ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಇಂದು ವಿಧಾನ ಸೌಧದ ಆವರಣದಲ್ಲಿ ಇರುವ ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರ 40ನೇ ಪುಣ್ಯಸ್ಮರಣೆ ಅಂಗವಾಗಿ ಅರಸು ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಶಾಸಕ ರಾಜಕುಮಾರ್ ಪಾಟೀಲ್ ತೆಲ್ಕೂರ್, ಮಾಜಿ ಶಾಸಕ ಲೆಹರ್ ಸಿಂಗ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ದೇವರಾಜ ಅರಸು ಕುಟುಂಬದ ಸದಸ್ಯರು ಮತ್ತು ಇತರರು ಉಪಸ್ಥಿತರಿದ್ದರು.