ಮಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಮಹಮ್ಮದ್, ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಅವರ ಮನೆಗೆ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿ, ರಾಜಕೀಯ ಆಗುಹೋಗುಗಳ ಬಗ್ಗೆ ಚರ್ಚಿಸಿದರು.
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಜತೆಗಿದ್ದರು.