ಆರೋಗ್ಯ

ಇಂದು ವಿಶ್ವ ನಿದ್ರೆ ದಿನ: ನಿದ್ರಾಹೀನತೆಯಿಂದ ಬೊಜ್ಜು, ಮಧುಮೇಹ, ಹೃದ್ರೋಗ

ಬೆಂಗಳೂರು: ವರ್ಲ್ಡ್ ಸ್ಲೀಪ್ ಸೊಸೈಟಿ ಶುಕ್ರವಾರ ವರ್ಲ್ಡ್ ಸ್ಲೀಪ್ ಡೇ ಆಚರಿಸಲಿದೆ. ವಿಶ್ವ ನಿದ್ರಾ ದಿನ ಉತ್ತಮ ಮತ್ತು ಆರೋಗ್ಯಕರ ನಿದ್ರೆಯ ಪ್ರಯೋಜನ ಉದ್ದೇಶಗಳನ್ನು ವಿವರಿಸುವುದಾಗಿದೆ.

ನಿದ್ರೆಯ ಅಸ್ವಸ್ಥತೆಗಳು ವ್ಯಕ್ತಿಯ ಒಟ್ಟಾರೆ ಆರೋಗ್ಯ ಮತ್ತು ಜೀವನದ ಗುಣಮಟ್ಟದ ಮೇಲೆ ಗಮನಾರ್ಹ ಪರಿಣಾಮ ಬೀರುತ್ತವೆ. ದೀರ್ಘಕಾಲದ ನಿದ್ರಾಹೀನತೆಯು ಬೊಜ್ಜು, ಮಧುಮೇಹ, ಹೃದ್ರೋಗ ಮತ್ತು ಖಿನ್ನತೆ ಸೇರಿದಂತೆ ಹಲವಾರು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ನಿದ್ರಾಹೀನತೆಯ ಚಿಕಿತ್ಸೆಯು ಸಾಮಾನ್ಯವಾಗಿ ಜೀವನಶೈಲಿಯ ಬದಲಾವಣೆಗಳು, ಔಷಧಿಗಳು ಮತ್ತು ಅಥವಾ ಚಿಕಿತ್ಸೆಯನ್ನು ಒಳಗೊಂಡಿರುತ್ತದೆ ಎಂದು ತಜ್ಞರು ತಿಳಿಸಿದ್ದಾರೆ.

ಮಣಿಪಾಲ ಆಸ್ಪತ್ರೆ ಶ್ವಾಸಕೋಶ ಕಸಿ ವೈದ್ಯಾಧಿಕಾರಿ ಡಾ.ಸತ್ಯನಾರಾಯಣ ಮೈಸೂರು, ಮಾತನಾಡಿ, ‘‘ಬೆಂಗಳೂರು ಬಹುತೇಕ ನಿದ್ರಿಸದ ಮತ್ತು ವೃತ್ತಿಪರರಿಗೆ ಹೆಸರುವಾಸಿಯಾಗಿರುವ ನಗರವಾಗಿದ್ದು, ಐಟಿ ವೃತ್ತಿಪರರು ಹೆಚ್ಚಿನ ಸಂಖ್ಯೆಯಲ್ಲಿ ನೆಲೆಸಿದ್ದಾರೆ. ಕಾಸ್ಮೋಪಾಲಿಟನ್ ನಗರದ ಹೆಚ್ಚಿನ ನಿವಾಸಿಗಳು ನಿದ್ರೆಯಲ್ಲಿ ಉಸಿರುಕಟ್ಟುವಿಕೆ, ಸಿರ್ಕಾಡಿಯನ್ ಸ್ಲೀಪ್ ರಿದಮ್ ಅಸ್ವಸ್ಥತೆ, ಇತರ ನಿದ್ರಾಹೀನತೆಗಳನ್ನು ಅನುಭವಿಸುತ್ತಾರೆ.

“ಈ ನಿದ್ರಾಹೀನತೆಗಳ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವ ತುರ್ತು ಅವಶ್ಯಕತೆಯಿದೆ ಮತ್ತು ಮಲಗುವ ಮುನ್ನ ಬೆಳಕು ಸೂಸುವ ಸಾಧನಗಳನ್ನು (ಸ್ಮಾರ್ಟ್‌ಫೋನ್‌ಗಳು, ಲ್ಯಾಪ್‌ಟಾಪ್‌ಗಳು, ಟ್ಯಾಬ್ಲೆಟ್ ಸಾಧನಗಳು ಮತ್ತು ದೂರದರ್ಶನ) ತಪ್ಪಿಸುವುದು, ಮಧ್ಯಾಹ್ನದ ನಂತರ ಕಾಫಿಯನ್ನು ಸೀಮಿತಗೊಳಿಸುವುದು ಅಗತ್ಯವಿದೆ ಎಂದು ಅವರು ತಿಳಿಸಿದ್ದಾರೆ.

Gayathri SG

Recent Posts

ಹೊಸ ರುಚಿ: ಅವಲಕ್ಕಿ ಹುಳಿ ಮಾಡುವುದು ಹೇಗೆ?

ಗಡಿಬಿಡಿಯ ಜೀವನದಲ್ಲಿ ಬೆಳಗ್ಗಿನ ಉಪಹಾರ ಮಾಡಿಕೊಂಡು ಆಫೀಸಿಗೆ ಹೋಗುವುದೇ ಸವಾಲ್. ಇಂತಹ  ಸಂದರ್ಭದಲ್ಲಿ ಅವಲಕ್ಕಿ ಇದ್ದರೆ ಅದರಿಂದ ಹುಳಿ ತಯಾರಿಸಿ…

5 mins ago

ಬಾವಿಗೆ ಬಿದ್ದ ಮಗುವನ್ನು ರಕ್ಷಿಸಿದ ಯುವಕನಿಗೆ ಮೆಚ್ಚುಗೆಯ ಸುರಿಮಳೆ

ಸರಪಾಡಿಯ ಹಂಚಿಕಟ್ಟೆಯಲ್ಲಿ ಬಾವಿಗೆ ಬಿದ್ದ ಮಗುವೊಂದನ್ನು ತನ್ನ ಪ್ರಾಣದ ಹಂಗನ್ನು ತೊರೆದು ತುಂಡಾಗುವ ಸ್ಥಿತಿಯಲ್ಲಿದ್ದ ಹಳೆಯ ಹಗ್ಗವನ್ನು ಬಳಸಿ ಮೇಲಕ್ಕೆತ್ತಿದ…

14 mins ago

ಶ್ರೀರಾಮ ಸೇನೆ ರಾಜ್ಯಾಧ್ಯಕ್ಷರ ಮೇಲೆ ಜಾತಿ ನಿಂದನೆ ಪ್ರಕರಣ ದಾಖಲು

ಜಿಲ್ಲೆಯ ಜೇವರ್ಗಿ ತಾಲೂಕಿನ ಆಂದೋಲಾ ಕರುಣೇಶ್ವರ ಮಠದ ಪೀಠಾಧಿಪತಿ, ಶ್ರೀರಾಮ ಸೇನೆಯ ಅಧ್ಯಕ್ಷ ಸಿದ್ದಲಿಂಗ ಶ್ರೀಗಳ ವಿರುದ್ಧ ಕಲಬುಗಿಯಲ್ಲಿ ಜಾತಿ…

18 mins ago

ಮಡಿಕೇರಿಯಲ್ಲಿ ಬುದ್ಧಿಮಾಂದ್ಯ ಹುಡುಗನ ರಕ್ಷಣೆ; ಸಂಬಂಧಪಟ್ಟವರು ಸಂಪರ್ಕಿಸುವಂತೆ ಮನವಿ

ಅನಾಥ ಬುದ್ಧಿಮಾಂದ್ಯ ಹುಡುಗನನ್ನು ರಕ್ಷಣೆ ಮಾಡಿ ಶಕ್ತಿ ಅನಾಥಾಶ್ರಮಕ್ಕೆ ಸೇರಿಸಿರುವ ಘಟನೆಯೊಂದು ಮಡಿಕೇರಿಯಲ್ಲಿ ನಡೆದಿದೆ.

23 mins ago

ಗ್ರಾಹಕರಂತೆ ಬಂದು ಬಂಗಾರದ ಬಳೆ ಎಗರಿಸಿದ ಖತರ್ನಾಕ್ ಕಳ್ಳಿಯರ ಕೈಚಳಕ ಸಿಸಿಟಿವಿಯಲ್ಲಿ ಸೆರೆ

ಗ್ರಾಹಕರ ಸೋಗಿನಲ್ಲಿ ಬಂದು ಬಂಗಾರದ ಖಡ್ಗ ಕದ್ದು ಪರಾರಿಯಾದ ಘಟನೆ ಕಲಬುರಗಿ ನಗರದ ಅನ್ನಪೂರ್ಣ ಕ್ರಾಸ್‌ನಲ್ಲಿರುವ ತನಿಷ್ಕ ಜ್ಯುವೆಲ್ಲರಿ ಶಾಪ್‌ನಲ್ಲಿ…

26 mins ago

ವಿಧಾನಸೌಧ ಪ್ರವೇಶಕ್ಕೆ ಇನ್ನು ಮುಂದೆ ಕ್ಯೂಆರ್ ಕೋಡ್ ಪಾಸ್‌: ಪರಮೇಶ್ವರ್‌

ಇನ್ನು ಮುಂದೆ ವಿಧಾನಸೌಧ ಪ್ರವೇಶಕ್ಕೆ ಬೇಕಾಬಿಟ್ಟಿ ಪಾಸ್‌ಗಳನ್ನು ವಿತರಿಸುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಾರೆ.

44 mins ago