ಲಂಡನ್: ಕೆಫಿನ್ ಸಮೃದ್ಧವಾಗಿರುವ ಕಾಫಿಯನ್ನು ಕುಡಿಯುವುದರಿಂದ ದೇಹದ ಕೊಬ್ಬಿನ ಪ್ರಮಾಣವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಮತ್ತು ಟೈಪ್ 2 ಮಧುಮೇಹವನ್ನು ಅಪಾಯವನ್ನು ಕಡಿಮೆ ಮಾಡುತ್ತದೆ ಎಂದು ಅಧ್ಯಯನವೊಂದು ತಿಳಿಸಿದೆ. ಇಂಪೀರಿಯಲ್ ಕಾಲೇಜ್ ಲಂಡನ್ನ ಸಂಶೋಧಕರು ಈ ವಿಚಾರವನ್ನು ಬಹಿರಂಗ ಪಡಿಸಿದ್ದಾರೆ.
ಬಿಎಂಜೆ ಮೆಡಿಸಿನ್ ಜರ್ನಲ್ನಲ್ಲಿ ಪ್ರಕಟವಾದ ಸಂಶೋಧನೆಯು ದೇಹದಿಂದ ಕಾಫಿ ಚಯಾಪಚಯಗೊಳ್ಳುವ ವೇಗವು ತೂಕದ ಮೇಲೆ ಪರಿಣಾಮ ಬೀರಬಹುದು ಎಂದು ತಿಳಿಸಿದೆ.
ಹೆಚ್ಚಿನ ಪ್ಲಾಸ್ಮಾ ಕೆಫೀನ್ ಮಟ್ಟವನ್ನು ಹೊಂದಿರುವ ಜನರು ಕಡಿಮೆ ಬಾಡಿ ಮಾಸ್ ಇಂಡೆಕ್ಸ್ ಮತ್ತು ದೇಹದ ಕೊಬ್ಬನ್ನು ಹೊಂದಿರುತ್ತಾರೆ. ಜೊತೆಗೆ ಟೈಪ್ ಟು ಮಧುಮೇಹ ಅಪಾಯ ಕಡಿಮೆಯಾಗಲಿದೆ ಎಂದು ಸಂಶೋಧಕರು ತಿಳಿಸಿದ್ದಾರೆ.