News Karnataka Kannada
Monday, April 29 2024
ಆರೋಗ್ಯ

ಬೇಸಿಗೆಯಲ್ಲಿ ಆರೋಗ್ಯ ಕಾಪಾಡಲು ಏನು ಮಾಡಬೇಕು

What to do to maintain health in summer
Photo Credit : Pixabay

ಬೇಸಿಗೆಯ ದಿನಗಳಲ್ಲಿ ನಮ್ಮ ನಿತ್ಯದ ಕೆಲಸ ಕಾರ್ಯಗಳೊಂದಿಗೆ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಸವಾಲಿನ ಕೆಲಸವಾಗಿದೆ. ಆದರೂ ಬೇಸಿಗೆಯ ದಿನಗಳಲ್ಲಿ ಒಂದಷ್ಟು ಎಚ್ಚರಿಕೆ ವಹಿಸಿ ಮುಂಜಾಗ್ರತಾ ಕ್ರಮ ಕೈಗೊಳ್ಳುವುದು ಅಗತ್ಯವಾಗಿದೆ.

ಹಾಗಾದರೆ ಏನು ಮಾಡಬೇಕು? ಸೆಖೆಯಿಂದ ತಪ್ಪಿಸಿಕೊಳ್ಳುವುದು ಹೇಗೆ? ಎಂಬಿತ್ಯಾದಿ ಪ್ರಶ್ನೆಗಳು ಕಾಡಬಹುದು. ಅದಕ್ಕೆಂದೇ ಕೆಲವೊಂದು ಸಲಹೆಗಳು ಇಲ್ಲಿವೆ. ಅದೇನೆಂದರೆ?

ಸಡಿಲವಾದ, ತೆಳು ಬಣ್ಣದ ಹತ್ತಿಯ ಬಟ್ಟೆ ಧರಿಸುವುದು, ಕೈಗೆಟುಕುವಂತೆ ಕುಡಿಯುವ ನೀರನ್ನು ಇಟ್ಟುಕೊಳ್ಳುವುದು, ಆಗಿಂದಾಗ್ಗೆ ನಿಧಾನವಾಗಿ ಧಾರಾಳಾವಾಗಿ ಉಪ್ಪು, ಸಕ್ಕರೆ ಮಿಶ್ರಿತ ನೀರನ್ನು ಕುಡಿಯುವುದು. ಹಣ್ಣಿನ ರಸ, ಪಾನಕಗಳನ್ನು ಸೇವಿಸುವುದು (ಕಾರ್ಬೊನೇಟೆಡ್ ಪಾನೀಯಗಳನ್ನು ವರ್ಜಿಸಿ ಕಾಫಿ, ಟೀ ಇತ್ಯಾದಿ ಆದಷ್ಟೂ ಕಡಿಮೆ ಮಾಡುವುದು),  ಹತ್ತಿಯ ನುಣುಪಾದ ಬಟ್ಟೆ, ಟಿಶ್ಯೂ ಕರವಸ್ತ್ರದಿಂದ ಬೆವರನ್ನು ಒರೆಸುವುದು. ನೀರು ಮಜ್ಜಿಗೆ, ಎಳನೀರು ಕುಡಿಯುವುದು, ಬೆಚ್ಚಗಿನ, ಮಸಾಲೆ ರಹಿತ, ಶುದ್ದ ಸಾತ್ವಿಕ ಆಹಾರ ಸೇವಿಸುವುದು. ಗಾಳಿಯಾಡುವಂತಿರುವ ಪಾದರಕ್ಷೆ ಧರಿಸುವುದು ಬಹು ಮುಖ್ಯವಾಗಿದೆ.

ಇಷ್ಟೇ ಅಲ್ಲದೆ ಬೇಸಿಗೆಯಲ್ಲಿ ವಿವಿಧ ಸಾಂಕ್ರಾಮಿಕ ಕಾಯಿಲೆಗಳಾದ  ಜಾಂಡೀಸ್, ಪೋಲಿಯೋ, ಕಾಲರಾ, ಕರುಳುಬೇನೆ, ವಿಷಮ ಶೀತ ಜ್ವರ, ಆಮಶಂಕೆ, ಇಲಿಜ್ವರ ಕಾಣಿಸಿಕೊಳ್ಳಬಹುದು ಕಲುಷಿತ ನೀರು ಹಾಗೂ ಕಲುಷಿತ ಆಹಾರ ಸೇವನೆ ಮೂಲಕ ಸೂಕ್ಷ್ಮಜೀವಿಗಳಿಂದ ವಾಂತಿ-ಭೇದಿಯೂ ಕಂಡು ಬರುವ ಸಾಧ್ಯತೆ ಹೆಚ್ಚಿರುತ್ತದೆ. ಇದನ್ನು ತ‍ಪ್ಪಿಸಬೇಕಾದರೆ ಪ್ರತಿಯೊಬ್ಬರೂ ಕುದಿಸಿ, ಆರಿಸಿದ ನೀರನ್ನು ಕುಡಿಯಬೇಕು, ಬಿಸಿಯಾದ ಆಹಾರ ಪದಾರ್ಥಗಳನ್ನು ಸೇವಿಸಬೇಕು. ಆಹಾರ ಪದಾರ್ಥಗಳನ್ನು ಮುಚ್ಚಿಡಬೇಕು. ರಸ್ತೆ ಬದಿಗಳಲ್ಲಿ, ಹೋಟೆಲ್‌ಗಳಲ್ಲಿ, ತೆರೆದಿಟ್ಟು ಮಾರುವ  ಹಣ್ಣು ಹಂಪಲು ಹಾಗೂ ಆಹಾರ ಪದಾರ್ಥಗಳನ್ನು ಉಪಯೋಗಿಸಬಾರದು.

ಹೋಟೆಲ್‌ಗಳಲ್ಲಿ ಕುಡಿಯಲು ಬಿಸಿ ನೀರನ್ನು ಕೇಳಿ ಪಡೆಯಬೇಕು. ಊಟಕ್ಕೆ ಮುಂಚಿತವಾಗಿ ಕೈಗಳನ್ನು ಶುಚಿಗೊಳಿಸಬೇಕು. ಬಯಲಿನಲ್ಲಿ ಮಲ, ಮೂತ್ರ ವಿಸರ್ಜನೆ ಮಾಡದೆ ಶೌಚಾಲಯವನ್ನು ಬಳಸಬೇಕು. ಮಲ ವಿಸರ್ಜನೆ ನಂತರ ಕೈಗಳನ್ನು ಸೋಪಿನಿಂದ ತೊಳೆಯಬೇಕು. ವಾಂತಿಭೇದಿ ಕಾಣಿಸಿಕೊಂಡರೆ ಅತಿಯಾಗಿ ನೀರು ಸೇವಿಸಬೇಕು ಅಥವಾ ಓಆರ್‌ಎಸ್ ಪಾನಕ ಸೇವಿಸಬೇಕು. ಮನೆಯ ಒಳಗೆ, ಹೊರಗಡೆ ಸ್ವಚ್ಚತೆಯನ್ನು ಕಾಪಾಡಿಕೊಳ್ಳಬೇಕು. ಜ್ವರ, ಕಾಮಾಲೆ, ವಾಂತಿಭೇದಿ, ರಕ್ತದೊಂದಿಗೆ  ಭೇದಿ ಆಗುವುದು, ಹೊಟ್ಟೆನೋವು ಮತ್ತು ಭೇದಿ ರೋಗಲಕ್ಷಣಗಳು ಕಾಣಿಸಿಕೊಂಡರೆ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆಯುವುದು ಅಗತ್ಯವಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು