News Karnataka Kannada
Sunday, April 28 2024
ಆರೋಗ್ಯ

ಸಾವಿರಾರು ಸ್ಯಾನಿಟರಿ ನ್ಯಾಪ್‌ ಕಿನ್‌ಗಳು ಸುಟ್ಟ ಸ್ಥಿತಿಯಲ್ಲಿ ಪತ್ತೆ

Thousands of sanitary napkins found burnt
Photo Credit : IANS

ಜೈಪುರ: ರಾಜಸ್ಥಾನದ ಝಾಲಾವರ್‌ನಲ್ಲಿ ಅಂಗನವಾಡಿ ಕೇಂದ್ರ ಮತ್ತು ಸರ್ಕಾರಿ ಶಾಲೆಗಳಿಗೆ ರಾಜಸ್ಥಾನ ವೈದ್ಯಕೀಯ ಸೇವಾ ನಿಗಮವು ವಿತರಿಸಿದ ಸಾವಿರಾರು ಸ್ಯಾನಿಟರಿ ನ್ಯಾಪ್‌ಕಿನ್‌ಗಳು ಪಟ್ಟಣದ ಬಾಬಾಜಿ ಕಿ ತಲೈ ಪ್ರದೇಶದ ಬಳಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿವೆ. ಅವುಗಳ ಮುಕ್ತಾಯ ದಿನಾಂಕ ಆಗಸ್ಟ್ 2025 ಆಗಿತ್ತು.

ಈ ಸ್ಯಾನಿಟರಿ ನ್ಯಾಪ್ಕಿನ್‌ಗಳನ್ನು ಆಟೋದಲ್ಲಿ ಅರಣ್ಯಕ್ಕೆ ತರಲಾಗಿದ್ದು, ನಂತರ ಸುಮಾರು 3,000 ಪ್ಯಾಕೆಟ್‌ಗಳನ್ನು ಸುಟ್ಟು ಹಾಕಲಾಗಿದೆ. ಈ ಬಗ್ಗೆ ಮಾಹಿತಿ ಪಡೆದು ವೈದ್ಯಕೀಯ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳ ತಂಡ ಸ್ಥಳಕ್ಕೆ ಧಾವಿಸಿದೆ. ಆದರೆ, ಅಧಿಕಾರಿಗಳ ಆಗಮನಕ್ಕೆ ಮೊದಲೇ ಸಾಕ್ಷ್ಯ ನಾಶ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಉಡಾನ್ ಯೋಜನೆಯಡಿ 19 ರಿಂದ  45 ವರ್ಷದೊಳಗಿನ ಮಹಿಳೆಯರು ಮತ್ತು ಹುಡುಗಿಯರಿಗೆ ಉಚಿತ ಸ್ಯಾನಿಟರಿ ನ್ಯಾಪ್ಕಿನ್ ಗಳನ್ನು ವಿತರಿಸಲು ರಾಜ್ಯ ಸರ್ಕಾರವು ಉಪಕ್ರಮ ತೆಗೆದುಕೊಂಡಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು