ಆರೋಗ್ಯ

ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಪ್ಯಾಕೇಜ್ ನಡಿ ಆರೋಗ್ಯ ಕಾರ್ಯಕರ್ತರಿಗೆ ವಿಮಾ ಯೋಜನೆ ಅವಧಿ ವಿಸ್ತರಣೆ

ಕೋವಿಡ್ -19 ವಿರುದ್ಧ ಹೋರಾಡುತ್ತಿರುವ ಆರೋಗ್ಯ ಕಾರ್ಯಕರ್ತರ ವಿಮಾ ಯೋಜನೆ ಅವಧಿಯನ್ನು 180 ದಿನಗಳವರೆಗೆ ವಿಸ್ತರಿಸಲಾಗಿದೆ. ಇಲ್ಲಿಯವರೆಗೆ 1,351 ಕ್ಲೇಮ್‌ಗಳನ್ನು ಪಾವತಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ.

COVID-19 ವಿರುದ್ಧ ಹೋರಾಡುವ ಆರೋಗ್ಯ ಕಾರ್ಯಕರ್ತರಿಗೆ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಪ್ಯಾಕೇಜ್(PMGKP) ಅಡಿಯಲ್ಲಿ ವಿಮಾ ಯೋಜನೆ ಪಾಲಿಸಿಯ ಪ್ರಸ್ತುತ ಅವಧಿ ಅಕ್ಟೋಬರ್ 20 ರಂದು ಕೊನೆಗೊಳ್ಳಲಿದೆ ಎಂದು ಹೇಳಲಾಗಿತ್ತು. ಕೋವಿಡ್ -19 ಸಾಂಕ್ರಾಮಿಕ ರೋಗ ಇನ್ನೂ ಕಡಿಮೆಯಾಗಿಲ್ಲ ಮತ್ತು ಕೋವಿಡ್-ಸಂಬಂಧಿತ ಕರ್ತವ್ಯಗಳಿಗಾಗಿ ನಿಯೋಜಿಸಲಾದ ಆರೋಗ್ಯ ಕಾರ್ಯಕರ್ತರ ಸಾವುಗಳು ಇನ್ನೂ ವಿವಿಧ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಂದ ವರದಿಯಾಗುತ್ತಿರುವುದರಿಂದ ವಿಮಾ ಪಾಲಿಸಿಯನ್ನು 21.10.2021 ರಿಂದ ವಿಸ್ತರಿಸಲಾಗಿದೆ.

ಕೋವಿಡ್ -19 ರೋಗಿಗಳ ಆರೈಕೆಗಾಗಿ ನಿಯೋಜನೆಗೊಂಡಿರುವ ಆರೋಗ್ಯ ಕಾರ್ಯಕರ್ತರ ಅವಲಂಬಿತರಿಗೆ ಸುರಕ್ಷತೆ ಒದಗಿಸಲು ಅವಧಿಯನ್ನು 180 ದಿನಗಳ ಹೆಚ್ಚಿನ ಅವಧಿಗೆ ಮುಂದುವರಿಸಲಾಗಿದೆ ಎನ್ನಲಾಗಿದೆ. ಈವರೆಗೆ 1,351 ಕ್ಲೇಮ್‌ಗಳನ್ನು ಈ ಯೋಜನೆಯಡಿ ಪಾವತಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದ್ದು, ಆರೋಗ್ಯ ಕಾರ್ಯಕರ್ತರಲ್ಲಿ ವ್ಯಾಪಕ ಪ್ರಚಾರಕ್ಕಾಗಿ ಸೂಚನೆ ನೀಡಲಾಗಿದೆ.

ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಪ್ಯಾಕೇಜ್(PMGKP):

ಕೋವಿಡ್ -19 ವಿರುದ್ಧ ಹೋರಾಡುವ ಆರೋಗ್ಯ ಕಾರ್ಯಕರ್ತರಿಗೆ ವಿಮಾ ಯೋಜನೆಯನ್ನು ಕಳೆದ ವರ್ಷ ಮಾರ್ಚ್ 30 ರಂದು ಆರಂಭಿಸಲಾಯಿತು. ಕೋವಿಡ್ -19 ರೋಗಿಗಳ ನೇರ ಸಂಪರ್ಕ ಮತ್ತು ಆರೈಕೆಯಲ್ಲಿರುವ ಸಮುದಾಯ ಆರೋಗ್ಯ ಕಾರ್ಯಕರ್ತರು ಮತ್ತು ಖಾಸಗಿ ಆರೋಗ್ಯ ಕಾರ್ಯಕರ್ತರು ಸೇರಿದಂತೆ 22.12 ಲಕ್ಷ ಜನರಿಗೆ 50 ಲಕ್ಷ ರೂ. ವಿಮೆ ಸೌಲಭ್ಯ ಕಲ್ಪಿಸಲಾಗಿದೆ.

ಖಾಸಗಿ ಆಸ್ಪತ್ರೆ ಸಿಬ್ಬಂದಿ, ನಿವೃತ್ತರು, ಸ್ವಯಂಸೇವಕರು, ಸ್ಥಳೀಯ ನಗರ ಸಂಸ್ಥೆಗಳು, ಗುತ್ತಿಗೆ, ದಿನಗೂಲಿ, ತಾತ್ಕಾಲಿಕ ಮತ್ತು ಹೊರಗುತ್ತಿಗೆ ಸಿಬ್ಬಂದಿ, ರಾಜ್ಯಗಳು, ಕೇಂದ್ರ ಆಸ್ಪತ್ರೆಗಳು, ಕೇಂದ್ರಾಡಳಿತ ಪ್ರದೇಶಗಳ ಸ್ವಾಯತ್ತ ಆಸ್ಪತ್ರೆಗಳು, ಏಮ್ಸ್ ಮತ್ತು ರಾಷ್ಟ್ರೀಯ ಪ್ರಾಮುಖ್ಯತೆಯ ಸಂಸ್ಥೆ ಮತ್ತು ಕೇಂದ್ರ ಸಚಿವಾಲಯಗಳ ಆಸ್ಪತ್ರೆಗಳು, ಕೋವಿಡ್ -19 ರೋಗಿಗಳ ಆರೈಕೆಗಾಗಿ ರಚಿಸಲಾದ ಕೇಂದ್ರಗಳ ಆರೋಗ್ಯ ಕಾರ್ಯಕರ್ತರು ಕೂಡ ಪಿಎಂಜಿಕೆಪಿ ವ್ಯಾಪ್ತಿಗೆ ಒಳಪಟ್ಟಿದ್ದಾರೆ ಎಂದು ಹೇಳಲಾಗಿದೆ.

 

Gayathri SG

Recent Posts

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

23 mins ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

38 mins ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

1 hour ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

2 hours ago

ಬಿರುಗಾಳಿ ಸಹಿತ ಮಳೆಗೆ ಕುಸಿದ ಮಹಾದ್ವಾರ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

2 hours ago

ಮತ್ತೆ ಭರ್ಜರಿ ಏರಿಕೆ ಕಂಡ ‌ಚಿನ್ನದ ಬೆಲೆ !

ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…

2 hours ago