್ತನಾಳದ ಮೇಲೆ ಪರಿಣಾಮ ಬೀರಲಿದ್ದು, ಆರ್ಟರಿ (ಅಪಧಮನಿಗಳು) ಗಟ್ಟಿಯಾಗುವಂತೆ ಮಾಡುತ್ತದೆ. ಇದರಿಂದಾಗಿ ಹೃದಯಾಘಾತ ಮತ್ತು ಸ್ಟ್ರೋಕ್ ಅಪಾಯ ಎದುರಾಗುವ ಸಾಧ್ಯತೆಗಳಿವೆ ಎಂದು ಸಂಶೋಧಕರು ಹೇಳಿದ್ದಾರೆ.

ಅತಿ ಹೆಚ್ಚು ಸೋಡಿಯಂ ಸೇವನೆಯಿಂದ ಲೋವರ್ ಬ್ರಾಂಕಿಯಲ್ ಆರ್ಟರಿ(ಕುಗ್ಗಿದ್ದ ಅಪಧಮನಿ) ಸಮಸ್ಯೆ ಎದುರಾಗಲಿದೆ. ಈ ಹಿನ್ನೆಲೆಯಲ್ಲಿ ಹದಿಹರೆಯದವರು ಹೆಚ್ಚು ಉಪ್ಪು ಬಳಕೆ ಮಾಡುವುದನ್ನು ಕಡಿಮೆ ಮಾಡಬೇಕೆಂದು ಸಂಶೋಧಕರು ಸಲಹೆ ನೀಡಿದ್ದಾರೆ.

ಸ್ಯಾನ್ ಫ್ರಾನ್ಸಿಸ್ಕೊದಲ್ಲಿ ನಡೆದ 2017 ರ ಪೀಡಿಯಾಟ್ರಿಕ್ ಅಕಾಡೆಮಿಕ್ ಸೊಸೈಟಿ ಸಭೆಯಲ್ಲಿ ಸಂಶೋಧಕರು ಈ ಕುರಿತು ವಿಸ್ತೃತವಾಗಿ ವಿವರಿಸಿದ್ದಾರೆ. ಸುಮಾರು 775 ಜನರನ್ನು ಸಮೀಕ್ಷೆಗೊಳಪಡಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು