Categories: ಸಮುದಾಯ

ಮಲೈಮಹದೇಶ್ವರಬೆಟ್ಟದಲ್ಲಿ ಅಮಾವಾಸ್ಯೆ ವಿಶೇಷ ಕಾರ್ಯಕ್ರಮಗಳು

ಚಾಮರಾಜನಗರ: ಹನೂರು ತಾಲೂಕಿನ ಪ್ರಸಿದ್ದ ಯಾತ್ರಾ ಕ್ಷೇತ್ರ ಮಲೈ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮವಾಸ್ಯೆ, ದಸರಾ, ದೀಪಾವಳಿ, ಕಾರ್ತಿಕ ಸೋಮವಾರದಂದು ಜಾತ್ರಾ ಮಹೋತ್ಸವಗಳು, ವಿಶೇಷ ಪೂಜೆ, ಉತ್ಸವಾದಿಗಳು ನಡೆಯಲಿದ್ದು ಅದಕ್ಕಾಗಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.

ಅಕ್ಟೋಬರ್ 12ರಂದು ಮಹಾಲಯ ಜಾತ್ರೆ ಪ್ರಾರಂಭವಾಗಿದೆ. 13ರ ಇಂದು ಚತುರ್ದಶಿ ಶ್ರೀ ಸ್ವಾಮಿಗೆ ಎಣ್ಣೆಮಜ್ಜನ ವಿಶೇಷ ಸೇವೆ ಉತ್ಸವಾದಿಗಳು ಹಾಗೂ 14ರಂದು ಮಹಾಲಯ ಅಮವಾಸ್ಯೆ ವಿಶೇಷ ಉತ್ಸವಾದಿಗಳು ಜರುಗಲಿವೆ. ಅಕ್ಟೋಬರ್ 15ರಂದು ದಸರಾ ಜಾತ್ರಾ ಮಹೋತ್ಸವದ ಶರನ್ನವರಾತ್ರಿ ಉಯ್ಯಾಲೋತ್ಸವ ಪ್ರಾರಂಭವಾಗಲಿದೆ. 23ರಂದು ಮಹಾನವಮಿ, ಆಯುಧಪೂಜೆ ಹಾಗೂ 24ರಂದು ವಿಜಯದಶಮಿ, ಕುದುರೆ ವಾಹನೋತ್ಸವ ನಡೆಯಲಿದೆ.

ನವೆಂಬರ್ 10ರಂದು ದೀಪಾವಳಿ ಪ್ರಯುಕ್ತ ವಿಶೇಷ ಕಾರ್ಯಕ್ರಮ ಪ್ರಾರಂಭವಾಗಲಿದೆ. 11 ರಂದು ಶ್ರೀ ಸ್ವಾಮಿಗೆ ಎಣ್ಣೆಮಜ್ಜನ ಸೇವೆ ಮತ್ತು ಉತ್ಸವಾದಿಗಳು, 12ರಂದು ನರಕ ಚತುರ್ದಶಿ ವಿಶೇಷ ಉತ್ಸವಾದಿಗಳು, 13ರಂದು ಅಮಾವಾಸ್ಯೆ, ಹಾಲರುವೆ ಉತ್ಸವ ಹಾಗೂ 14ರಂದು ದೀಪಾವಳಿ ಮಹಾರಥೋತ್ಸವವು ಬೆಳಿಗ್ಗೆ 8.50 ರಿಂದ 9.10 ಗಂಟೆಯವರೆಗೆ ಜರುಗಲಿದೆ.

ನವೆಂಬರ್ 20ರಂದು ಮೊದಲನೇ ಕಾರ್ತಿಕ ಸೋಮವಾರ, 27ರಂದು ಎರಡನೇ ಕಾರ್ತಿಕ ಸೋಮವಾರ, ಡಿಸೆಂಬರ್ 4ರಂದು ಮೂರನೇ ಕಾರ್ತಿಕ ಸೋಮವಾರದಂದು ವಿಶೇಷ ಪೂಜಾ ಕೈಂಕರ್ಯಗಳು ನಡೆಯಲಿವೆ. 11ರಂದು ನಾಲ್ಕನೇ ಕಾರ್ತಿಕ ಸೋಮವಾರದಂದು ಶ್ರೀ ಸ್ವಾಮಿಗೆ ಎಣ್ಣೆಮಜ್ಜನ ಸೇವೆ, ರಾತ್ರಿ ಶ್ರೀ ಮಹದೇಶ್ವರ ಜ್ಯೋತಿ ದರ್ಶನ ಹಾಗೂ 12ರಂದು ಕಾರ್ತಿಕ ಅಮಾವಾಸ್ಯೆ ವಿಶೇಷ ಸೇವೆ ಉತ್ಸವಗಳು ನಡೆಯಲಿವೆ ಎಂದು ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿಯವರಾದ ಸರಸ್ವತಿ ಅವರು ತಿಳಿಸಿದ್ದಾರೆ.

Ashika S

Recent Posts

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

1 hour ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

2 hours ago

ರಸ್ತೆಯಲ್ಲಿ ಸಿಕ್ಕಿದ್ದ ಪೆನ್‌ಡ್ರೈವ್ ಅನ್ನು ಶಾಸಕ ಎ.ಮಂಜುಗೆ ಕೊಟ್ಟಿದ್ದೆ: ನವೀನ್ ಗೌಡ

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ ಹಂಚಿಕೆ ಆರೋಪ ಎದುರಿಸುತ್ತಿರುವ ನವೀನ್ ಗೌಡ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿರುವ ಪೋಸ್ಟ್ ಭಾರೀ…

2 hours ago

ಡಿಫರೆಂಟ್ ಗೆಟಪ್‌ನಲ್ಲಿ ಎಂಟ್ರಿ ಕೊಟ್ಟ ನಟ ಮಿತ್ರ

ಕನ್ನಡದ ಹಾಸ್ಯನಟ ಮಿತ್ರ ಇದೀಗ ಪ್ರಜ್ವಲ್ ದೇವರಾಜ್ ನಟನೆಯ ‘ಕರಾವಳಿ’ ಚಿತ್ರದಲ್ಲಿ ಮುಖ್ಯ ಪಾತ್ರವೊಂದಕ್ಕೆ ಬಣ್ಣ ಹಚ್ಚಿದ್ದಾರೆ.

2 hours ago

ಶೀಘ್ರದಲ್ಲೇ ಎರ್ನಾಕುಲಂನಿಂದ ಬೆಂಗಳೂರಿಗೆ ವಂದೇ ಭಾರತ್ ಆರಂಭ

ಲೋಕಸಭೆ ಚುನಾವಣೆ ಮುಗಿದ ಬಳಿಕ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಶೀಘ್ರದಲ್ಲೇ ಕೊಚ್ಚಿಯ ಎರ್ನಾಕುಲಂನಿಂದ ಬೆಂಗಳೂರಿಗೆ ಸಂಚಾರ ಪ್ರಾರಂಭಿಸಲಿದೆ.

3 hours ago

ಅಂಬೇಡ್ಕರ್ ಜಯಂತೋತ್ಸವದ ಅಂಗವಾಗಿ ಗ್ರಾಮೀಣ ಕ್ರೀಡಾಕೂಟಕ್ಕೆ ಚಾಲನೆ

ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 133ನೇ ಜಯಂತೋತ್ಸವ ಅಂಗವಾಗಿ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ವಿಮೋಚನಾ ಯುವಕರ ಸಂಘದ…

3 hours ago