ಲಾಸ್ ಏಂಜಲೀಸ್, ಮೇ.9: ಕೋವಿಡ್-19 ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ ನೀತಿ ಅಮೆರಿಕ ಗುರುವಾರ ಅಧಿಕೃತವಾಗಿ ಅಂತ್ಯಗೊಳಿಸಲಿದೆ.
ಜಾಗತಿಕ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ದೇಶಕ್ಕೆ ಧನಸಹಾಯ ಮತ್ತು ಸಂಪನ್ಮೂಲಗಳನ್ನು ಒದಗಿಸಲು ಮೂರು ವರ್ಷಗಳ ಹಿಂದೆ ತುರ್ತು ಪರಿಸ್ಥಿತಿ ಘೋಷಿಸಲಾಗಿತ್ತು.
2021 ರಲ್ಲಿ ಅಧಿಕಾರ ವಹಿಸಿಕೊಂಡಾಗಿನಿಂದ, ಯುಎಸ್ ಅಧ್ಯಕ್ಷ ಜೋ ಬೈಡನ್ ಪದೇ ಪದೇ ತುರ್ತು ಪರಿಸ್ಥಿತಿಯನ್ನು ವಿಸ್ತರಿಸಿದ್ದರು.
ಯುಎಸ್ ಆರೋಗ್ಯ ಮತ್ತು ಮಾನವ ಸೇವೆಗಳ ಇಲಾಖೆಗಳು ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿಯಿಂದ ದೂರ ಸರಿಯುವ ಮಾರ್ಗಸೂಚಿಯನ್ನು ಪ್ರಕಟಿಸಿದೆ.