ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1603 ಅಪ್ರೆಂಟಿಸ್ ಹುದ್ದೆಗಳು ಖಾಲಿ ಇದೆ. ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ವಿದ್ಯಾರ್ಹತೆಗಳು;
ಟ್ರೇಡ್ ಅಪ್ರೆಂಟಿಸ್ ಗೆ 10ನೇ ತರಗತಿ, 12ನೇ ತರಗತಿ, ಐಟಿಐ – ಟೆಕ್ನಿಷಿಯನ್ ಅಪ್ರೆಂಟಿಸ್ ಗೆ ಡಿಪ್ಲೊಮಾ – ಗ್ರಾಜುಯೇಟ್ ಅಪ್ರೆಂಟಿಸ್ ಗೆ ಬಿಎ, ಬಿ.ಕಾಂ, ಬಿ.ಎಸ್ಸಿ, ಬಿಬಿಎ
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನವೆಂಬರ್ 30, 2023ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 24 ವರ್ಷ ಮೀರಿರಬಾರದು.
OBC (NCL) ಅಭ್ಯರ್ಥಿಗಳು: 03 ವರ್ಷಗಳು, SC/ST ಅಭ್ಯರ್ಥಿಗಳು: 05 ವರ್ಷಗಳು, PwBD (ಸಾಮಾನ್ಯ) ಅಭ್ಯರ್ಥಿಗಳು: 10 ವರ್ಷಗಳು, PwBD (OBC-NCL) ಅಭ್ಯರ್ಥಿಗಳು: 13 ವರ್ಷಗಳು, PwBD (SC/ST) ಅಭ್ಯರ್ಥಿಗಳು: 15 ವರ್ಷಗಳು ಈ ರೀತಿ ವಯೋಮಿತಿ ಸಡಿಲಿಕೆಯಿದೆ.
ಭಾರತದ ವಿವಿಧ ಸ್ಥಳಗಳಲ್ಲಿ ಉದ್ಯೋಗವಕಾಶಗಳಿವೆ. ಆನ್ಲೈನ್ ಟೆಸ್ಟ್ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಸಂದರ್ಶನ ಮೂಲಕ ದಾಖಲಾತಿ ಪರಿಶೀಲನೆ ನಡೆಯಲಿದೆ. ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ. ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ.