Categories: ಆರೋಗ್ಯ

ಬೀದರ್‌: ಜಿಲ್ಲೆಯಲ್ಲಿ ಹೆಚ್ಚುತ್ತಿವೆ ಡೆಂಗಿ, ಚಿಕೂನ್‌ಗುನ್ಯಾ ಪ್ರಕರಣ

ಬೀದರ್‌: ಜಿಲ್ಲೆಯಾದ್ಯಂತ ಡೆಂಗಿ, ಚಿಕೂನ್‌ಗುನ್ಯಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು ಕಳವಳಕ್ಕೆ ಕಾರಣವಾಗಿದೆ. ಜನವರಿಯಿಂದ ಮೇ ವರೆಗೆ ಜಿಲ್ಲೆಯಲ್ಲಿ ಆರು ಡೆಂಗಿ, ಎರಡು ಚಿಕೂನ್‌ಗುನ್ಯಾ ಪ್ರಕರಣಗಳು ವರದಿಯಾಗಿದ್ದವು. ಆದರೆ, ಮಳೆಗಾಲ ಆರಂಭವಾದ ನಂತರ ಸತತವಾಗಿ ಪ್ರಕರಣಗಳು ಹೆಚ್ಚಾಗುತ್ತಿದ್ದು, ನಿಲ್ಲುವ ಲಕ್ಷಣ ಕಂಡು ಬರುತ್ತಿಲ್ಲ.

ಜುಲೈನಿಂದ ಸೆಪ್ಟೆಂಬರ್‌ ವರೆಗೆ ಜಿಲ್ಲೆಯಲ್ಲಿ 57 ಡೆಂಗಿ, 48 ಚಿಕೂನ್‌ಗುನ್ಯಾ ಪ್ರಕರಣಗಳು ವರದಿಯಾಗಿವೆ.

ಅದರಲ್ಲೂ ನಗರ ಪ್ರದೇಶದಲ್ಲಿ ಪ್ರಕರಣಗಳು ಹೆಚ್ಚಾಗುತ್ತಿವೆ. ಇದರಿಂದಾಗಿ ಆರೋಗ್ಯ ಇಲಾಖೆಯು ಪ್ರತಿ ತಿಂಗಳ ಮೊದಲ ಶುಕ್ರವಾರ ಮತ್ತು ಮೂರನೇ ಶುಕ್ರವಾರ ಈಡಿಸ್ ಸೊಳ್ಳೆ ಉತ್ಪತ್ತಿ ತಾಣಗಳ ಸಮೀಕ್ಷೆ ಹಾಗೂ ನಿರ್ಮೂಲನೆ ಕಾರ್ಯವನ್ನು ಕೈಗೊಳ್ಳುತ್ತಿದೆ. ಗ್ರಾಮೀಣ ಪ್ರದೇಶದಲ್ಲಿ ಜ್ವರ ಸಮೀಕ್ಷೆ ಹಾಗೂ ಲಾರ್ವಾ ಸಮೀಕ್ಷೆ, ಅವುಗಳ ನಿರ್ಮೂಲನೆ ಕಾರ್ಯ ನಡೆಸಲಾಗುತ್ತಿದೆ. ಆರೋಗ್ಯ ಸಹಾಯಕರು ಹಾಗೂ ಆಶಾ ಕಾರ್ಯಕರ್ತರು ಈ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.

ಹೀಗಿದ್ದರೂ ಪ್ರಕರಣಗಳು ವರದಿಯಾಗಿರುವುದು ನಿಂತಿಲ್ಲ. ಇದಕ್ಕೆ ಸಾರ್ವಜನಿಕರ ನಿರ್ಲಕ್ಷ್ಯವೂ ಕಾರಣ. ಡೆಂಗಿಗೆ ಕಾರಣವಾಗುವ ಈಡಿಸ್‌ ಸೊಳ್ಳೆ ಶುದ್ಧ ನೀರಿನಲ್ಲಿ ಬೆಳೆಯುತ್ತದೆ. ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳುವುದು ಜನರ ಕರ್ತವ್ಯ. ಆದರೆ, ಮನೆಯ ಸುತ್ತಮುತ್ತ, ಅಂಗಳ ಹಾಗೂ ಮಹಡಿ ಮೇಲೆ ಬೇಕಾಬಿಟ್ಟಿ ವಸ್ತುಗಳನ್ನು ಸಂಗ್ರಹಿಸಿ ಇಟ್ಟಿರುತ್ತಾರೆ. ಇದರಿಂದಾಗಿ ಅಲ್ಲಿ ಸೊಳ್ಳೆಗಳು ಯಥೇಚ್ಛವಾಗಿ ಬೆಳೆಯುತ್ತಿವೆ. ಇದು ಕೂಡ ರೋಗ ಹರಡಲು ಪ್ರಮುಖ ಕಾರಣ ಎನ್ನುವುದು ಗೊತ್ತಾಗಿದೆ.

ಇನ್ನು, ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿ ವ್ಯಾಪ್ತಿಗಳಲ್ಲಿ ಯಾವ ರೀತಿ ಸ್ವಚ್ಛತೆ ಕೈಗೊಳ್ಳಬೇಕೋ ಆ ಕೆಲಸ ಆಗುತ್ತಿಲ್ಲ. ಹಲವೆಡೆ ರಸ್ತೆಗಳಲ್ಲಿ ಗುಂಡಿಗಳು ಬಿದ್ದು, ಅಲ್ಲಿ ನೀರು ಸಂಗ್ರಹವಾಗುತ್ತಿದೆ. ಈಗಲೂ ಹಲವೆಡೆ ಚರಂಡಿಗಳು ಸಮರ್ಪಕವಾಗಿಲ್ಲ. ಅನೇಕ ಕಡೆ ತೆರೆದ ಸ್ಥಿತಿಯಲ್ಲಿವೆ. ಹಲವು ತಿಂಗಳುಗಳು ಕಳೆದರೂ ಸ್ವಚ್ಛತೆ ಕಾಣುವುದಿಲ್ಲ. ಇನ್ನು, ನಗರಸಭೆಯ ಕಸ ಸಂಗ್ರಹ ವಾಹನಗಳು ನಿತ್ಯವೂ ಎಲ್ಲಾ ಬಡಾವಣೆಗಳಿಗೆ ಹೋಗುತ್ತಿಲ್ಲ. ಜನ ಅನಿವಾರ್ಯವಾಗಿ ರಸ್ತೆ ಬದಿ ಎಸೆದು ಹೋಗುತ್ತಿದ್ದಾರೆ. ಇದರಿಂದಲೂ ಅಸ್ವಚ್ಛತೆ ಹೆಚ್ಚಾಗಿ, ಸೊಳ್ಳೆಗಳು ಹೆಚ್ಚಾಗಿ ಬೆಳೆಯಲು ಕಾರಣವಾಗುತ್ತಿದೆ. ಸ್ಥಳೀಯ ಆಡಳಿತಗಳ ನಿರ್ಲಕ್ಷ್ಯದಿಂದ ಮಾರಣಾಂತಿಕ ಡೆಂಗಿ, ಚಿಕೂನ್‌ಗುನ್ಯಾ ಪ್ರಕರಣಗಳು ಹೆಚ್ಚುತ್ತಿದ್ದು, ಇದರ ಬಗ್ಗೆ ಗಂಭೀರವಾದ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ ಎನ್ನುತ್ತಾರೆ ಸಾರ್ವಜನಿಕರು.

Sneha Gowda

Recent Posts

ವಿದ್ಯುತ್ ಸಮಸ್ಯೆ ಪರಿಹರಿಸಲು ಬೆಸ್ಕಾಂನಿಂದ ವಾಟ್ಸಾಪ್ ನಂಬರ್ ಬಿಡುಗಡೆ

ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆ ಪರಿಹರಿಸಲು ಬೆಸ್ಕಾಂ ಎಂಟು ಜಿಲ್ಲೆಗಳಿಗೆ ವಾಟ್ಸಾಪ್ ನಂಬರ್ ಬಿಡುಗಡೆ ಮಾಡಿದ್ದು, ಬೆಸ್ಕಾಂ ವ್ಯಾಪ್ತಿಯ ಜಿಲ್ಲೆಯ ಜನರು…

3 mins ago

ಎಸ್‌ಎಸ್‌ಎಲ್‌ಸಿ 2,3ನೇ ಪರೀಕ್ಷೆ ಬರೆಯುವವರಿಗೆ ಸ್ಪೆಷಲ್‌ ಕ್ಲಾಸ್‌ ಯೋಜನೆ

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವನ್ನು ಗುರುವಾರ (ಮೇ 9) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ…

6 mins ago

ಚುನಾವಣೆ ಮುಕ್ತಾಯದ ಬೆನ್ನಲ್ಲೇ ಆಕ್ಟಿವ್ ಆದ ಶಾಸಕ ಪ್ರಭು ಚವಾಣ್

ಲೋಕಸಭಾ ಚುನಾವಣೆ ಮುಕ್ತಾಯ ಬೆನ್ನಲ್ಲೇ ಬೀದರ್ ಜಿಲ್ಲೆ ಔರಾದ್ ಶಾಸಕ ಪ್ರಭು ಚವಾಣ್ ಕ್ಷೇತ್ರದಲ್ಲಿ ಆಕ್ಟಿವ್ ಆಗಿದ್ದಾರೆ. ಅನಾರೋಗ್ಯ ಕಾರಣ…

20 mins ago

ಶಾಸಕ ಇಕ್ಬಾಲ್‌ ಹುಸೇನ್‌ ವಿಡಿಯೋ ವೈರಲ್‌ ಕೇಸ್‌ : ಇಬ್ಬರ ಬಂಧನ

ಶಾಸಕ ಇಕ್ಬಾಲ್‌ ಹಸೇನ್‌ ಅವರು ಮಹಿಳಾ ಕಾಂಗ್ರೆಸ್‌ ಕಾರ್ಯಕರ್ತೆ ಜೊತೆ ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಿದ್ದ ವಿಡಿಯೋ ವೈರಲ್‌ ಮಾಡಿದ್ದ ಆರೋಪದಡಿ…

22 mins ago

ಸುನೀತಾ ವಿಲಿಯಮ್ಸ್‌ ಗಗನಯಾತ್ರೆ ಮತ್ತೆ ಸ್ಥಗಿತ : ಮೇ 17ಕ್ಕೆ ಮುಂದೂಡಿಕೆ

ಭಾರತ ಮೂಲದ ವಿಶ್ವವಿಖ್ಯಾತ ಗಗನಯಾತ್ರಿ ಸುನೀತಾ ವಿಲಿಯಮ್ಸ್‌ ಕೈಗೊಂಡಿರುವ ಗಗನಯಾತ್ರೆಯನ್ನು ಮತ್ತೆ ಮುಂದೂಡಲಾಗಿದೆ

43 mins ago

ನ್ಯೂಸ್ ಕರ್ನಾಟಕ ವರದಿಯ ಫಲಶೃತಿ : ಗೋಳೂರು ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ತಾಲ್ಲೂಕಿನ ಗೋಳೂರು ಗ್ರಾಮದ ಅಂಬೇಡ್ಕರ್ ಬಡಾವಣೆಯಲ್ಲಿ ಗಬ್ಬೆದ್ದು ನಾರುತ್ತಿರುವ ಚರಂಡಿ ಅವ್ಯವಸ್ಥೆಯ ಬಗ್ಗೆ ನ್ಯೂಸ್ ಕರ್ನಾಟಕ ವಾಹಿನಿಯಲ್ಲಿ ಸುದ್ದಿಯನ್ನು ಪ್ರಸಾರ…

56 mins ago