Categories: ಆರೋಗ್ಯ

ಮಲಬದ್ಧತೆಗೆ ಸಂಭಂದಪಟ್ಟ ಕೊರತೆಗಳನ್ನು ಕಡಿಮೆ ಮಾಡಲು ಸಹಕಾರಿ ‘ಸಪೋಟ ಹಣ್ಣು’

ಉತ್ಕರ್ಷಣ ನಿರೋಧಿ ಅಂಶಗಳಿಂದ ಶ್ರೀಮಂತವಾಗಿರುವ ಸಪೋಟ ವಿಟಮಿನ್ ಇ, ಎ, ಸಿ ಮತ್ತು ಕಬ್ಬಿಣ ಮತ್ತು ತಾಮ್ರದ ಗುಣಗಳನ್ನು ಹೊಂದಿದೆ. ಇದರಲ್ಲಿ ಇರುವಂತಹ ವಿಟಮಿನ್ ಎ, ಸಿ, ಇ ಮತ್ತು ಕೆ ಚರ್ಮವನ್ನು ಹೈಡ್ರೇಟ್ ಆಗಿಡುವುದು ಮತ್ತು ಚರ್ಮದ ಅಂಗಾಂಶ ಗಳನ್ನು ಪುನರ್ಶ್ಚೇತನಗೊಳಿಸುವುದು.

ವಿಟಮಿನ್ ಎ ಅಂಶವನ್ನು ಹೊಂದಿರುವ ಚಿಕ್ಕುವಿನಿಂದ ಕಣ್ಣಿನ ದೃಷ್ಟಿ ಸುಧಾರಣೆಯಾಗುತ್ತದೆ. ಸಪೋಟದಲ್ಲಿ ವಿಟಮಿನ್ ‘ಎ’ ಹೇರಳವಾಗಿದೆ. ಇದು ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಲು ನೆರವಾಗುತ್ತದೆ. ಈ ಹಣ್ಣಿನಲ್ಲಿ ವಿಟಮಿನ್ ಬಿ-ಕಾಂಪ್ಲೆಕ್ಸ್ ಹೇರಳವಾಗಿರುವ ಕಾರಣ ಈ ಗುಂಪಿನ ವಿಟಮಿನ್ನುಗಳಿಂದ ದೊರಕುವ ಎಲ್ಲಾ ಪ್ರಯೋಜನಗಳು ದೊರಕುತ್ತವೆ.

ಸಪೋಟ ಹಣ್ಣಿನಲ್ಲಿ ನಾರಿನಾಂಶ ಹೆಚ್ಚಾಗಿ ಇರುವುದರಿಂದ ಮಲಬದ್ಧತೆಗೆ ಸಂಭಂದಪಟ್ಟ ಕೊರತೆಗಳನ್ನು ಕಡಿಮೆ ಮಾಡಲು ಸಹಾಯಮಾಡುತ್ತದೆ. ತಾಜಾ ಸಪೋಟವನ್ನು ಹಾಗೆಯೇ ತಿಂದರೆ ಜೀರ್ಣಕ್ರಿಯೆಗೆ ಬೇಕಾದ ನಾರಿನಂಶವನ್ನು ದೇಹ ಪಡೆಯಲು ಸಾಧ್ಯವಾಗುತ್ತದೆ.

ಸಪೋಟದಲ್ಲಿರುವ ಕಾರ್ಬೋಹೈಡ್ರೇಟ್ಸ್ ಮತ್ತು ಪೋಷಕಾಂಶಗಳು ಗರ್ಭಿಣಿಯರಿಗೆ ತುಂಬಾ ಒಳ್ಳೆಯದು. ಇದರಿಂದ ವಾಕರಿಕೆ, ತಲೆ ತಿರುಗುವುದು, ಸುಸ್ತು ಕಡಿಮೆಯಾಗುತ್ತದೆ. ಇದರ ಬೀಜಗಳನ್ನು ಅರೆದು ಪೇಸ್ಟ್‌ ಮಾಡಿ ಹರಳೆಣ್ಣೆಯ ಜೊತೆ ಮಿಶ್ರಣ ಮಾಡಿಕೊಂಡು ನೆತ್ತಿಯಮೇಲೆ ಹಚ್ಚಿ. ಒಂದು ರಾತ್ರಿಕಳೆದು ಮಾರನೇ ದಿನ ಚೆನ್ನಾಗಿ ತೊಳೆಯಿರಿ. ಇದರಿಂದ ನಿಮ್ಮ ಕೂದಲು ಮೃದುವಾಗುವುದಲ್ಲದೆ ತಲೆಹೊಟ್ಟಿನ ಸಮಸ್ಯೆಯನ್ನು ನಿಯಂತ್ರಿಸಬಹುದು

ಸಪೋಟದಲ್ಲಿ ಹೇರಳವಾಗಿರುವ ಪೊಟಾಶಿಯಂ ಅಂಶವು ದೇಹದ ಮಾಂಸಖಂಡಗಳ ಬಲವರ್ಧನೆಗೆ ನೆರವಾಗುತ್ತದೆ. ಸಪೋಟದಲ್ಲಿರುವ ಅತಿ ಹೆಚ್ಚಿನ ಟ್ಯಾನಿನ್ ಅಂಶವು ಪ್ರಮುಖ ಉರಿಯೂತ ವಿರೋಧಿ ಗುಣಗಳನ್ನು ಹೊಂದಿರುತ್ತದೆ.

ಸಪೋಟ ಹಣ್ಣಿನಲ್ಲಿರುವ ಕ್ಯಾಲ್ಸಿಯಂ, ಗಂಧಕ, ಕಬ್ಬಿಣ ಹಾಗೂ ಇತರ ಖನಿಜಗಳು ಮೂಳೆಗಳನ್ನು ಆರೋಗ್ಯಕರವಾಗಿ ಹಾಗೂ ದೃಢಯುತವಾಗಿರಿಸಲು ನೆರವಾಗುತ್ತವೆ. ಸಪೋಟ ರಕ್ತ ಶುದ್ಧಿ ಮಾಡುತ್ತದೆ ಹಾಗೂ ದೇಹದಲ್ಲಿ ರಕ್ತ ಉತ್ಪಾದಿಸಲು ಸಹಾಯ ಮಾಡುತ್ತದೆ.

ಇದರಲ್ಲಿರುವ ಪ್ರಬಲ ನಿದ್ರಾಜನಕ ಉದ್ರೇಕಗೊಂಡಿರುವ ನರಗಳನ್ನು ಶಾಂತಗೊಳಿಸಿ ಒತ್ತಡವನ್ನು ಕಡಿಮೆಮಾಡುತ್ತದೆ. ಆದ್ದರಿಂದ ನಿದ್ರಾಹೀನತೆ, ಆತಂಕ ಮತ್ತು ಖಿನ್ನತೆಯಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ಇದು ಬಹಳ ಒಳ್ಳೆಯದು.

Sneha Gowda

Recent Posts

ಅಂಜಲಿ ಹತ್ಯೆ ಪ್ರಕರಣ: ನನ್ನ ಮಗನಿಗೆ ಕೋರ್ಟ್ ಯಾವ ಶಿಕ್ಷೆ ಬೇಕಾದರು ಕೊಡಲಿ ಎಂದ ಆರೋಪಿ ಗಿರೀಶ್ ತಾಯಿ

ನನ್ನ ಮಗ ಗಿರೀಶ್ ತಪ್ಪು ಮಾಡಿದ್ದಾನೆ. ಅವನಿಗೆ ಕೋರ್ಟ್ ಯಾವ ಶಿಕ್ಷೆ ಬೇಕಾದರು ಕೊಡಲಿ. ಅಂಜಲಿ ಮತ್ತು ಗಿರೀಶ್ ಪರಸ್ಪರ…

16 mins ago

ಸ್ವಾತಿ ಹಲ್ಲೆ ಪ್ರಕರಣ : ಹೊಸ CCTV ಫೂಟೇಜ್ ಬಿಡುಗಡೆ ಮಾಡಿದ ಎಎಪಿ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರು ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ…

17 mins ago

ಮರಕ್ಕೆ ಕಾರು ಡಿಕ್ಕಿ: ನಾಲ್ವರು ಕಾನೂನು ವಿದ್ಯಾರ್ಥಿಗಳು ಮೃತ್ಯು

ಅತಿ ವೇಗವಾಗಿ ಬಂದ ಕಾರೊಂದು ಭಯಾನಕವಾಗಿ ಇನ್ನೊಂದು ಕಾರಿಗೆ ಡಿಕ್ಕಿಯಾಗಿ ಮತ್ತೆ ಮರಕ್ಕೆ ರಭಸದಿಂದ ಗುದ್ದಿದ್ದರಿಂದ ನಾಲ್ವರು ಕಾನೂನು ವಿದ್ಯಾರ್ಥಿಗಳು…

38 mins ago

ಸಮಸ್ಯೆಗಳ ಆಗರ: ಮೂಲಸೌಕರ್ಯಗಳ ಕೊರತೆಗೆ ಬೇಸತ್ತ ಸಾರ್ವಜನಿಕರು

ಪಟ್ಟಣದಲ್ಲಿ ಮೂಲಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ. ಸ್ಥಳೀಯ ಆಡಳಿತದ ಕಾರ್ಯವೈಖರಿ ಬಗ್ಗೆ ಸಾರ್ವಜನಿಕರು ಬೇಸರಗೊಂಡಿದ್ದಾರೆ. ಪಟ್ಟಣದಲ್ಲಿ ಒಟ್ಟು 27 ವಾರ್ಡ್‌ಗಳು…

48 mins ago

ನಾಳೆ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನೆ

ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಮೇ.19 ರಂದು ಭಾನುವಾರ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ ಸಾಯಿಬಾಬಾ…

50 mins ago

ಚಾಮರಾಜನಗರದಲ್ಲಿ ಮುಂದುವರೆದ ಮಳೆ ಆರ್ಭಟ: ವಾಹನ ಸವಾರರ ಪರದಾಟ

ಗಡಿಜಿಲ್ಲೆ ವರುಣಾರ್ಭಟ ಮುಂದುವರೆದಿದ್ದು ಶನಿವಾರ ಮಧ್ಯಾಹ್ನದ ಜಿಲ್ಲಾಕೇಂದ್ರದಲ್ಲಿ ಒಂದೂವರೆ ತಾಸು ಜೋರು ಮಳೆಯಾಯಿತು.

1 hour ago