News Karnataka Kannada
Friday, May 17 2024
ಉದ್ಯೋಗ

ಪದವೀಧರರಿಗೆ ರೈಲ್ವೆಯಲ್ಲಿ ಉದ್ಯೋಗಾವಕಾಶ: ಇಂದೇ ಅರ್ಜಿ ಸಲ್ಲಿಸಿ

railway
Photo Credit : Wikipedia

ರೈಲ್ವೆ ಉದ್ಯೋಗಗಳಿಗಾಗಿ ಎದುರು ನೋಡುತ್ತಿರುವವರಿಗೆ ಒಳ್ಳೆಯ ಅವಕಾಶ ಇಲ್ಲಿದೆ. ದಕ್ಷಿಣ ಮಧ್ಯ ರೈಲ್ವೆ ಇಲಾಖೆ ಜೂನಿಯರ್ ಟೆಕ್ನಿಕಲ್ ಅಸೋಸಿಯೇಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು SCR ಅಧಿಕೃತ ಸೈಟ್ scr.indianrailways.gov.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 30 ಆಗಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಪಟ್ಟ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು. ಅಭ್ಯರ್ಥಿಗಳು ಮೆಕ್ಯಾನಿಕಲ್ / ಎಲೆಕ್ಟ್ರಿಕಲ್ / ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್‌ ನಲ್ಲಿ ಡಿಪ್ಲೊಮಾ ಹೊಂದಿರಬೇಕು.

ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳು ಶೇ.60 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಎಸ್‌ಸಿ ಮತ್ತು ಎಸ್‌ಟಿ ವರ್ಗದವರು ಶೇ.50 ಅಂಕಗಳೊಂದಿಗೆ ಉತ್ತೀರ್ಣರಾಗುವುದು ಕಡ್ಡಾಯವಾಗಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳ ವಯಸ್ಸು 18 ವರ್ಷದಿಂದ 33 ವರ್ಷದೊಳಗಿರಬೇಕು. OBC ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸು 36 ವರ್ಷಗಳು. SC/ST ಗಳಿಗೆ 38 ವರ್ಷಗಳು.
ಎಲ್ಲಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ. 500 ಆಗಿರುತ್ತದೆ. SC/ST/OBC/ಮಹಿಳೆ/ಅಲ್ಪಸಂಖ್ಯಾತ/EWS ವರ್ಗದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ ರೂ.250 ಪಾವತಿಸಬೇಕು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು