Categories: ಆರೋಗ್ಯ

ದಕ್ಷಿಣ ಆಫ್ರಿಕಾದಲ್ಲಿ ಕಾಲರಾದಿಂದ 17 ಮಂದಿ ಸಾವು

ಜೋಹಾನ್ಸ್‌ಬರ್ಗ್: ದಕ್ಷಿಣ ಆಫ್ರಿಕಾದ ಆಡಳಿತ ರಾಜಧಾನಿ ಪ್ರಿಟೋರಿಯಾದ ಉತ್ತರದಲ್ಲಿರುವ ಹಮ್ಮನ್ಸ್‌ಕ್ರಾಲ್‌ನಲ್ಲಿ ಇತ್ತೀಚೆಗೆ ಕಾಣಿಸಿಕೊಂಡ ಕಾಲರಾದಿಂದ ಒಟ್ಟು 17 ಜನರು ಸಾವನ್ನಪ್ಪಿದ್ದಾರೆ ಎಂದು ಗೌಟೆಂಗ್ ಪ್ರಾಂತ್ಯದ ಆರೋಗ್ಯ ಇಲಾಖೆ ತಿಳಿಸಿದೆ.

ಪ್ರಯೋಗಾಲಯದಲ್ಲಿ ದೃಢೀಕರಿಸಿದ ಕಾಲರಾ ಪ್ರಕರಣಗಳ ಸಂಖ್ಯೆ 29 ಕ್ಕೆ ತಲುಪಿದೆ. ಅಲ್ಲದೆ 17 ಜನರು ಸಾವನ್ನಪ್ಪಿದ್ದಾರೆ ಎಂದು ಇಲಾಖೆ ಬುಧವಾರ ಹೇಳಿಕೆಯಲ್ಲಿ ತಿಳಿಸಿದೆ.

ಫೆಬ್ರವರಿ ಆರಂಭದಲ್ಲಿ ದಕ್ಷಿಣ ಆಫ್ರಿಕಾ ತನ್ನ ಮೊದಲ ಎರಡು ಕಾಲರಾ ಪ್ರಕರಣಗಳನ್ನು ಪತ್ತೆ ಮಾಡಿತ್ತು. ಫೆಬ್ರವರಿ ಅಂತ್ಯದಲ್ಲಿ ಮೊದಲ ಕಾಲರಾ ಸಾವು ದಾಖಲಾಗಿದೆ ಎಂದು ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಅತಿಸಾರ, ವಾಕರಿಕೆ, ವಾಂತಿ, ಹೊಟ್ಟೆನೋವು ಮತ್ತು ನಿರ್ಜಲೀಕರಣದ ಲಕ್ಷಣಗಳಿರುವ ಸಾರ್ವಜನಿಕರು ತಮ್ಮ ಹತ್ತಿರದ ಆರೋಗ್ಯ ಕೇಂದ್ರಗಳಿಗೆ ವೈದ್ಯಕೀಯ ಚಿಕಿತ್ಸೆಗಾಗಿ ತೆರಳಬೇಕು ಎಂದು ಆರೋಗ್ಯ ಇಲಾಖೆ ವಕ್ತಾರರಾದ ಮೊಟಲಾತಲೆ ಮೋದಿಬಾ ಅವರನ್ನು ಒತ್ತಾಯಿಸಿದರು.

Sneha Gowda

Recent Posts

ಸಿಲಿಂಡರ್‌ ಬ್ಲಾಸ್ಟ್‌ನಿಂದ ಮನೆಯಲ್ಲಿ ಬೆಂಕಿ : 3 ವರ್ಷದ ಮಗು ಮೃತ್ಯು, 5 ಮಂದಿಗೆ ಗಾಯ

ಮನೆಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿ 3 ವರ್ಷದ ಮಗು ಮೃತಪಟ್ಟು ಐವರು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಛತ್ರಪತಿ ಸಾಂಭಾಜಿನಗರದಲ್ಲಿ ನಡೆದಿದೆ…

6 mins ago

ಬೀದರ್‌ನ ’14 ಪರೀಕ್ಷಾ ಕೇಂದ್ರಗಳಲ್ಲಿ ‘ನೀಟ್‌’ ಪರೀಕ್ಷೆ

'ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್‌) ಜಿಲ್ಲೆಯ 14 ಪರೀಕ್ಷಾ ಕೇಂದ್ರಗಳಲ್ಲಿ ಮೇ 5ರಂದು ನಡೆಯಲಿದೆ' ಎಂದು ನೀಟ್‌ ಸಂಯೋಜಕ…

30 mins ago

ಮೋದಿ ಬಂದರೂ ಮಾದಿಗರು ಬಿಜೆಪಿ ಬೆಂಬಲಿಸಲ್ಲ: ಚಂದ್ರಕಾಂತ ಹಿಪ್ಪಳಗಾಂವ

ತೆಲಂಗಾಣದ ಮಂದಾಕೃಷ್ಣ ಮಾದಿಗ ಅಲ್ಲ, ಸ್ವತಃ ಪ್ರಧಾನಿ ನರೇಂದ್ರ ಮೋದಿ ಬಂದರೂ ಮಾದಿಗರು ಬಿಜೆಪಿಗೆ ಮತ ಹಾಕುವುದಿಲ್ಲ ಎಂದು ಪರಿಶಿಷ್ಟ…

36 mins ago

ಮಳೆ, ಗಾಳಿ ಆರ್ಭಟಕ್ಕೆ ಧರೆಗುರುಳಿದ ಏಸು ಕ್ರೈಸ್ತನ ಮೂರ್ತಿ

ಬೀಸಿದ ಗಾಳಿಗೆ ಸುರಿದ ಮಳೆಯ ರಭಸಕ್ಕೆ ಏಸು ಕ್ರೈಸ್ತನ ಮೂರ್ತಿ ಧರೆಗುರುಳಿದ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮರಿ…

43 mins ago

ಶರೀರದ ದಾಹ, ಬಾಯಾರಿಕೆ ನಿವಾರಣೆಗಾಗಿ ಚಿಂಚಾ ಪಾನಕ ಬಳಸಿ: ಡಾ.ಶುಭ ರಾಜೇಶ್

ಬೇಸಿಗೆ ಕಾಲದಲ್ಲಿ ಸಾರ್ವಜನಿಕರು ತಮ್ಮ ಆರೋಗ್ಯ ಸುಧಾರಣೆಗೆ ಹೆಚ್ಚಿನ ಒತ್ತು ನೀಡಬೇಕು. ಜೀರ್ಣಕ್ರಿಯೆ ಉತ್ತಮಗೊಳಿಸಲು ಶರೀರದ ದಾಹ ನಿವಾರಣೆಗಾಗಿ ಆರೋಗ್ಯಕರ…

58 mins ago

ರಾಜು ಆಲಗೂರರಿಗೆ ಕುರುಬ ಸಮಾಜದ ಬೆಂಬಲ: ಮಲ್ಲಪ್ಪ ಸಾಲಿ

ಕುರುಬ ಸಮಾಜ ಯಾವತ್ತೂ ನ್ಯಾಯದ ಪರವಾಗಿದೆ. ಹಾಗಾಗಿ ಯೋಗ್ಯ ಅಭ್ಯರ್ಥಿಯಾದ ರಾಜು ಆಲಗೂರರಿಗೆ ಬೆಂಬಲ ನೀಡುತ್ತದೆ ಎಂದು ಮಾಜಿ ಜಿಪಂ…

1 hour ago