ಬ್ರಹ್ಮಾವರ: 10 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಬ್ರಹ್ಮಾವರ ತಾಲ್ಲೂಕು ಆಡಳಿತ ಸೌಧವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಇಂದು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಶಾಸಕ ಕೆ. ರಘುಪತಿ ಭಟ್, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ, ವಾರಂಬಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಾಗವೇಣಿ, ಉಡುಪಿ ಜಿಲ್ಲಾಧಿಕಾರಿಗಳಾದ ಕೂರ್ಮಾ ರಾವ್ ಎಂ., ಪೋಲಿಸ್ ವರಿಷ್ಠಾಧಿಕಾರಿಗಳಾದ ಹಾಕೆ ಅಕ್ಷಯ್ ಮಚ್ಚಿಂದ್ರ, ಸಹಾಯಕ ಆಯುಕ್ತರಾದ ರಶ್ಮಿ, ಬ್ರಹ್ಮಾವರ ತಹಶೀಲ್ದಾರರಾದ ರಾಜಶೇಖರ್ ಮೂರ್ತಿ, ಕರ್ನಾಟಕ ಗೃಹ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಸಹನಾ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.