ಮೂಡುಬಿದಿರೆ: ಪಾಲಡ್ಕದಲ್ಲಿ ಗ್ರಾಮ ಆರೋಗ್ಯ ಅಭಿಯಾನ – ಆರೋಗ್ಯ ಶಿಬಿರ

ಮೂಡುಬಿದಿರೆ: ಪಾಲಡ್ಕ ಗ್ರಾಮ ಪಂಚಾಯಿತಿ, ಪಾಲಡ್ಕ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಕೆಎಚ್‌ಪಿಟಿ ಸಹಯೋಗದಲ್ಲಿ ನರೇಗಾ ಕೂಲಿಕಾರರಿಗೆ ಗ್ರಾಮ ಆರೋಗ್ಯ ಅಭಿಯಾನದಡಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮವನ್ನು ಪಾಲಡ್ಕ ಗ್ರಾಪಂ ಕಾರ್ಯಾಲಯದಲ್ಲಿ ಉದ್ಘಾಟಿಸಲಾಯಿತು.

ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ದಯಾವತಿ ಎಂ. ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ತಾಲೂಕಿನಲ್ಲಿ ಉದ್ಯೋಗ ಖಾತರಿ ಯೋಜನೆಯಡಿ ಅನೇಕ ಕೃಷಿಕರು ಕೃಷಿ ಹಾಗೂ ವಿವಿಧ ಕಾಮಗಾರಿಗಳನ್ನು ತಮ್ಮ ಜಮೀನಿನಲ್ಲಿ ಮಾಡಿಸಿಕೊಂಡಿದ್ದು, ಅಂತಹ ನರೇಗಾ ಕೂಲಿ ಕಾರ್ಮಿಕರ ಉತ್ತಮ ಆರೋಗ್ಯ ದೃಷ್ಟಿಯಿಂದ ಗ್ರಾಮ ಆರೋಗ್ಯ ಅಭಿಯಾನವನ್ನು ಆಯೋಜಿಸಲಾಗಿದೆ ಎಂದರು.

ಸಮುದಾಯ ಆರೋಗ್ಯಾಧಿಕಾರಿ ಸಾಗರ್ ಮಾತನಾಡಿ, ಆಹಾರ ಪದ್ಧತಿಯಿಂದಾಗಿ ಇಂದು ಜನರ ಆರೋಗ್ಯದಲ್ಲಿ ವೈಪರೀತ್ಯವಾಗುತ್ತದೆ. ಯೋಗ, ವ್ಯಾಯಾಮ ಹಾಗೂ ಪೌಷ್ಠಿಕ ಆಹಾರ ಸೇವನೆಯಿಂದ ಆರೋಗ್ಯ ವೃದ್ಧಿಸಲಿದೆ ಎಂದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನೇಶ್ ಕಾಂಗ್ಲಾಯಿ., ಉಪಾಧ್ಯಕ್ಷ ಸುಕೇಶ್ ಶೆಟ್ಟಿ, ಪಿಡಿಒ ರಕ್ಷಿತಾ ಡಿ., ದ್ವೀತಿಯ ದರ್ಜೆ ಲೆಕ್ಕಸಹಾಯಕರು ಮೋಹಿನಿ, ತಾಲೂಕು ಐಇಸಿ ಸಂಯೋಜಕಿ ಅನ್ವಯಾ, ಗ್ರಾಪಂ ಸದಸ್ಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

Ashika S

Recent Posts

ಪ್ರಜ್ವಲ್‌ ರೇವಣ್ಣ ಪ್ರಧಾನಿ ಮೋದಿಯವರ ನಿಜವಾದ ಪರಿವಾರ: ಜಿಗ್ನೇಶ್‌ ಮೇವಾನಿ

'ಸುಮಾರು ಮೂರು ಸಾವಿರ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಎದುರಿಸುತ್ತಿರುವ ಹಾಸನದ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಪ್ರಜ್ವಲ್‌…

13 mins ago

ರಾಜು ಆಲಗೂರರಿಗೆ ಕುರುಬ ಸಮಾಜದ ಬೆಂಬಲ

ಕುರುಬ ಸಮಾಜ ಯಾವತ್ತೂ ನ್ಯಾಯದ ಪರವಾಗಿದೆ. ಹಾಗಾಗಿ ಯೋಗ್ಯ ಅಭ್ಯರ್ಥಿಯಾದ ರಾಜು ಆಲಗೂರರಿಗೆ ಬೆಂಬಲ ನೀಡುತ್ತದೆ ಎಂದು ಮಾಜಿ ಜಿಪಂ…

59 mins ago

ಹೊಸ ಕಥೆ ಮೂಲಕ ಮತ್ತೆ ಒಟಿಟಿಗೆ ಬರಲಿದೆ ಆ್ಯನಿಮೇಟೆಡ್ ಬಾಹುಬಲಿ – ಕ್ರೌನ್​ ಆಫ್​ ಬ್ಲಡ್​

ಬಾಕ್ಸ್​ ಆಫೀಸ್​ನಲ್ಲಿ ಇತಿಹಾಸ ಸೃಷ್ಟಿಸಿದ್ದ ‘ಬಾಹುಬಲಿ 1’ ಮತ್ತು ‘ಬಾಹುಬಲಿ 2’ ಸಿನಿಮಾಗಳ ಆ್ಯನಿಮೇಟೆಡ್​ ಸೀರಿಸ್​ ಬರುತ್ತಿದೆ. ಇದಕ್ಕೆ ‘ಬಾಹುಬಲಿ:…

1 hour ago

ಚುನಾವಣೆಯ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಗೆ ಮಧ್ಯಂತರ ಜಾಮೀನು ಸಾಧ್ಯತೆ

ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್  ಅವರಿಗೆ ಲೋಕಸಭಾ ಚುನಾವಣೆಯ  ಪ್ರಚಾರಕ್ಕಾಗಿ ಮಧ್ಯಂತರ ಜಾಮೀನು ನೀಡುವ ಸಾಧ್ಯತೆಯನ್ನು ಪರಿಶೀಲಿಸುವುದಾಗಿ ಸುಪ್ರೀಂ…

2 hours ago

ಹಜ್ ಯಾತ್ರಾರ್ಥಿಗಳಿಗೆ ಉಚಿತ ಲಸಿಕಾ ಕಾರ್ಯಕ್ರಮ

ಪ್ರಸಕ್ತ ಸಾಲಿನಲ್ಲಿ ಹಜ್ ಯಾತ್ರೆಗೆ ತೆರಳುವ ಯಾತ್ರಾರ್ಥಿಗಳಿಗೆ ಜಿಲ್ಲಾ ವಕ್ಫ್ ಮಂಡಳಿ, ಜಿಲ್ಲಾಸ್ಪತ್ರೆ ಹಾಗೂ ತಾಜಿರಾನ್ ಮಸೀದಿ ಸಹಯೋಗದಲ್ಲಿ ನಗರದ…

2 hours ago

ಮೋದಿ ಮತ್ತೊಮ್ಮೆ ಪ್ರಧಾನಿಯಾಗಲೆಂದು ಮಹಿಳೆಯರಿಂದ ವಿಶೇಷ ಪೂಜೆ, ಪ್ರಾರ್ಥನೆ

ದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದು ಹೆಮ್ಮೆಯ ನಾಯಕ ನರೇಂದ್ರ ಮೋದಿಯವರು ಮತ್ತೊಮ್ಮೆ ದೇಶದ ಪ್ರಧಾನಿಯಾಗಲಿ ಎಂದು ಪ್ರಾರ್ಥಿಸಿ ವಿಜಯಪುರ…

2 hours ago