News Karnataka Kannada
Friday, May 03 2024
ಆರೋಗ್ಯ

ಸಪೋಟ ಹಣ್ಣಿನ ಆರೋಗ್ಯ ಲಾಭಗಳು

Chikku
Photo Credit :

ಭಾರತದಲ್ಲಿ ಸಪೋಟ ಹಣ್ಣನ್ನು ಹೆಚ್ಚಾಗಿ ಕರ್ನಾಟಕ, ಗುಜರಾತ್, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಆಂಧ್ರ ಪ್ರದೇಶ ಮತ್ತು ತಮಿಳುನಾಡಿನಲ್ಲಿ ಬೆಳೆಯುತ್ತಾರೆ. ಸಪೋತ ಹಣ್ಣಿನ ಜ್ಯೂಸ್, ಜಾಮ್, ಸ್ಮೂಥಿ, ಸಿಹಿ ತಿಂಡಿಗಳು ಇತ್ಯಾದಿಗಳನ್ನು ತಯಾರಿಸುವರು.

ಜ್ಯೂಸ್ ಕುಡಿಯಲು ಹೋದರೆ ಹೆಚ್ಚಾಗಿ ಜನರು ಇಷ್ಟಪಡುವಂತಹ ಜ್ಯೂಸ್ ಎಂದರೆ ಅದು ಚಿಕ್ಕು ಅಥವಾ ಸಪೋಟ ಜ್ಯೂಸ್ ಎಂದು ಹೇಳಬಹುದು. ಯಾಕೆಂದರೆ ಈ ಹಣ್ಣು ತುಂಬಾ ರುಚಿಕರ ಹಾಗೂ ಸಿಹಿ ಹೊಂದಿರುವುದು. ಇದರಿಂದಾಗಿ ಹೆಚ್ಚಿನವರಿಗೆ ಇದು ಇಷ್ಟವಾಗುತ್ತದೆ. ಸಪೋತಗೆ ವಿವಿಧ ರೀತಿಯ ಹೆಸರುಗಳು ಕೂಡ ಇದೆ. ಇದನ್ನು ಚಿಕ್ಕ, ಚಿಕ್ಕೂ, ಲಮೂತ್, ಸಪೊಡಿಲ್ಲಾ, ನೋಸ್ ಬೆರ್ರಿ ಮತ್ತು ಸಪೋಟಿ ಇತ್ಯಾದಿ ಹೆಸರುಗಳಿಂದ ಕರೆಯುತ್ತಾರೆ.

ವಿಟಮಿನ್ ಗಳ ಆಗರ :  100 ಗ್ರಾಂ ಸಪೋಟ ದಲ್ಲಿ 83 ಕ್ಯಾಲರಿ ಇದೆ. ಆಹಾರದ ನಾರಿನಾಂಶವನ್ನು ಹೊಂದಿರುವಂತಹ ಇದು ವಿರೇಚಕ ಗುಣವನ್ನು ಹೊಂದಿದೆ. ಈ ಹಣ್ಣಿನಲ್ಲಿ ವಿಟಮಿನ್ ಸಿ, ಎ, ನಿಯಾಸಿನ್, ಫಾಲಟೆ ಮತ್ತು ಖನಿಜಾಂಶ ಗಳಾಗಿರುವಂತಹ ಕಬ್ಬಿನಾಂಶ, ಪೊಟಾಶಿಯಂ ಮತ್ತು ತಾಮ್ರವಿದೆ. ಆಂಟಿಆಕ್ಸಿಡೆಂಟ್, ಉರಿಯೂತ ಶಮನಕಾರಿ, ವೈರಲ್ ವಿರೋಧಿ, ಬ್ಯಾಕ್ಟೀರಿಯಾ ವಿರೋಧಿ ಮತ್ತು ನಂಜುನಿರೋಧಕ ಗುಣಗಳು ಕೂಡ ಇದರಲ್ಲಿ ಇದೆ.

ಹೊಟ್ಟೆಯ ಆರೋಗ್ಯ ಸುಧಾರಣೆ :  ಹೊಟ್ಟೆಯಲ್ಲಿ ಇದು ಆಮ್ಲದ ಸ್ರವಿಸುವಿಕೆಯನ್ನು ತಟಸ್ಥಗೊಳಿಸುವುದು. ಪರಾವಲಂಬಿ ವಿರೋಧಿ, ವೈರಲ್ ವಿರೋಧಿ, ಉರಿಯೂತ ಶಮನಕಾರಿ ಮತ್ತು ಬ್ಯಾಕ್ಟೀರಿಯಾ ವಿರೋಧಿ ಗುಣ ಹೊಂದಿರುವಂತಹ ಸಪೋತ ಹಣ್ಣು ಕಿರಿಕಿರಿ ಉಂಟು ಮಾಡುವ ಹೊಟ್ಟೆಗೆ ಶಮನ ನೀಡುವುದು.

ಗ್ಯಾಸ್ಟ್ರಿಕ್ ಹಾಗೂ ಹೊಟ್ಟೆಯ ಇತರ ಸಮಸ್ಯೆಗಳನ್ನು ಇದು ನಿವಾರಿಸುವುದು. ನಾರಿನಾಂಶವು ಅಧಿಕವಾಗಿ ಇರುವ ಕಾರಣದಿಂದಾಗಿ ಜೀರ್ಣಕ್ರಿಯೆಗೆ ಇದು ಸಹಕಾರಿ ಮತ್ತು ಮಲಬದ್ಧತೆ ಇರುವವರಿಗೆ ವಿರೇಚಕವಾಗಿ ವರ್ತಿಸುವುದು. ಇದು ಹೊಟ್ಟೆಯ ಸೋಂಕನ್ನು ತಗ್ಗಿಸುವುದು.

ಮೂಳೆಗಳು ಬಲಗೊಳ್ಳುವುದು : ಚಿಕ್ಕುವಿನಲ್ಲಿ ಇರುವಂತಹ ಕೆಲವೊಂದು ಖನಿಜಾಂಶಗಳಾಗಿರುವ ಕ್ಯಾಲ್ಸಿಯಂ, ಪೋಸ್ಪರಸ್, ತಾಮ್ರ ಮತ್ತು ಕಬ್ಬಿನಾಂಶವು ಮೂಳೆಯನ್ನು ಬಲಗೊಳಿಸುವುದು. ನಿಯಮಿತವಾಗಿ ಚಿಕ್ಕು ತಿಂದರೆ ಅದರಿಂದ ಮೂಳೆಗಳ ಗುಣಮಟ್ಟವು ಸುಧಾರಣೆ ಆಗುವುದು. ತಾಮ್ರದ ಕೊರತೆ ಇದ್ದರೆ ಆಗ ಅಸ್ಥಿರಂಧ್ರತೆ ಸಮಸ್ಯೆ ಕಾಡುವುದು. ಸಪೋತ ಹಣ್ಣು ಮೂಳೆಗಳು, ಸ್ನಾಯುಗಳ ಮತ್ತು ಅಂಗಾಂಶಗಳನ್ನು ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸುವುದು.

ಪ್ರತಿರೋಧಕ ಶಕ್ತಿ ಹೆಚ್ಚಳ : ವಿಟಮಿನ್ ಸಿ, ಎ ಮತ್ತು ಆಂಟಿಆಕ್ಸಿಡೆಂಟ್ ಒಳಗೊಂಡಿರುವ ಸಪೋತ ಹಣ್ಣು ಪ್ರತಿರೋಧಕ ಶಕ್ತಿಯನ್ನು ಬಲಿಷ್ಠವಾಗಿ ಇಡುವಲ್ಲಿ ಪ್ರಮುಖ ಪಾತ್ರ ವಹಿಸುವುದು. ಇದು ಫ್ರೀ ರ್ಯಾಡಿಕಲ್ ನ್ನು ದೂರ ಮಾಡುವುದು, ಚರ್ಮದ ಆರೋಗ್ಯ ವೃದ್ಧಿಸುವುದು ಮತ್ತು ದೀರ್ಘಕಾಲಿಕ ಕಾಯಿಲೆಗಳ ಅಪಾಯ ತಗ್ಗಿಸುವುದು. ಇದು ವೈರಸ್, ಬ್ಯಾಕ್ಟೀರಿಯಾ ಮತ್ತು ಪರಾವಲಂಬಿಗಳ ದಾಳಿಯಿಂದ ರಕ್ಷಿಸುವುದು.

ಶಕ್ತಿ ವೃದ್ಧಿಸುವುದು : ಫ್ರಾಕ್ಟೋಸ್ ಮತ್ತು ಸುಕ್ರೋಸ್ ನಿಂದ ಸಮೃದ್ಧವಾಗಿರುವಂತಹ ಸಪೋತ ಹಣ್ಣಿನಲ್ಲಿ ಹೆಚ್ಚಿನ ಮಟ್ಟದ ಶಕ್ತಿ ಇದೆ. ಇದನ್ನು ವ್ಯಾಯಾಮದ ಬಳಿಕ ಸೇವನೆ ಮಾಡಿದರೆ ಅದರಿಂದ ದೇಹಕ್ಕೆ ನೈಸರ್ಗಿಕ ಶಕ್ತಿ ಸಿಗುವುದು. ಬೆಳೆಯುವ ಮಕ್ಕಳು ಮತ್ತು ಗರ್ಭಿಣಿಯರಿಗೆ ಇದು ತುಂಬಾ ಒಳ್ಳೆಯದು. ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳನ್ನು ಇದು ಒದಗಿಸುವುದು. ಇದರಿಂದ ಆರೋಗ್ಯಕರ ಜೀವನ ಸಾಗಿಸಬಹುದು.

ಆರೋಗ್ಯಕಾರಿ ತ್ವಚೆ : ಸಪೋಟ ಹಣ್ಣು ತ್ವಚೆಯ ಆರೋಗ್ಯ ಹಾಗೂ ಸೌಂದರ್ಯ ವೃದ್ಧಿಸುವುದು. ಇದರಲ್ಲಿ ಇರುವಂತಹ ವಿಟಮಿನ್ ಎ, ಸಿ, ಇ ಮತ್ತು ಕೆ ಚರ್ಮವನ್ನು ಹೈಡ್ರೇಟ್ ಆಗಿಡುವುದು ಮತ್ತು ಚರ್ಮದ ಅಂಗಾಂಶ ಗಳನ್ನು ಪುನರ್ಶ್ಚೇತನಗೊಳಿಸುವುದು. ಪಾಲಿಫೆನಾಲ್, ಫ್ಲಾವನಾಯ್ಡ್ ಮತ್ತು ಆಂಟಿ ಆಕ್ಸಿಡೆಂಟ್ ಹೊಂದಿರುವ ಸಪೋತ ಹಣ್ಣು ನೆರಿಗೆ ನಿವಾರಿಸುವುದು, ಚರ್ಮದ ವಿನ್ಯಾಸ ಸುಧಾರಿಸು ವುದು, ವಯಸ್ಸಾಗುವ ಲಕ್ಷಣಗಳನ್ನು ನಿಧಾನಗೊಳಿಸುವುದು ಮತ್ತು ನೈಸರ್ಗಿಕವಾಗಿ ಕಾಂತಿಯುತ ವಾಗಿಸುವುದು. ಸಪೋತದಿಂದ ಹೊರಬರುವಂತಹ ಹಾಲು ಚರ್ಮದ ಶಿಲೀಂಧ್ರ ದೂರ ಮಾಡಲು ಸಹಕಾರಿ.

ಕ್ಯಾನ್ಸರ್ ತಡೆಯುವುದು : ಆಂಟಿಆಕ್ಸಿಡೆಂಟ್ ನಿಂದ ಸಮೃದ್ಧವಾಗಿರುವಂತಹ ಸಪೋತ ಹಣ್ಣು ವಿವಿಧ ರೀತಿಯ ಕ್ಯಾನ್ಸರ್ ನ ಅಪಾಯವನ್ನು ಕಡಿಮೆ ಮಾಡವುದು. ವಿಟಮಿನ್ ಎ ಮತ್ತು ಬಿ ಲೋಳೆಯ ಒಳಪದರವನ್ನು ಆರೋಗ್ಯವಾಗಿಡುವುದು ಮತ್ತು ಇದರಿಂದ ಶ್ವಾಸಕೋಶ ಮತ್ತು ಬಾಯಿಯ ಕ್ಯಾನ್ಸರ್ ಬರದಂತೆ ತಡೆಯುವುದು. ಆಹಾರದ ನಾರಿನಾಂಶವು ಅಧಿಕವಾಗಿ ಇರುವಂತಹ ಸಪೋತ ಹಣ್ಣು ಹೊಟ್ಟೆಯ ಆರೋಗ್ಯಕ್ಕೆ ಒಳ್ಳೆಯದು ಮತ್ತು ಇದು ಕರುಳಿನ ಕ್ಯಾನ್ಸರ್ ನಿಂದ ಕಾಪಾಡುವುದು.

ರಕ್ತದೊತ್ತಡ ನಿಯಂತ್ರಣದಲ್ಲಿ ಇಡುವುದು : ಅಧಿಕ ರಕ್ತದತೊತಡ ನಿಯಂತ್ರಣದಲ್ಲಿ ಇಡಲು ಸಪೋಟ ಹಣ್ಣು ತುಂಬಾ ಪರಿಣಾಮಕಾರಿ. ಇದರಲ್ಲಿ ಇರುವಂತಹ ಪೊಟಾಶಿಯಂ ಅಂಶವು ಸೋಡಿಯಂ ಮಟ್ಟವನ್ನು ಕಡಿಮೆ ಮಾಡುವುದು ಮತ್ತು ರಕ್ತ ಸಂಚಾರನ್ನು ಸುಧಾರಿಸುವುದು ಮತ್ತು ರಕ್ತದೊತ್ತಡವನ್ನು ಇದು ನಿಯಂತ್ರಿಸುವುದು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
4383

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು