News Karnataka Kannada
Wednesday, April 17 2024
Cricket
ಆರೋಗ್ಯ

ಮೈಸುಡುವ ಬಿಸಿಲಿನಿಂದ ಪಾರಾಗಲು ಏನು ಮಾಡಬೇಕು?

ಈ ಬಾರಿ ರಣ ಬಿಸಿಲು ಮೈಸುಡುತ್ತಿದೆ. ಇಷ್ಟರಲ್ಲೇ ಒಂದೋ ಎರಡೋ ಮಳೆ ಸುರಿಯಬೇಕಾಗಿತ್ತು. ಆದರೆ ಮಳೆ ಸುರಿಯುವ ಲಕ್ಷಣಗಳು ಕಾಣುತ್ತಿಲ್ಲ. ಮಳೆ ಸುರಿಯದ ಹೊರತು ವಾತಾವರಣ ತಂಪಾಗುವುದಿಲ್ಲ. ಹೀಗಾಗಿ ಬಿಸಿಲನ್ನು ಎದುರಿಸಿ ಬದುಕಲೇ ಬೇಕಾಗಿದೆ.
Photo Credit : Pixabay

ಈ ಬಾರಿ ರಣ ಬಿಸಿಲು ಮೈಸುಡುತ್ತಿದೆ. ಇಷ್ಟರಲ್ಲೇ ಒಂದೋ ಎರಡೋ ಮಳೆ ಸುರಿಯಬೇಕಾಗಿತ್ತು. ಆದರೆ ಮಳೆ ಸುರಿಯುವ ಲಕ್ಷಣಗಳು ಕಾಣುತ್ತಿಲ್ಲ. ಮಳೆ ಸುರಿಯದ ಹೊರತು ವಾತಾವರಣ ತಂಪಾಗುವುದಿಲ್ಲ. ಹೀಗಾಗಿ ಬಿಸಿಲನ್ನು ಎದುರಿಸಿ ಬದುಕಲೇ ಬೇಕಾಗಿದೆ.

ಬಿಸಿಲಿನ ತಾಪ ಹೆಚ್ಚಾದಂತೆ ಹಗಲಿನಲ್ಲಿ ಕೆಲಸ ಮಾಡುವುದಿರಲಿ ಹಾಗೆ ಸುಮ್ಮನೆ ಕೂರುವುದು ಕೂಡ ಕಷ್ಟವಾಗಿ ಪರಿಣಮಿಸಿದೆ. ಹೀಗಾಗಿ ಆರೋಗ್ಯದತ್ತ ಕಾಳಜಿ ವಹಿಸುವುದು ಅಗತ್ಯವಾಗಿದೆ. ಬೇಸಿಗೆಯ ದಿನಗಳಲ್ಲಿ ಒಂದಷ್ಟು ಎಚ್ಚರಿಕೆಯನ್ನು ವಹಿಸಿದರೆ ಕಾಡುವ ಕೆಲವೊಂದು ಸಾಂಕ್ರಾಮಿಕ ರೋಗಗಳಿಂದ ಪಾರಾಗಲು ಸಾಧ್ಯವಾಗುತ್ತದೆ.

ಸುಡುವ ಬಿಸಿಲಿಗೆ ಸದಾ ನೆರಳು ಬಯಸುವುದು, ಫ್ಯಾನ್ ಕೆಳಗೆ, ಹವಾನಿಯಂತ್ರಿತ ಕೊಠಡಿಯಲ್ಲಿ ಕುಳಿತು ಕೆಲಸ ಮಾಡಬೇಕೆನಿಸುತ್ತದೆ. ಆದರೆ ಅದು ಎಲ್ಲರಿಗೂ ಸಾಧ್ಯವಿಲ್ಲ. ಬೇಸಿಗೆಯಲ್ಲಿ ಬಿಸಿಲಿನೊಂದಿಗೆ ಬದುಕುವುದು ಅನಿವಾರ್ಯವಾಗಿದೆ. ಬೇಸಿಗೆಯಲ್ಲಿ ವೈಯಕ್ತಿಕ ಸ್ವಚ್ಛತೆ ಜತೆಗೆ ನಮ್ಮ ಸುತ್ತಮುತ್ತಲ ಪರಿಸರ ಸ್ವಚ್ಛವಾಗಿರುವಂತೆ ನೋಡಿಕೊಳ್ಳುವುದಕ್ಕೆ ಆದ್ಯತೆ ನೀಡಬೇಕು.

.ಇನ್ನು ಮಧ್ಯಾಹ್ನ ಸುಡುವ ಬಿಸಿಲಿಗೆ ಮೈಯೊಡ್ಡುವುದು  ಕಷ್ಟವೇ.. ಆದರೂ ನಾವು ಸುಮ್ಮನಿರೋಕೆ ಆಗಲ್ಲ. ತಮ್ಮ ದೈನಂದಿನ ಕೆಲಸಗಳನ್ನು ಮಾಡಲೇ ಬೇಕಾಗಿದೆ. ಆದ್ದರಿಂದ ಒಂದಷ್ಟು ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವ ಮೂಲಕ ಬೇಸಿಗೆಯನ್ನು ಕಳೆಯಲು ನಾವು ಮುಂದಾಗಬೇಕು. ಮನೆಯಿಂದ ಹೊರಗೆ ಹೋದಾಗ ಬಿಸಿಲಿನ ತಾಪಕ್ಕೆ ಸುಸ್ತು, ನೀರಡಿಕೆ, ತಲೆಸುತ್ತು ಮೊದಲಾದವುಗಳು ಬಾಧಿಸಬಹುದು.

ಇಷ್ಟೇ ಅಲ್ಲದೆ, ತಲೆನೋವು ಕಾಡುವ ಸಾಧ್ಯತೆಯೂ ಹೆಚ್ಚಿರುತ್ತದೆ. ಆದ್ದರಿಂದ ಮನೆಯಿಂದ  ಹೊರಗೆ  ಹೋಗುವಾಗ ಆದಷ್ಟು ತೆಳು ಬಣ್ಣದ ಸಡಿಲವಾದ ಹತ್ತಿಯ ಬಟ್ಟೆ ಧರಿಸುವುದನ್ನು ರೂಢಿಸಿಕೊಳ್ಳಬೇಕು. ಕೈಗೆಟುಕುವಂತೆ ಕುಡಿಯುವ ನೀರನ್ನು ಇಟ್ಟುಕೊಳ್ಳಬೇಕು. ಆಗಾಗ್ಗೆ ಧಾರಾಳವಾಗಿ ಉಪ್ಪು, ಸಕ್ಕರೆ ಮಿಶ್ರಿತ ನೀರು, ಹಣ್ಣಿನ ರಸ ಪಾನಕ ಸೇವಿಸಬೇಕು. ಆದರೆಕಾಫಿ ಟೀ ಸೇವನೆ ಆದಷ್ಟು ಕಡಿಮೆ ಮಾಡಬೇಕು.

ಆಗಾಗ್ಗೆ ಶುದ್ಧವಾದ ನೀರು, ಮಜ್ಜಿಗೆ, ಹಣ್ಣಿನ ಜ್ಯೂಸ್, ಎಳನೀರು ಸೇರಿದಂತೆ  ಕುಡಿಯಬೇಕು. ಬೆಚ್ಚಗಿನ ಮಸಾಲೆರಹಿತ ಶುದ್ದ ಆಹಾರ ಸೇವಿಸಬೇಕು. ಶೂ ಧರಿಸುವುದರಿಂದ ಕಾಲು ಬೆವರಿ ದುರ್ವಾಸನೆ ಬೀರಬಹುದು. ಆದ್ದರಿಂದ ಸಾಕ್ಸ್ ಗಳನ್ನು ಒಗೆದು ಸ್ವಚ್ಛವಾಗಿಟ್ಟುಕೊಳ್ಳಬೇಕು, ಗಾಳಿಯಾಡುವಂತಹ ಪಾದರಕ್ಷೆ ಧರಿಸಿದರೆ ಉತ್ತಮ. ನೀರನ್ನು ನೇರವಾಗಿ ಉಪಯೋಗಿಸದೆ ಕುದಿಸಿ ಆರಿಸಿ ಮಣ್ಣಿನ ಮಡಕೆಯಲ್ಲಿ ಸಂಗ್ರಹಿಸಿಟ್ಟುಕೊಂಡು ಸೇವನೆ ಮಾಡುವುದನ್ನು ಅಭ್ಯಾಸ ಮಾಡಿದರೆ ಉತ್ತಮ.

ಬಿಸಿಲಿನ ಆಘಾತಕ್ಕೊಳಗಾದ ವ್ಯಕ್ತಿಗೆ ಪ್ರಥಮ ಚಿಕಿತ್ಸೆಯಾಗಿ  ಮೊದಲಿಗೆ ಬಟ್ಟೆ, ಪಾದರಕ್ಷೆ ಸಡಿಲಿಸಿ ತೆಗೆಯಬೇಕು.  ತಣ್ಣಗಿನ ನೀರನ್ನು ವ್ಯಕ್ತಿಯ ಮೇಲೆ ಸಿಂಪಡಿಸಬೇಕು. ತಂಪಾದ ನೆರಳಿನ ಜಾಗಕ್ಕೆ ಸ್ಥಳಾಂತರಿಸಿ ಗಾಳಿ ಬೀಸಬೇಕು. ದೇಹವನ್ನು ಅತಿಯಾಗಿ ತಕ್ಷಣವೇ ತಂಪು ಮಾಡಬಾರದು. ಯಾವುದೇ ಔಷಧ ನೀಡಬಾರದು.

ಪ್ರಜ್ಞೆ ಬಂದ ನಂತರ ನಿಧಾನವಾಗಿ ಶುದ್ಧವಾದ ನೀರನ್ನು ಸ್ಪಲ್ಪ ಸ್ವಲ್ಪವಾಗಿ ನೀಡುವ ಮೂಲಕ ಆರೈಕೆ  ಮಾಡಬೇಕು. ಬಿಸಿಲಿನಲ್ಲಿ ಮಕ್ಕಳು. ವಯಸ್ಸಾದವರು ನಡೆಯುವಾಗ ಕಪ್ಪು ಬಣ್ಣವಲ್ಲದ ಛತ್ರಿ ಬಳಸುವುದು ಒಳ್ಳೆಯದು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು