News Karnataka Kannada
Monday, April 29 2024
ಆರೋಗ್ಯ

ಮಳೆಗಾಲದಲ್ಲಿ ಅನಾರೋಗ್ಯದಿಂದ ದೂರ ಇರಲು ರೋಗ ನಿರೋಧಕ ಶಕ್ತಿ ಅತ್ಯಗತ್ಯ

Immunity food
Photo Credit : Pixabay

ಮಳೆಗಾಲ ಬಂತೆಂದರೆ ಹಲವರಿಗೆ ಅನಾರೋಗ್ಯ ಕಾಡುವ ತಲೆ ಬಿಸಿಯಾಗುವುದುಂಟು.  ಆದರೆ, ಅದರಿಂದ ದೂರ ಉಳಿಯಬೇಕೆಂದರೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವುದು ಅತ್ಯಗತ್ಯ. ಈ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಪೌಷ್ಟಿಕಾಂಶಯುಕ್ತ ಆಹಾರ ಸೇವನೆ ಬಹಳ ಮುಖ್ಯವಾಗುತ್ತದೆ.

ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಮೊದಲು ನಮ್ಮ ಆಹಾರದ ಕ್ರಮವನ್ನು ಬದಲಾಯಿಸಿಕೊಳ್ಳಬೇಕು. ಜಂಕ್ ಫುಡ್ ಗಳನ್ನು ತೊರೆದು, ಸೊಪ್ಪು, ತರಕಾರಿ, ಹಣ್ಣುಗಳ ಸೇವನೆ ಮಾಡಬೇಕು.

ಶುಂಠಿ, ಲವಂಗ, ಕರಿಮೆಣಸು, ದಾಲ್ಚಿನ್ನಿ ಮತ್ತು ಅರಿಶಿನವನ್ನು ಪ್ರತಿನಿತ್ಯ ಸೇವನೆ ಮಾಡುವುದರಿಂದಲೂ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದು.
ಕಿತ್ತಳೆ ಹಣ್ಣು, ಮೋಸಂಬಿ ಹಣ್ಣು, ನಿಂಬೆಹಣ್ಣು, ದ್ರಾಕ್ಷಿ ಹಣ್ಣುಗಳನ್ನು ಸೇವನೆ ಮಾಡಬೇಕು. ಹುಳಿ ಮತ್ತು ಸಿಹಿ ಮಿಶ್ರಣದ ಈ ಹಣ್ಣುಗಳು ನಮ್ಮ ದೇಹದಲ್ಲಿ ಸೋಂಕುಗಳ ವಿರುದ್ಧ ಹೋರಾಡುವ ಗುಣವನ್ನು ಪಡೆದುಕೊಂಡಿರುತ್ತದೆ.

ಇದರ ಸೇವನೆಯಿಂದ ನಮಗೆ ಕೆಮ್ಮು, ಕಫ, ಶೀತ, ನೆಗಡಿ ಆದಂತಹ ಸಂದರ್ಭದಲ್ಲಿ ಅಥವಾ ಮಳೆಗಾಲ ಜೊತೆಗೆ ಚಳಿಗಾಲದ ಸಮಯದಲ್ಲಿ ನಮ್ಮ ದೇಹದ ತಾಪಮಾನವನ್ನು ಹೆಚ್ಚು ಮಾಡಿ ಸೋಂಕುಗಳಿಗೆ ದೇಹದಲ್ಲಿ ಜಾಗ ಇಲ್ಲದಂತೆ ಮಾಡುತ್ತದೆ.

ದೇಹದಲ್ಲಿ ಕೆಂಪು ರಕ್ತ ಕಣಗಳ ಸಂಖ್ಯೆ ಹೆಚ್ಚಾಗುವಂತೆ ಮಾಡಿ ಜೊತೆಗೆ ಬಿಳಿ ರಕ್ತಕಣಗಳ ಸಂಖ್ಯೆಯನ್ನು ಅಭಿವೃದ್ಧಿಪಡಿಸಿ ರೋಗನಿರೋಧಕ ವ್ಯವಸ್ಥೆಯನ್ನು ಬಲಪಡಿಸುತ್ತದೆ.
ಮೊಳಕೆ ಕಾಳುಗಳು, ಬಾದಾಮಿ, ವಾಲ್ನಟ್ಸ್, ಗೋಡಂಬಿ, ಕುಂಬಳಕಾಯಿ ಬೀಜಗಳು, ಚಿಯಾ ಬೀಜಗಳು, ಅಗಸೆ ಬೀಜಗಳ ಸೇವನೆ ಮೂಲಕವೂ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು