News Karnataka Kannada
Sunday, April 28 2024
ಉದ್ಯೋಗ

ಹಟ್ಟಿ ಚಿನ್ನದ ಗಣಿ ಕಂಪನಿಯಲ್ಲಿ ಹುದ್ದೆಗಳ ನೇಮಕ: ಐಐಟಿ,ಡಿಪ್ಲೋಮ ಪಾಸದವರಿಗೆ ಅವಕಾಶ

ಭಾರತದ ಚಿನ್ನ ಉತ್ಪಾದನೆಯಲ್ಲಿ ಅಗ್ರಸ್ಥಾನದಲ್ಲಿರುವ ಹಟ್ಟಿ ಚಿನ್ನದ ಗಣಿ ಕಂಪೆನಿಯು ಖಾಲಿ ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ
Photo Credit : NewsKarnataka

ಬೆಂಗಳೂರು: ಭಾರತದ ಚಿನ್ನ ಉತ್ಪಾದನೆಯಲ್ಲಿ ಅಗ್ರಸ್ಥಾನದಲ್ಲಿರುವ ಹಟ್ಟಿ ಚಿನ್ನದ ಗಣಿ ಕಂಪೆನಿಯು ಖಾಲಿ ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.ಅಸಿಸ್ಟಂಟ್‌ ಫಾರ್‌ಮನ್‌, ಐಟಿಐ ಫಿಟ್ಟರ್‌, ಲ್ಯಾಬ್‌ ಅಸಿಸ್ಟಂಟ್‌ ಸೇರಿದಂತೆ ಸುಮಾರು 168 ಹುದ್ದೆಗಳಿವೆ. ಐಟಿಐ, ಡಿಪ್ಲೋಮಾ, ಪದವಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ ಮೇ 3.

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಅಸಿಸ್ಟೆಂಟ್ ಫಾರ್‌ಮನ್‌ (ಗಣಿ)- 16 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ
ಅಸಿಸ್ಟೆಂಟ್ ಫಾರ್‌ಮನ್‌ (ಮೆಟಲರ್ಜಿ)- 7 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ
ಲ್ಯಾಬ್ ಅಸಿಸ್ಟೆಂಟ್- 1 ಹುದ್ದೆ, ವಿದ್ಯಾರ್ಹತೆ: ಬಿ.ಎಸ್‌ಸಿ
ಅಸಿಸ್ಟೆಂಟ್ ಫಾರ್‌ಮನ್‌ (ಜಿಯಾಲಜಿ)- 3 ಹುದ್ದೆ, ವಿದ್ಯಾರ್ಹತೆ: ಬಿ.ಎಸ್‌ಸಿ
ಅಸಿಸ್ಟೆಂಟ್ ಫಾರ್‌ಮನ್‌ (ಡೈಮಂಡ್ ಡ್ರಿಲ್ಲಿಂಗ್ / ಅಂಡರ್ ಗ್ರೌಂಡ್)- 2 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ
ಅಸಿಸ್ಟೆಂಟ್ ಫಾರ್‌ಮನ್‌ (ಮೆಕ್ಯಾನಿಕಲ್)- 19 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ
ಐಟಿಐ ಫಿಟ್ಟರ್ (ಗಣಿಗಾರಿಕೆ)- 56 ಹುದ್ದೆ, ವಿದ್ಯಾರ್ಹತೆ: ಐಟಿಐ ಇನ್‌ ಫಿಟ್ಟರ್‌
ಐಟಿಐ ಫಿಟ್ಟರ್ (ಮೆಟಲ್)- 26 ಹುದ್ದೆ, ವಿದ್ಯಾರ್ಹತೆ: ಐಟಿಐ ಇನ್‌ ಫಿಟ್ಟರ್‌
ಐಟಿಐ ಎಲೆಕ್ಟ್ರಿಕಲ್- 4 ಹುದ್ದೆ, ವಿದ್ಯಾರ್ಹತೆ: ಐಟಿಐ ಇನ್‌ ಎಲೆಕ್ಟ್ರಿಕಲ್
ಅಸಿಸ್ಟೆಂಟ್ ಫಾರ್‌ಮನ್‌ (ಸಿವಿಲ್)- 1 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ
ಅಸಿಸ್ಟೆಂಟ್ ಫಾರ್‌ಮನ್‌ (ಎಲೆಕ್ಟ್ರಿಕಲ್)- 1 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ
ಸೆಕ್ಯುರಿಟಿ ಇನ್ಸ್‌ಪೆಕ್ಟರ್‌- 6 ಹುದ್ದೆ, ವಿದ್ಯಾರ್ಹತೆ: ಪದವಿ
ಐಟಿಐ ಫಿಟ್ಟರ್ (ಸರ್ವೆ)- 2 ಹುದ್ದೆ, ವಿದ್ಯಾರ್ಹತೆ: ಐಟಿಐ ಇನ್‌ ಫಿಟ್ಟರ್‌
ಸೆಕ್ಯುರಿಟಿ ಗಾರ್ಡ್- 24 ಹುದ್ದೆ, ವಿದ್ಯಾರ್ಹತೆ: ದ್ವಿತೀಯ ಪಿಯುಸಿ

ವಯೋಮಿತಿ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ- 1 ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ
ಅರ್ಜಿ ಶುಲ್ಕವಾಗಿ ಸಾಮಾನ್ಯ ವಿಭಾಗದ ಅಭ್ಯರ್ಥಿಗಳು 600 ರೂ., ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು 300 ರೂ. ಮತ್ತು ಎಸ್‌ಸಿ / ಎಸ್‌ಟಿ / ಮಾಜಿ ಸೈನಿಕರು / ಪಿಡಬ್ಲ್ಯುಡಿ ಅಭ್ಯರ್ಥಿಗಳು 100 ರೂ. ಅನ್ನು ಆನ್‌ಲೈನ್‌ ಮೂಲಕ ಪಾವತಿಸಬೇಕು..

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ
ಕಂಪ್ಯೂಟರ್‌ ಆಧಾರಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 20,920 ರೂ. – 48,020 ರೂ. ಮಾಸಿಕ ವೇತನ ಸಿಗಲಿದೆ.

ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್‌ ಮಾಡಿ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು