ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಬೆಂಗಳೂರಿನಲ್ಲಿ ಅನುಸೂಚಿತ ಜಾತಿ/ ಅನುಸೂಚಿತ ಬುಡಕಟ್ಟುಗಳ ರಾಜ್ಯ ಅಭಿವೃದ್ಧಿ ಪರಿಷತ್ ಸಭೆ ನಡೆಯಿತು.
ಸಭೆಯಲ್ಲಿ ಸಚಿವರಾದ ಗೋವಿಂದ ಕಾರಜೋಳ, ಜೆ ಸಿ ಮಾಧುಸ್ವಾಮಿ, ಬಿ. ಶ್ರೀರಾಮುಲು, ಕೋಟ ಶ್ತೀನಿವಾಸ ಪೂಜಾರಿ, ಶಾಸಕರಾದ ದುರ್ಯೋಧನ ಐಹೊಳೆ, ಎನ್ ಮಹೇಶ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.