News Karnataka Kannada
Monday, April 29 2024
ಬೆಂಗಳೂರು ಗ್ರಾಮಾಂತರ

ಡೆಂಗ್ಯೂ, ಚಿಕೂನ್ ಗುನ್ಯಾ ನಿಯಂತ್ರಣಕ್ಕೆ ಜಿಪಂ ಸಿಇಓ ಸೂಚನೆ

Bengalore
Photo Credit :

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಡೆಂಗ್ಯೂ ಮತ್ತು ಚಿಕೂನ್ ಗುನ್ಯಾ ರೋಗಗಳ ನಿಯಂತ್ರಣಕ್ಕೆ ಅಗತ್ಯ  ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಬೆಂಗಳೂರು ಗ್ರಾಮಾಂತರ ಜಿಪಂ ಸಿಇಓ ಕೆ.ರೇವಣಪ್ಪ ಅವರು ತಿಳಿಸಿದರು.

ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ  ಕಚೇರಿಯ ವಿಡಿಯೋ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಅಂಗವಾಗಿ ವಿವಿಧ ಇಲಾಖೆಗಳ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ, ಅವರು ಮಾತನಾಡಿ, ಜಿಲ್ಲೆಯಲ್ಲಿ ವರದಿಯಾಗುವ ಎಲ್ಲಾ ಜ್ವರ ಪ್ರಕರಣಗಳಿಗೆ ರಕ್ತಲೇಪನ ಸಂಗ್ರಹಿಸುವುದು.  ಶಂಕಿತ ಡೆಂಗ್ಯೂ, ಚಿಕೂನ್ ಗುನ್ಯಾ ಪ್ರಕರಣಗಳಿಗೆ ರಕ್ತಮಾದರಿ ಸಂಗ್ರಹಿಸಿ ಪ್ರಯೋಗಾಲಯಗಳಿಗೆ ತಲುಪಿಸಬೇಕು. ಲಾರ್ವಾ ಸಮೀಕ್ಷೆ ಕಾರ್ಯವನ್ನು ವೈದ್ಯಾಧಿಕಾರಿಗಳು ಮತ್ತು ತಾಲ್ಲೂಕು ಆರೋಗ್ಯಾಧಿಕಾರಿಗಳು ಮೇಲ್ವಿಚಾರಣೆ ನಡೆಸಿ ಮೇಲ್ವಿಚಾರಣೆ ನಡೆಸಬೇಕು ಎಂದರು.

ಸಮುದಾಯದಲ್ಲಿ ವಿವಿಧ ಸಭೆಗಳನ್ನು ಏರ್ಪಡಿಸಿ ಚುನಾಯಿತ ಪ್ರತಿನಿಧಿಗಳಿಗೆ, ಅಧ್ಯಾಪಕ ವೃಂದ, ವಿದ್ಯಾರ್ಥಿಗಳಿಗೆ,  ಸಾರ್ವಜನಿಕರಿಗೆ, ಈ ರೋಗಗಳ ಬಗ್ಗೆ ಅರಿವು ಮೂಡಿಸಬೇಕು. ಸಾಂಕ್ರಾಮಿಕ ರೋಗಗಳ ಬಗ್ಗೆ ಕಾಲ ಕಾಲಕ್ಕೆ ನೀಡುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಗ್ರಾಮ ಪಂಚಾಯಿತಿ, ನಗರಸಭೆ, ಪುರಸಭೆ ವ್ಯಾಪ್ತಿಯಲ್ಲಿ ಕುಡಿಯುವ ನೀರು ಸರಬರಾಜು ಮಾಡುವ ಮೊದಲು ಸೂಕ್ತವಾದ      ಪ್ರಮಾಣದಲ್ಲಿ ಕ್ಲೋರಿನೇಶನ್ ಮಾಡಬೇಕು. ಗುಂಡಿಗಳು ಹಾಗೂ ತಗ್ಗುಗಳನ್ನು ಮುಚ್ಚಿಸುವುದರ ಮೂಲಕ ನೀರು ಸಂಗ್ರಹವಾಗದಂತೆ ತಡೆಗಟ್ಟಬೇಕು. ಸೊಳ್ಳೆ ಉತ್ಪತ್ತಿ ತಾಣಗಳ ನಿವಾರಣೆ ಹಾಗೂ ಗ್ರಾಮ ನೈರ್ಮಲ್ಯ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ, ಸೊಳ್ಳೆ ಉತ್ಪತ್ತಿ ತಾಣಗಳನ್ನು ನಿಯಂತ್ರಿಸಿ ಎಂದರಲ್ಲದೆ, ಸಾರ್ವಜನಿಕ ನಲ್ಲಿಗಳು ಹಾಗೂ ಕೊಳವೆ ಬಾವಿಗಳಿಂದ ನೀರು ಸೋರಿಕೆಯಾಗದಂತೆ ಸರಬರಾಜು ಮಾಡಲು ಕ್ರಮ ಕೈಗೊಳ್ಳುವುದು.

ಚರಂಡಿಯಲ್ಲಿ ನೀರು ಸರಾಗವಾಗಿ ಹರಿದು ಹೋಗುವಂತೆ ವ್ಯವಸ್ಥೆ ಮಾಡುವುದರ ಜೊತೆಗೆ ಈಗಾಗಲೆ ಇರುವ ಚರಂಡಿಗಳಲ್ಲಿ ಹುದುಗಿರುವ ಹೂಳನ್ನು ಎತ್ತಿ ನೀರು ಸರಾಗವಾಗಿ ಹರಿಯುವಂತೆ ನೋಡಿಕೊಳ್ಳುಬೇಕು. ಗ್ರಾಮ ಹಾಗೂ ನಗರ ಪ್ರದೇಶಗಳಲ್ಲಿ  ಉತ್ಪತ್ತಿಯಾಗುವ ಘನ ತ್ಯಾಜ್ಯ ವಸ್ತುಗಳು, ಮತ್ತು ನೀರು ಶೇಖರಗೊಳ್ಳುವ ಇತರೆ ಅನುಪಯುಕ್ತ ವಸ್ತುಗಳ ಸೂಕ್ತ ವಿಲೇವಾರಿ ಕೈಗೊಳ್ಳಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಹಾಗೂ ನಗರಾಭಿವೃದ್ಧಿ ಇಲಾಖೆಯವರಿಗೆ ಸೂಚಿಸಿದರು.

ಶೈಕ್ಷಣಿಕ ಪಠ್ಯ ಕ್ರಮಗಳಲ್ಲಿ ಮತ್ತು ಮುಂಜಾನೆ ಪ್ರಾರ್ಥನೆ ವೇಳೆಯಲ್ಲಿ  ಸಾಂಕ್ರಾಮಿಕ ರೋಗಗಳ  ಬಗ್ಗೆ ವಿವರಗಳುಳ್ಳ  ಮಾಹಿತಿಗಳನ್ನು ಅಳವಡಿಸಿ, ರೋಗಗಳ  ಹರಡುವಿಕೆ ಹಾಗೂ ನಿಯಂತ್ರಣದ ಬಗ್ಗೆ ಜಾಗೃತಿ ಮೂಡಿಸಬೇಕು ಹಾಗೂ ಶಿಕ್ಷಣ ಸಂಸ್ಥೆಗಳ, ವಸತಿ ನಿಲಯಗಳ ಒಳಾಂಗಣ ಮತ್ತು ಹೊರಾಂಗಣ ಪ್ರದೇಶಗಳಲ್ಲಿ ಶುಚಿತ್ವ ಕಾಪಾಡಬೇಕು ಮತ್ತು ಸೊಳ್ಳೆಗಳ ಉತ್ಪತ್ತಿ ತಾಣಗಳನ್ನು ನಿರ್ಮೂಲನೆ ಮಾಡಲು ಕ್ರಮ ವಹಿಸಬೇಕೆಂದು ಶಿಕ್ಷಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರಲ್ಲದೆ, ಅಂಗನವಾಡಿ ಕಾರ್ಯಕರ್ತರುಗಳ ಮೂಲಕ ಸಾಂಕ್ರಾಮಿಕ ರೋಗಗಳ ಕುರಿತು ಹಾಗೂ ವೈಯುಕ್ತಿಕ ರಕ್ಷಣೆ ಮತ್ತು ಪರಿಸರ ನೈರ್ಮಲ್ಯದ ಬಗ್ಗೆ ಸಮುದಾಯದಲ್ಲಿ ಜಾಗೃತಿ ಮೂಡಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗೆ ತಿಳಿಸಿದರು.

ಸಭೆಯಲ್ಲಿ ಮಲೇರಿಯಾ ನಿಯಂತ್ರಣಾಧಿಕಾರಿ ಡಾ. ಧರ್ಮೇಂದ್ರ, ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಗಂಗಮಾರೇಗೌಡ  ಸೇರಿದಂತೆ ತಾಲ್ಲೂಕು ಆರೋಗ್ಯಾಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು