ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕರ್ನಾಟಕ ರಾಜ್ಯ ತೊಗಟವೀರ ಕ್ಷತ್ರಿಯ ನೇಕಾರ ಸಂಘದ ವತಿಯಿಂದ ಸೆಂಟ್ರಲ್ ಕಾಲೇಜಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಿರುವ ಸಂಘದ “ಅಮೃತ ಮಹೋತ್ಸವ 2023” ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಚಿವ ಕೆ.ಸಿ.ನಾರಾಯಣಗೌಡ, ಸಂಸದ ಪಿ.ಸಿ.ಮೋಹನ್, ರಾಜ್ಯ ತೊಗಟವೀರ ಕ್ಷತ್ರಿಯ ನೇಕಾರ ಸಂಘ ಅಧ್ಯಕ್ಷ ಬಿ.ಎಸ್.ಸೋಮಶೇಖರ್ ಮೊದಲಾದವರು ಉಪಸ್ಥಿತರಿದ್ದರು.