ನವದೆಹಲಿ: ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಭಾರತೀಯ ರೈಲ್ವೆ ಇಲಾಖೆ ಸಿಹಿಸುದ್ದಿ ನೀಡಿದ್ದು, ಆಗ್ನೇಯ ಮಧ್ಯ ರೈಲ್ವೆಯಲ್ಲಿ ಖಾಲಿ ಇರುವ 1000 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಖಾಲಿ ಇರುವ ಹುದ್ದೆಗಳಿಗೆ ಜುಲೈ 22 ರಿಂದ ಅರ್ಜಿಗಳು ಪ್ರಾರಂಭವಾಗಿವೆ.
820 ಅಸಿಸ್ಟೆಂಟ್ ಲೋಕೋ ಪೈಲಟ್, 132 ಟೆಕ್ನಿಷಿಯನ್, 64 ಜೂನಿಯರ್ ಎಂಜಿನಿಯರ್ ಹುದ್ದೆಗಳು ಖಾಲಿ ಇವೆ. ಎಲ್ಲಾ ನೇಮಕಾತಿಗಳನ್ನು ಸಾಮಾನ್ಯ ಇಲಾಖಾ ಸ್ಪರ್ಧಾತ್ಮಕ ಪರೀಕ್ಷೆ (ಜಿಡಿಸಿಇ) ಕೋಟಾದಡಿ ಭರ್ತಿ ಮಾಡಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಉತ್ತೀರ್ಣರಾಗಿರಬೇಕು.
ಈ ಹುದ್ದೆಗಳಿಗೆ ಅಗತ್ಯವಿರುವ ದಾಖಲೆಗಳು
– ಆಧಾರ್ ಕಾರ್ಡ್
– ಪ್ಯಾನ್ ಕಾರ್ಡ್
– ಜಾತಿ ಪ್ರಮಾಣಪತ್ರ (ಅನ್ವಯವಾದರೆ)
– ಪಾಸ್ಪೋರ್ಟ್ ಗಾತ್ರದ ಛಾಯಾಚಿತ್ರ
– ಮೊಬೈಲ್ ಸಂಖ್ಯೆ
– ಇಮೇಲ್ ಐಡಿ
ಫಾರ್ಮ್ ಭರ್ತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ ಇಲಾಖೆಯhttps://secr.indianrailways.gov.inವೆಬ್ ಸೈಟ್ ಗೆ ಭೇಟಿ ನೀಡಬಹುದು..