News Karnataka Kannada
Monday, April 29 2024
ಬೆಂಗಳೂರು ಗ್ರಾಮಾಂತರ

ಯೋಗದಿಂದ ಮಾನಸಿಕ, ದೈಹಿಕ ಸದೃಢತೆ ಸಾಧ್ಯ

Beng
Photo Credit :

ಬೆಂಗಳೂರು ಗ್ರಾಮಾಂತರ: ಆರೋಗ್ಯ ಕಾಪಾಡಿಕೊಳ್ಳಲು ಯೋಗ ಸಹಕಾರಿಯಾಗಿದ್ದು, ನಿರಂತರವಾಗಿ ಯೋಗವನ್ನು  ಮಾಡುವುದರಿಂದ ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಢವಾಗಲು ಸಾಧ್ಯವಾಗಲಿದೆ ಎಂದು ಪೌರಾಡಳಿತ, ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರಾದ ಎನ್.ನಾಗರಾಜು(ಎಂ.ಟಿ.ಬಿ) ಅವರು ತಿಳಿಸಿದರು.

೮ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ,  ಜಿಲ್ಲಾ ಆಯು? ಇಲಾಖೆ ಸಹಯೋಗದೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಟೌನ್ ಕ್ರೀಡಾಂಗಣದಲ್ಲಿಂದು ಏರ್ಪಡಿಸಲಾದ ಜಿಲ್ಲಾ ಮಟ್ಟದ ಯೋಗ ದಿನಾಚರಣೆ ಕಾರ್ಯಕ್ರಮವನ್ನು ದೀಪ ಬೆಳಗುವ ಮೂಲಕ ಉದ್ಘಾಟಿಸಿ, ಅವರು ಮಾತನಾಡಿದರು.

ಅಧಿಕಾರಿಗಳು ಕ್ರೀಯಾಶೀಲರಾಗಿ ಕೆಲಸ ಮಾಡಲು ಯೋಗ ಸಹಕಾರಿಯಾಗಲಿದ್ದು, ಯೋಗ ಮಾಡುವುದರಿಂದ ನಮ್ಮ  ಆರೋಗ್ಯವನ್ನು ರಕ್ಷಿಸಿಕೊಳ್ಳಬಹುದು ಹಾಗೂ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಬಹುದಾಗಿದೆ. ದಿನನಿತ್ಯ ಎಲ್ಲರೂ ಯೋಗಾಭ್ಯಾಸ ಮಾಡುವ ಮೂಲಕ ಆರೋಗ್ಯವಂತ ರಾಜ್ಯ ಮತ್ತು ರಾಷ್ಟ್ರವನ್ನು ನಿರ್ಮಾಣ ಮಾಡಲು ಕೈಜೋಡಿಸಬೇಕೆಂದು ಹೇಳಿದರು.

ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ನಿಸರ್ಗ ನಾರಾಯಣಸ್ವಾಮಿ ಎಲ್.ಎನ್. ಅವರು ಮಾತನಾಡಿ, ಅಧಿಕ ರಕ್ತದೊತ್ತಡ, ಮಧುಮೇಹ ಸೇರಿದಂತೆ ಹಲವಾರು ಖಾಯಿಲೆಗಳ ನಿಯಂತ್ರಣಕ್ಕೆ ಯೋಗ ಅನುಕೂಲಕರವಾಗಿದೆ ಎಂದರಲ್ಲದೆ, ದೀರ್ಘವಾಗಿ ಉಸಿರಾಡುವುದರಿಂದ ಶ್ವಾಸಕೋಶಕ್ಕೆ ಆಮ್ಲಜನಕ ಸರಬರಾಜಾಗುತ್ತದೆ ಹಾಗೂ ರಕ್ತದಲ್ಲಿ ಹಿಮೋಗ್ಲೋಬಿನ್ ಪ್ರಮಾಣ ಹೆಚ್ಚಳವಾಗುವ ಮೂಲಕ ದೈಹಿಕ ಹಾಗೂ ಮಾನಸಿಕವಾಗಿ ಆರೋಗ್ಯ ವೃದ್ಧಿಸುತ್ತದೆ ಎಂದು ಯೋಗ ಮತ್ತು ಪ್ರಾಣಾಯಾಮದ ಮಹತ್ವ ತಿಳಿಸಿದರು.

ದೇವನಹಳ್ಳಿ ಕ್ರೀಡಾಂಗಣದಲ್ಲಿ ೪೫ ನಿಮಿಷಗಳ ಕಾಲ ನಡೆದ ಯೋಗಾಭ್ಯಾಸದಲ್ಲಿ ವಿದ್ಯಾರ್ಥಿಗಳು ಸೇರಿದಂತೆ ಸುಮಾರು  ೨೦೦೦ಕ್ಕೂ ಅಧಿಕ ಯೋಗಾಸಕ್ತರು ಭಾಗವಹಿಸಿದ್ದರು.

ಇದೇ ವೇಳೆ, ವಿದ್ಯಾರ್ಥಿಗಳಿಗೆ ಪರಿಸರ ಜಾಗೃತಿ ಮೂಡಿಸುವ ಉದ್ದೇಶದಿಂದ ಕ್ರೀಡಾಂಗಣದ ಆವರಣದಲ್ಲಿ ದೇವನಹಳ್ಳಿ  ವಿಧಾನಸಭಾ ಕ್ಷೇತ್ರದ ಶಾಸಕ ನಿಸರ್ಗ ನಾರಾಯಣಸ್ವಾಮಿ ಎಲ್.ಎನ್. ಹಾಗೂ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಗಿಡ ನೆಟ್ಟು ನೀರೆರೆದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ರೇವಣಪ್ಪ, ಯುವ ಸಬಲೀಕರಣ ಮತ್ತು  ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಗೀತಾ, ಆಯುಷ್ ಇಲಾಖೆಯ ವೈದ್ಯಾಧಿಕಾರಿ ಡಾ. ವಿಜಯಲಕ್ಷ್ಮಿ, ವಿವಿಧ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು