ಬೆಂಗಳೂರು: ಇಂದು ಮಹಿಳಾ ಕಾಂಗ್ರೆಸ್ ವತಿಯಿಂದ ಕೇಂದ್ರ ಸರ್ಕಾರ ನಿರಂತರವಾಗಿ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಹಾಗೂ ಶಾಸಕ ಅರವಿಂದ ಲಿಂಬಾವಳಿ ಮಹಿಳೆ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆಯನ್ನು ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಲ್ಲಿ ಹಮ್ಮಿಕೊಳ್ಳಲಾಯಿತು.
ಈ ಪ್ರತಿಭಟನೆಯಲ್ಲಿ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಮತಿ ಪುಷ್ಪಾ ಅಮರನಾಥ್ ಸೇರಿದಂತೆ ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳು ಭಾಗವಹಿಸಿದ್ದರು.