ಆರೋಗ್ಯ

ಅಬುಜಾ: ನೈಜೀರಿಯಾ ಲಸ್ಸಾ ಜ್ವರದಿಂದ ಸತ್ತವರ ಸಂಖ್ಯೆ 104ಕ್ಕೆ ಏರಿಕೆ

ಅಬುಜಾ: ಜನವರಿಯಿಂದ ಇದುವರೆಗೆ ನೈಜೀರಿಯಾ ಲಸ್ಸಾ ಜ್ವರದಿಂದ ಸಾವನ್ನಪ್ಪಿದವರ ಸಂಖ್ಯೆ 104 ಕ್ಕೆ ಏರಿದೆ ಎಂದು ಸ್ಥಳೀಯ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ದೇಶದ 22 ರಾಜ್ಯಗಳಾದ್ಯಂತ 88 ಸ್ಥಳೀಯ ಸರ್ಕಾರಿ ಆಸ್ಪತ್ರೆಗಳಲ್ಲಿ ದಾಖಲಾಗಿರುವ ರೋಗಿಗಳ ದಾಖಲೆಗಳನ್ನು ಸರ್ಕಾರ ಬಿಡುಗಡೆ ಮಾಡಿದೆ. ಸಾವಿನ ಸಂಖ್ಯೆ 104 ಕ್ಕೆ ಏರಿದೆ ಎಂದು ಹೇಳಿದೆ.

ಇಲ್ಲಿಯವರೆಗೆ ಒಟ್ಟು 636 ದೃಢಪಡಿಸಿದ ಪ್ರಕರಣಗಳು ದಾಖಲಾಗಿವೆ ಎಂದು ಎನ್‌ಸಿಡಿಸಿ ತಿಳಿಸಿದೆ, ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ, ಲಸ್ಸಾ ಜ್ವರವು ಲಸ್ಸಾ ವೈರಸ್‌ನಿಂದ ಉಂಟಾಗುತ್ತದೆ. ಸೋಂಕಿತ ಮಾಸ್ಟೊಮಿಸ್ ಇಲಿಗಳ ಮೂತ್ರ ಅಥವಾ ಮಲದಿಂದ ಕಲುಷಿತಗೊಂಡ ಆಹಾರದಿಂದ ಮಾನವರು ಸಾಮಾನ್ಯವಾಗಿ ವೈರಸ್‌ಗೆ ತುತ್ತಾಗುತ್ತಾರೆ. ಪಶ್ಚಿಮ ಆಫ್ರಿಕಾದ ಭಾಗಗಳಲ್ಲಿ ಈ ರೋಗ ಸಾಮಾನ್ಯವಾಗಿದೆ.

ಕೆಲವು ಸಂದರ್ಭಗಳಲ್ಲಿ, ಲಸ್ಸಾ ಜ್ವರವು ಮಲೇರಿಯಾದ ಲಕ್ಷಣಗಳನ್ನು ಹೊಂದಿರುತ್ತದೆ. ವೈರಸ್‌ಗೆ ದೇಹ ಹೊಕ್ಕ ಒಂದರಿಂದ ಮೂರು ವಾರಗಳ ನಡುವೆ ರೋಗ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಸೌಮ್ಯವಾದ ಪ್ರಕರಣಗಳಲ್ಲಿ, ರೋಗವು ಜ್ವರ, ಆಯಾಸ, ದೌರ್ಬಲ್ಯ ಮತ್ತು ತಲೆನೋವುಗೆ ಕಾರಣವಾಗುತ್ತದೆ.

Ashika S

Recent Posts

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

18 mins ago

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

1 hour ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

2 hours ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

2 hours ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

3 hours ago

ಬಿರುಗಾಳಿ ಸಹಿತ ಮಳೆಗೆ ಕುಸಿದ ಮಹಾದ್ವಾರ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

3 hours ago