News Karnataka Kannada
Sunday, April 28 2024
ಉದ್ಯೋಗ

ಮಂಗಳೂರು ಮಹಾನಗರ ಪಾಲಿಕೆಯಲ್ಲಿ 134 ಹುದ್ದೆಗಳಿಗೆ ಅರ್ಜಿ ಅಹ್ವಾನ

New Project 2024 01 11t114207.487
Photo Credit : News Kannada

ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಮಂಗಳೂರು ಮಹಾನಗರ ಪಾಲಿಕೆ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 134 ಪೌರಕಾರ್ಮಿಕ ಹುದ್ದೆಗಳು ಖಾಲಿ ಇದೆ. ಅರ್ಜಿ ಸಲ್ಲಿಸಲು ಜ. 18 ಕೊನೆಯ ದಿನವಾಗಿದೆ. ಆಸಕ್ತರು ಆಫ್​​ಲೈನ್​/ ಪೋಸ್ಟ್​ ಮೂಲಕ ಅರ್ಜಿ ಸಲ್ಲಿಸಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

 

ವಿದ್ಯಾರ್ಹತೆ:
ಯಾವುದೇ ವಿದ್ಯಾರ್ಹತೆ ಕೇಳಿಲ್ಲ. ಕನ್ನಡ ಭಾಷೆ ಮಾತನಾಡಲು ಬಂದರೆ ಸಾಕು.

ವಯೋಮಿತಿ:
ಮಂಗಳೂರು ಮಹಾರನಗರ ಪಾಲಿಕೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 55 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಅರ್ಜಿ ಹಾಕಲು ಯಾರು ಅರ್ಹರು?
ಮುನ್ಸಿಪಲ್ ಕಾರ್ಪೊರೇಷನ್‌ಗಳಲ್ಲಿ ನೇರ ವೇತನ/ಕಲ್ಯಾಣ/ದಿನಗೂಲಿ ಆಧಾರದ ಮೇಲೆ ಕಳೆದ 2 ವರ್ಷಗಳಿಂದ ನಿರಂತರವಾಗಿ ಕೆಲಸ ಮಾಡುತ್ತಿರುವ ಪೌರಕಾರ್ಮಿಕರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು.

ಆಯ್ಕೆ ಪ್ರಕ್ರಿಯೆ:
ಕೆಲಸದ ಅನುಭವ
ಸಂದರ್ಶನ

ವೇತನ:
ನಿಗದಿಪಡಿಸಿಲ್ಲ.

ಉದ್ಯೋಗದ ಸ್ಥಳ:
ಮಂಗಳೂರು

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಆಡಳಿತ ಶಾಖೆ
ಮಂಗಳೂರು ಮಹಾನಗರ ಪಾಲಿಕೆ
ಮಂಗಳೂರು
ಕರ್ನಾಟಕ

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 04/01/2024
ಅರ್ಜಿ ಸಲ್ಲಿಸಲು ಕೊನೆಯ ದಿನ: ಜನವರಿ 18, 2024

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು