ಮಂಗಳೂರು: ಬಿಸಿಲಿನ ಝಳ ಹೆಚ್ಚಳ, ಬೇಕಿದೆ ಆರೋಗ್ಯ ಕಾಳಜಿ

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಉಷ್ಣಾಂಶ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮಾಹಿತಿಯಂತೆ ಮಂಗಳೂರಿನಲ್ಲಿ ಗುರುವಾರ 36.9 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗಿದೆ. ಇದು ದೇಶದಲ್ಲಿಯೇ ಅತ್ಯಧಿಕವಾಗಿದ್ದು, ವಾಡಿಕೆಗಿಂತ 3 ಡಿಗ್ರಿ ಸೆಲ್ಸಿಯಸ್‌ ಹೆಚ್ಚಳವಾಗಿದೆ. ಕನಿಷ್ಠ ತಾಪಮಾನ 23.8 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ವಾಡಿಕೆಗಿಂತ 1 ಡಿಗ್ರಿ ಸೆಲ್ಸಿಯಸ್‌ ಏರಿಕೆಯಾಗಿದೆ. 2017ರಲ್ಲಿ 37.9 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗಿದ್ದು ಮಾರ್ಚ್‌ ತಿಂಗಳ ಈವರೆಗಿನ ದಾಖಲೆಯಾಗಿದೆ. ಉಭಯ ಜಿಲ್ಲೆಗಳಲ್ಲಿ ದಿನವಿಡೀ ಸೆಕೆ ಮತ್ತು ಉರಿಬಿಸಿಲಿನಿಂದ ಕೂಡಿದ ವಾತಾವರಣವಿತ್ತು. ಬೆಳಗ್ಗೆ ಮೋಡ ಕವಿದ ವಾತಾವರಣವಿತ್ತು.

ಆರೋಗ್ಯ ಕಾಳಜಿ ಅಗತ್ಯ: ಹೆಚ್ಚುತ್ತಿರುವ ಬಿಸಿಲಿನ ಝಳ ದೇಹವನ್ನು ಸುಡುವಂತೆ ಮಾಡಲಿದೆ. ಜತೆಗೆ ಸುಟ್ಟ ಗಾಯಗಳೂ ಉಂಟಾಗಬಹುದು. ಇಂತಹ ಸೂರ್ಯನ ಕಿರಣ ಸಾಂಕ್ರಾಮಿಕ ರೋಗ ಹರಡಲು ಕಾರಣವಾಗಲಿದೆ. ಈ ಬಗ್ಗೆ ಗಮನಹರಿಸುವುದು ಅಗತ್ಯ.

ಹಿರಿಯ ನಾಗರಿಕರು, ಮಕ್ಕಳು, ರೋಗಿಗಳು, ಗರ್ಭಿಣಿಯರು ಮತ್ತು ಬಿಸಿಲಿನಲ್ಲಿ ದುಡಿಯುವವರು ಗಮನ ಹರಿಸುವುದು ಅಗತ್ಯ. ಇಂತಹ ಸಮಯದಲ್ಲಿ ಧಾರಾಳ ನೀರು ಕುಡಿಯವ ಮೂಲಕ ನಿರ್ಜಲೀಕರಣ ಸಮಸ್ಯೆ ತಡೆಗಟ್ಟಬೇಕು. ತಣ್ಣೀರನ್ನು ಕುಡಿಯಯವವರು ಅದರ ಶುದ್ಧತೆ ಬಗ್ಗೆ ಗಮನ ಹರಿಸಬೇಕು. ಬಿಸಿಲಿನಲ್ಲಿ ದುಡಿಯುವವರು ತಲೆಗೆ ಟೋಪಿ ಬಳಕೆ ಮಾಡಬೇಕು.

ಮಧ್ಯಾಹ್ನ ಹೊತ್ತು ರಸ್ತೆಗಳು ಖಾಲಿ: ಮಂಗಳೂರು ನಗರದಲ್ಲಿ ಮಧ್ಯಾಹ್ನವಾಗುತ್ತಿದ್ದಂತೆ ಬಿಸಿಲಿನ ಝಳದಿಂದ ರಸ್ತೆಗಳಲ್ಲಿ ಜನರ ಓಡಾಟ ಕಡಿಮೆಯಾಗುತ್ತಿದೆ. ತೀವ್ರ ಸಖೆ, ಉರಿ ವಾತಾವರಣದಿಂದ ಜನರು ಮನೆಯಿಂದ ಹೊರಬರಲು ತ್ರಾಸಪಡುತ್ತಿರುವುದು ಕಂಡುಬಂದಿದೆ.

Ashika S

Recent Posts

ಯುಎಇ ರಾಯಲ್‌ ಮನೆತನದ ಸದಸ್ಯನ ನಿಗೂಢ ಸಾವು

ಯುನೈಟೆಡ್ ಅರಬ್ ಎಮಿರೇಟ್ಸ್‌ನ  ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…

2 hours ago

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

2 hours ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

3 hours ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

4 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

4 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

5 hours ago