ಇಡೀ ದೇಶದಲ್ಲಿಯೇ ಮೊದಲ ಬಾರಿಗೆ ಜಿಲ್ಲೆಯಲ್ಲಿ ಜಾರಿ: ಹೃದಯ ವೈಶಾಲ್ಯ ಯೋಜನೆಗೆ ಜಿ.ಪಂ. ಸಿಇಒ ಚಾಲನೆ

ಮಂಗಳೂರು: ಹೃದಯ ಸಂಬಂಧಿತ ಕಾಯಿಲೆಗಳ ಉಚಿತ ತಪಸಣಾ ಶಿಬಿರ ಹೃದಯ ವೈಶಾಲ್ಯ ಯೋಜನೆಯನ್ನು ಇಡೀ ದೇಶದಲ್ಲಿಯೇ ಮೊದಲ ಬಾರಿಗೆ ಜಿಲ್ಲೆಯಲ್ಲಿ ಜಾರಿಗೆ ತರಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಅವರು ಪ್ರಕಟಿಸಿದರು. ಅವರು ಜೂ.7ರ ಬುಧವಾರ ಮೂಡುಬಿದಿರೆ ಆರೋಗ್ಯ ಕೇಂದ್ರದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಂಗಳೂರು ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಕಾರ್ಡಿಯಾಲಜಿ ಡೋರ್‍ಸ್ಟೆಪ್ ಫೌಂಡೇಶನ್ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಹೃದಯ ತಜ್ಞ ಡಾ. ಪದ್ಮನಾಭ ಕಾಮತ್ ಹಾಗೂ ತಂಡದವರಿಂದ ಹೃದಯ ವೈಶಾಲ್ಯ ಯೋಜನೆ “ಹೃದಯ ತಜ್ಞ ಮನೆ ಬಾಗಿಲಿಗೆ” ಹೃದಯ ಸಂಬಂಧಿತ ಕಾಯಿಲೆಗಳ ಉಚಿತ ತಪಸಣಾ ಶಿಬಿರ ಹೃದಯ ವೈಶಾಲ್ಯ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.

‘ಈ ಯೋಜನೆಯನ್ನು ಮೊದಲ ಬಾರಿಗೆ ಜಾರಿಗೊಳಿಸಿರುವ ಬಗ್ಗೆ ರಾಜ್ಯದ ಪ್ರಧಾನ ಕಾರ್ಯದರ್ಶಿಯವರ ಗಮನಕ್ಕೆ ತರಲಾಗಿದೆ, ಹೃದಯ ವೈಶಾಲ್ಯ ಯೋಜನೆಯ ಸೂತ್ರಧಾರಿ ಹೃದಯ ತಜ್ಞ ಡಾ| ಪದ್ಮನಾಭ ಕಾಮತ್, ಅವರ ಚಿಂತನೆಯಲ್ಲಿ ಮೂಡಿ ಬಂದ ಹೃದಯ ವೈಶಾಲ್ಯ ಯೋಜನೆಯನ್ನು ಅನುಷ್ಠಾನ ಗೊಳಿಸಲಾಗಿದೆ. ಗ್ರಾಮೀಣ ಜನರ ಆರೋಗ್ಯದ ದೃಷ್ಠಿಯಿಂದ ವೈದ್ಯಕೀಯ ಸೌಲಭ್ಯಗಳು ಗ್ರಾಮೀಣ ಪ್ರದೇಶದಲ್ಲಿ, ಅವರ ಮನೆ ಬಾಗಿಲಲ್ಲೇ ಸಿಗಬೇಕೆನ್ನುವ ನಿಟ್ಟಿನಲ್ಲಿ ಹೃದಯ ವೈಶಾಲ್ಯ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಪ್ರತೀ ಬುಧವಾರ ತಜ್ಞ ವೈದ್ಯರು ಸಂಬಂಧಪಟ್ಟಂತಹ ಪ್ರಾಥಮಿಕ ಆರೋಗ್ಯಕೇಂದ್ರ ಅಥವಾ ಸಮುದಾಯ ಆರೋಗ್ಯ ಕೇಂದ್ರಕ್ಕೆ ಬಂದು ಸಾರ್ವಜನಿಕರನ್ನು ಉಚಿತವಾಗಿ ತಪಾಸಣೆ ಮಾಡಲಾಗುವುದು. ಇದರ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು. ವೈದ್ಯಕೀಯ ಸೌಲಭ್ಯಗಳು ಗ್ರಾಮೀಣ ಪ್ರದೇಶಗಳ ಜನರ ಮನೆ ಬಾಗಿಲಲ್ಲೇ ಸಿಗಬೇಕೆಂಬ ದೂರದೃಷ್ಠಿಯನ್ನಿಟ್ಟುಕೊಂಡು ಈ ಯೋಜನೆಯನ್ನು ರೂಪಿಸಲಾಗಿದೆ, ಗ್ರಾಮೀಣ ಜನರು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಿ’ ಎಂದು ಹೇಳಿದರು.

ಹೃದಯ ತಜ್ಞ ಡಾ. ಪದ್ಮನಾಭ ಕಾಮತ್ ಪ್ರಾಸ್ತಾವಿಕವಾಗಿ ಮಾತನಾಡಿ, ಹೃದಯ ವೈಶಾಲ್ಯ ಯೋಜನೆ ಜಿಲ್ಲೆಗೆ ಮಾತ್ರ ಸೀಮಿತವಾಗದೇ, ರಾಜ್ಯ ಮಟ್ಟದಲ್ಲಿ ಬೆಳೆಯಲಿ ಎನ್ನುವ ಆಶಯವಿದೆ. ಈ ಯೋಜನೆಯನ್ನು ಯಶಸ್ವಿಗೊಳಿಸುವ ಜವಾಬ್ದಾರಿ ಊರಿನ ಜನರು ಹಾಗೂ ಆರೋಗ್ಯಾಧಿಕಾರಿಗಳ ಮೇಲಿದೆ. ಪ್ರತಿಯೊಂದು ಊರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಸಿಎಚ್‍ಓ ಹಾಗೂ ಇಲ್ಲಿನ ಆರೋಗ್ಯಾಧಿಕಾರಿಗಳು ಈ ಕರ್ತವ್ಯವನ್ನು ನಿರ್ವಹಿಸಲಿದ್ದಾರೆ. ಈ ಯೋಜನೆಯನ್ನು ಮುಂದೆಯೂ ಎಲ್ಲಾ ಕಡೆಗಳಲ್ಲಿ ಅನುಷ್ಠಾನ ತರಲಾಗುವುದು ಎಂದರು.ಇನ್ನು ಈ ಕಾರ್ಯಕ್ರಮದಲ್ಲಿ ಪುರಸಭಾಧ್ಯಕ್ಷ ಪ್ರಸಾದ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಪುರಸಭಾ ಸದಸ್ಯೆ ಶ್ವೇತಾ ಪ್ರವೀಣ್ ಜೈನ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಹಾಗೂ ನೋಡಲ್ ಅಧಿಕಾರಿ ಡಾ| ಜಗದೀಶ್, ಪುರಸಭಾ ಮುಖ್ಯಾಧಿಕಾರಿ ಶಿವ ನಾಯ್ಕ್ ಮಂಗಳೂರು ತಾಲೂಕು ಆರೋಗ್ಯಧಿಕಾರಿ ಸುಜಯ್, ವಕೀಲ ಬಾಹುಬಲಿ ಪ್ರಸಾದ್, ಮತ್ತಿತರ ವೈದ್ಯಾಧಿಕಾರಿಗಳು, ಸಿಬ್ಬಂದಿವರ್ಗ, ಫಲಾನುಭವಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Ashitha S

Recent Posts

ಮೈಸೂರು ಜಿಲ್ಲೆಯಲ್ಲಿ ಶೇ.75ರಷ್ಟು ಮಳೆ ಕೊರತೆ

ಈ ಬಾರಿ ಮುಂಗಾರು ಕೈಕೊಟ್ಟಿದ್ದರಿಂದ ಜಿಲ್ಲೆಯಲ್ಲಿ ಅಂತರ್ಜಲ ಕುಸಿದಿದ್ದು, ಬಿತ್ತನೆಯ ನಿರೀಕ್ಷೆಯಲ್ಲಿದ್ದ ರೈತರಿಗೆ ನಿರಾಸೆಯಾಗಿದೆ. ಕಳೆದ ನಾಲ್ಕು ತಿಂಗಳಲ್ಲಿ ವಾಡಿಕೆಯಷ್ಟು…

8 hours ago

ಮುರುಘಾ ಶರಣರಂತೆ ಪ್ರಜ್ವಲ್‌ ರೇವಣ್ಣನನ್ನು ಬಂಧಿಸಿ: ಮಾರಸಂದ್ರ ಮುನಿಯಪ್ಪ

'ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪದಡಿ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರನ್ನು ಬಂಧಿಸಿರುವಂತೆ ಹಾಸನದ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ…

8 hours ago

ಯುವತಿಯ ಮೇಲೆ ಅತ್ಯಾಚಾರವೆಸಗಿ ವೀಡಿಯೋ ಹರಿಬಿಟ್ಟ ನಾಲ್ವರು ಅಪ್ರಾಪ್ತರ ಬಂಧನ

ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಕೃತ್ಯವನ್ನು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ  ಹರಿಬಿಟ್ಟ ಘಟನೆ ಏಪ್ರಿಲ್ 21 ರಂದು…

8 hours ago

ಸ್ವತಂತ್ರರಾಗಿ ಬದುಕಲು ಸ್ವತಂತ್ರ ಅಭ್ಯರ್ಥಿಯನ್ನು ಬೆಂಬಲಿಸಿ: ಕೆ. ಬುಕ್ಕಾ ಮನವಿ

ಜಿಲ್ಲೆಯ ಜ‌ನ ಸ್ವತಂತ್ರರಾಗಿ ಬದುಕಬೇಕಾದರೆ‌ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನನಗೆ ಬೆಂಬಲಿಸಿ ಮತ ಹಾಕಬೇಕೆಂದು ಪಕ್ಷೇತರ ಅಭ್ಯರ್ಥಿ ಜೈರಾಜ ಕೆ.…

9 hours ago

ವಕೀಲರೊಬ್ಬರ ಮೇಲೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಹಲ್ಲೆ

ವಕೀಲರೊಬ್ಬರ ಮೇಲೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ.

9 hours ago

ಪಾದಯಾತ್ರೆ ನಡೆಸಿ ಮತಯಾಚಿಸಿದ ಶಾಸಕ ಅಶೋಕ್ ಮನಗೂಳಿ

ಭಾನುವಾರ ಸಂಜೆ ಅಲ್ಮೆಲ್ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಮತ್ತು ಶಾಸಕ ಅಶೋಕ ಮನಗೂಳಿಯವರು ಪಾದಯಾತ್ರೆ ನಡೆಸಿ ಮತಯಾಚಿಸಿದರು.

9 hours ago