Categories: ಆರೋಗ್ಯ

ನ್ಯೂಟ್ರಿಷನ್ ಆಹಾರಗಳು ನಮ್ಮ ದೇಹಕ್ಕೆ ಎಷ್ಟು ಅವಶ್ಯಕ

ನ್ಯೂಟ್ರಿಷನ್ ಆಹಾರಗಳು ನಮ್ಮ ದೇಹಕ್ಕೆ ತುಂಬಾ ಉಪಯುಕ್ತ ಆದರೆ ಅವುಗಳನ್ನು ಎಷ್ಟು ಪ್ರಮಾಣದಲ್ಲಿ ಸೇವಿಸ ಬೇಕು ಎನ್ನುವುದು ನಮ್ಮ ಜೀರ್ಣಕ್ರಿಯೆಯ ಮೇಲೆ ನಿರ್ಧಾರವಾಗುತ್ತದೆ.

ನ್ಯೂಟ್ರಿಷನ್ ಆಹಾರಗಳು ಅತ್ಯಂತ ಹೆಚ್ಚು ಪ್ರೋಟಿನ್ ಹಾಗೂ ಕೊಬ್ಬನ್ನು ಹೊಂದಿದ್ದರೆ ನಮ್ಮ ಜೀರ್ಣಕ್ರಿಯೆಗೆ ತೊಂದರೆಯಾಗುವ ಸಂಭವವಿರುತ್ತದೆ. ಹೀಗಾಗಿ ಪ್ರತಿ ಸಮಯದಲ್ಲೂ ಕಾರ್ಬೊಹೈಡ್ರೇಟ್ಸ್ ಹಾಗೂ ಪ್ರೋಟಿನ್‍ಗಳನ್ನು ಸಮದೂಗಿಸಿಕೊಂಡು ಹೋಗುವಂತಹ ಆಹಾರಗಳನ್ನು ತೆಗೆದುಕೊಳ್ಳುವುದು ಉತ್ತಮ ಎಂದು ಕಾಕುಂಜೆ ಆಯುರ್ವೇದಿಕ್ ವೆಲ್ ನೆಸ್ ಕ್ಲಿನಿಕ್ ವೈದ್ಯೆ ಡಾ. ಅನುರಾಧ ಹೇಳಿದ್ದಾರೆ.
ಊಟದ ನಂತರ ಎದೆ ಉರಿ, ಪದೇ ಪದೇ ತೇಗು ಬರುವುದು, ಹೊಟ್ಟೆ ಕಟ್ಟಿದಂತಾಗುವುದು, ಮಲಬದ್ಧತೆ ಸಮಸ್ಯೆಗಳು ಉಂಟಾದಾಗ ನಮ್ಮ ಜೀರ್ಣಕ್ರಿಯೆ ಸರಿಯಾಗಿ ನಡೆಯುತ್ತಿಲ್ಲ ಎಂದರ್ಥ.

ಮತ್ತೆ ಹಲವಾರು ಬಾರಿ ನಾವು ಮಾಡುವ ಕೆಲಸದ ಮೇಲೆ ನಮ್ಮ ಜೀರ್ಣಕ್ರಿಯೆ ನಿರ್ಭರವಾಗಿರುತ್ತದೆ. ಇಡೀ ದಿನ ಕೂತಲ್ಲಿಯೇ ಕೆಲಸ ಮಾಡುವವರಿಗೆ ಬೊಜ್ಜು, ಹೈಪರ್‍ಟೆನ್‍ಷನ್ ಮುಂತಾದ ಸಮಸ್ಯೆಗಳು ಪ್ರಾರಂಭವಾಗುತ್ತದೆ. ಇಂತಹ ಸಮಯದಲ್ಲಿ ನಾವು ತಿನ್ನುವ ಆಹಾರದಲ್ಲಿ ತರಕಾರಿಯ ಅಂಶಗಳನ್ನು ಹೆಚ್ಚು ಮಾಡಬೇಕಾಗುತ್ತದೆ. ಇದರಿಂದ ಪ್ರೋಟಿನ್ ಹಾಗೂ ಕೊಬ್ಬನ್ನು ಸರಿಯಾದ ಪ್ರಮಾಣದಲ್ಲಿ ನಮ್ಮ ದೇಹದಲ್ಲಿ ಸಮದೂಗಿಸಿಕೊಳ್ಳಬಹುದು.

ತುಂಬಾ ತಡವಾಗಿ ಊಟ ಮಾಡುವುದು ಕೂಡ ನಮ್ಮ ಜೀರ್ಣಕ್ರಿಯೆಗೆ ಬಹಳಷ್ಟು ತೊಂದರೆಗಳನ್ನು ಉಂಟುಮಾಡುತ್ತದೆ. ಇದರಿಂದ ಗ್ಯಾಸ್ರ್ಟಿಕ್ ಸಮಸ್ಯೆಗಳು, ಬೆಳಗಿನ ಜಾವದಲ್ಲಿ ದೇಹಕ್ಕೆ ಆಯಾಸವಾದಂತೆ ಅನುಭವವಾಗುವಂತಹ ಸಮಸ್ಯೆಗಳನ್ನು ಉಂಟುಮಾಡುತ್ತದೆ.
ಊಟದ ಅಥವಾ ಬೆಳಗ್ಗಿನ ತಿಂಡಿ ತಿನ್ನುವ ಮೊದಲು ಸ್ನಾನ ಮಾಡಿಕೊಳ್ಳುವುದು ನಮ್ಮ ದೇಹದ ಜೀರ್ಣಕ್ರಿಯೆಯನ್ನು ಉತ್ತಮವಾಗಿಸಲು ಸಹಕಾರಿಯಾಗುತ್ತದೆ.

Ashika S

Recent Posts

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

12 mins ago

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

33 mins ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆ ಆಗಬೇಕು: ಪ್ರಹ್ಲಾದ್ ಜೋಶಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ವಿಚಾರ, ಸಂಪೂರ್ಣ ಈ ಕೇಸ್ ನಲ್ಲಿ ಅತ್ಯಂತ ಗೊಂದಲವಿದೆ. ನಮ್ಮ ಪಾರ್ಟಿ ಹಾಗೂ…

57 mins ago

ಬಿರುಗಾಳಿ ಮಳೆಗೆ ಉರುಳಿ ಬಿದ್ದ ಬೃಹತ್ ಅರಳಿ ಮರ: ನಾಲ್ಕು ಮನೆಗಳು ಜಖಂ

ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಅರಳಿ ಮರವೊಂದು ಬೇರು ಸಮೇತ ನಾಲ್ಕು ಮನೆಗಳ ಮೇಲೆ ಉರುಳಿ ಬಿದ್ದು ಮನೆಗಳು…

1 hour ago

ಕೇಜ್ರಿವಾಲ್‌ಗೆ ಷರತ್ತು ವಿಧಿಸಿ ಜಾಮೀನು ನೀಡಿದ ಸುಪ್ರೀಂಕೋರ್ಟ್‌

ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟ್‌ ಮಧ್ಯಂತ ಜಾಮೀನು ನೀಡಿದ್ದು, ಕೆಲವು ಷರತ್ತುಗಳನ್ನು ಸಹ…

2 hours ago

ಅಶ್ಲೀಲ‌ ವಿಡಿಯೋ ಕೇಸ್: ಮೂಡಿಗೆರೆಯಲ್ಲಿ ಪ್ರಜ್ವಲ್ ಬಂಧನ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.

2 hours ago