News Karnataka Kannada
Saturday, May 04 2024
ಆರೋಗ್ಯ

ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ನಿಯಂತ್ರಿಸಲು ಇಲ್ಲಿದೆ ಸರಳ ಸೂತ್ರ

ಕೆಟ್ಟ ಕೊಲೆಸ್ಟ್ರಾಲ್‌ ಅತ್ಯಂತ ಅಪಾಯಕಾರಿ. ಇದು ದೇಹದಲ್ಲಿ ಹೆಚ್ಚಾದರೆ ಹೃದಯಾಘಾತಕ್ಕೂ ಕಾರಣವಾಗಬಹುದು. ಕೊಲೆಸ್ಟ್ರಾಲ್ ಹೆಚ್ಚಾದಂತೆ ಪಾರ್ಶ್ವವಾಯು ಅಪಾಯವು ಹೆಚ್ಚಾಗುತ್ತದೆ. ಟೈಪ್-2 ಡಯಾಬಿಟೀಸ್‌ಗೂ ಇದು ಕಾರಣವಾಗಬಹುದು. ಇದನ್ನು ನಿಯಂತ್ರಿಸಲು ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಿಸುವ ಅಭ್ಯಾಸಗಳನ್ನು ಬಿಡಬೇಕು.
Photo Credit : News Kannada

ಕೆಟ್ಟ ಕೊಲೆಸ್ಟ್ರಾಲ್‌ ಅತ್ಯಂತ ಅಪಾಯಕಾರಿ. ಇದು ದೇಹದಲ್ಲಿ ಹೆಚ್ಚಾದರೆ ಹೃದಯಾಘಾತಕ್ಕೂ ಕಾರಣವಾಗಬಹುದು. ಕೊಲೆಸ್ಟ್ರಾಲ್ ಹೆಚ್ಚಾದಂತೆ ಪಾರ್ಶ್ವವಾಯು ಅಪಾಯವು ಹೆಚ್ಚಾಗುತ್ತದೆ. ಟೈಪ್-2 ಡಯಾಬಿಟೀಸ್‌ಗೂ ಇದು ಕಾರಣವಾಗಬಹುದು. ಇದನ್ನು ನಿಯಂತ್ರಿಸಲು ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಿಸುವ ಅಭ್ಯಾಸಗಳನ್ನು ಬಿಡಬೇಕು.

ಕೆಟ್ಟ ಆಹಾರ ಪದ್ಧತಿ ಮತ್ತು ತಪ್ಪಾದ ಜೀವನಶೈಲಿಯಿಂದ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗುತ್ತದೆ. ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗಲು ಇತರ ಕಾರಣಗಳೂ ಇವೆ. ದೈಹಿಕ ಚಟುವಟಿಕೆಯ ಕೊರತೆ ಕೂಡ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸುತ್ತದೆ. ಹಾಗಾಗಿ ನಿಯಮಿತವಾಗಿ ವ್ಯಾಯಾಮ ಮಾಡಬೇಕು. ಇದು ದೇಹದಲ್ಲಿ ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸುತ್ತದೆ.

ಅತಿಯಾಗಿ ಆಲ್ಕೋಹಾಲ್ ಸೇವಿಸುವವರ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಅಧಿಕವಾಗಿರುತ್ತದೆ. ಇದರಿಂದ ಹೃದಯಕ್ಕೆ ಸಾಕಷ್ಟು ಹಾನಿಯಾಗುತ್ತದೆ. ಸ್ಥೂಲಕಾಯತೆಯು ಅನೇಕ ರೋಗಗಳಿಗೆ ಮೂಲವಾಗಿದೆ. ತೂಕ ವೇಗವಾಗಿ ಹೆಚ್ಚುತ್ತಿದ್ದರೆ ಕೊಲೆಸ್ಟ್ರಾಲ್ ಕೂಡ ಹೆಚ್ಚಾಗುವ ಅಪಾಯವಿದೆ. ಹಾಗಾಗಿ ತೂಕವನ್ನು ನಿಯಂತ್ರಿಸುವುದು ಬಹಳ ಮುಖ್ಯ.

ಹೆಚ್ಚು ಸಿಗರೇಟ್ ಸೇದುವವರಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗುವ ಅಪಾಯವಿರುತ್ತದೆ. ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಪ್ರತಿದಿನ ಬೆಳಗ್ಗೆ ಅಥವಾ ರಾತ್ರಿ ಮಲಗುವ ಮುನ್ನ ಬೆಳ್ಳುಳ್ಳಿಯನ್ನು ಸೇವಿಸಿ. ಇದರಿಂದ ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಬರುತ್ತದೆ. ಅರಿಶಿನ ಬೆರೆಸಿದ ಹಾಲನ್ನು ಕುಡಿಯುವುದರಿಂದ ದೇಹಕ್ಕೆ ಹಲವಾರು ಪ್ರಯೋಜನಗಳಿವೆ. ಈ ಮಿಶ್ರಣ ಕೂಡ ಅಧಿಕ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಬಲ್ಲದು.

ಮನೆಯಲ್ಲಿ ತಯಾರು ಮಾಡುವ ಬಹುತೇಕ ಸಾಂಬಾರ್ ಪದಾರ್ಥಗಳಿಗೆ ದಾಲ್ ಬಳಕೆ ಮಾಡುತ್ತಾರೆ. ಇದು ನಮ್ಮ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಅಂಶವನ್ನು ಕಡಿಮೆ ಮಾಡುತ್ತದೆ. ಅದರಂತೆ ಕಂದು ಬಣ್ಣದ ಅಕ್ಕಿಯಿಂದ ತಯಾರು ಮಾಡುವ ಅನ್ನ ಕೂಡ ನಮ್ಮ ಹೃದಯದ ಕಾಯಿಲೆಯನ್ನು ಸಾಕಷ್ಟು ನಿಯಂತ್ರಣ ಮಾಡುತ್ತದೆ.

ನ್ಯಾಷನಲ್ ಲೈಬ್ರರಿ ಆಫ್ ಮೆಡಿಸಿನ್ ಪ್ರಕಟಿಸಿದ ಅಧ್ಯಯನದ ಪ್ರಕಾರ, ಡಾರ್ಕ್ ಚಾಕೊಲೇಟ್ ಮತ್ತು ಕೋಕೋ ಕೆಟ್ಟ ಕೊಲೆಸ್ಟ್ರಾಲ್ ಮಟ್ಟ ಕಡಿಮೆ ಮಾಡುತ್ತದೆ. ಕೊಕೊ ಮತ್ತು ಡಾರ್ಕ್ ಚಾಕೊಲೇಟ್ ಕೆಟ್ಟ ಕೊಲೆಸ್ಟ್ರಾಲ್ ಅನ್ನು ರಕ್ತದಲ್ಲಿ ಆಕ್ಸಿಡೈಸ್ ಮಾಡಲು ಬಿಡಲ್ಲ.

ಆವಕಾಡೊ ಮೊನೊಸಾಚುರೇಟೆಡ್ ಕೊಬ್ಬು ಮತ್ತು ಫೈಬರ್ ಹೊಂದಿದೆ. ಇದು ಕೆಟ್ಟ ಕೊಲೆಸ್ಟ್ರಾಲ್ ಮಟ್ಟ ನಿಯಂತ್ರಿಸುತ್ತದೆ. ಹೃದಯದ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು