ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನೇಕಾರರ ವಿಷಯಗಳಿಗೆ ಸಂಬಂಧಿಸಿದಂತೆ ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಸಕ್ಕರೆ, ಜವಳಿ ಮತ್ತು ಕೈಮಗ್ಗ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್.ಪ್ರಸಾದ್ ಹಾಗೂ ಜವಳಿ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.