News Karnataka Kannada
Wednesday, April 17 2024
Cricket
ಸಮುದಾಯ

ಚಾಮುಂಡಿಬೆಟ್ಟದಲ್ಲಿ ಆಷಾಢ ಶುಕ್ರವಾರದ ಸಂಭ್ರಮ

Ashadha Friday celebrations at Chamundi Hill
Photo Credit : By Author

ಮೈಸೂರು: ಆಷಾಢದ ಮಾಸದ ಮೊದಲನೇ ಶುಕ್ರವಾರದ ಹಿನ್ನಲೆಯಲ್ಲಿ ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆಗಳು ನಡೆಯುತ್ತಿದ್ದು, ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಬಂದಿದ್ದು ತಾಯಿಯ ದರ್ಶನ ಪಡೆಯುತ್ತಿದ್ದಾರೆ. ಈ ಪೈಕಿ ನಟ ದರ್ಶನ್ ಹಾಗೂ ಹಲವು ಗಣ್ಯರು ದೇಗುಲಕ್ಕೆ ಭೇಟಿ ನೀಡಿ ತಾಯಿಯ ದರ್ಶನ ಪಡೆದಿರುವುದು ವಿಶೇಷವಾಗಿದೆ.

ಮುಂಜಾನೆ ಮೂರು ಗಂಟೆಯಿಂದಲೇ ಭಕ್ತರು ದೇಗುಲಕ್ಕೆ ಆಗಮಿಸುತ್ತಿದ್ದು, 3.30ರಿಂದಲೇ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆಗಳನ್ನು ನಡೆಸಲಾಗುತ್ತಿದ್ದು, ರಾತ್ರಿ ತನಕವೂ ನಡೆಯಲಿದೆ. ಭಕ್ತರಿಗೆ ಬೆಳಗ್ಗೆ 5.30 ರಿಂದ ರಾತ್ರಿ 12 ಗಂಟೆಯ ವರೆಗೆ ತಾಯಿ ಚಾಮುಂಡಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ವಿಶೇಷ ಲಕ್ಷ್ಮಿ ಅಲಂಕಾರದಿಂದ ಶೋಭಿತಳಾದ ಚಾಮುಂಡೇಶ್ವರಿಗೆ ಮಹಾನ್ಯಾಸಕ ಪೂರ್ವಕ ರುದ್ರಾಭಿಷೇಕ, ಪಂಚಾಮೃತ ಅಭಿಷೇಕ ಮತ್ತು ವಿಶೇಷ ಪೂಜೆ ಅರ್ಚನೆಯನ್ನು ನಡೆಸಲಾಯಿತು.

ಭಕ್ತರಿಗೆ ಉಚಿತ ಬಸ್ ಸೇವೆಯನ್ನು ಲಲಿತ್ ಮಹಲ್ ಹೆಲಿಪ್ಯಾಡ್ ಬಳಿಯಿಂದ ಮಾಡಲಾಗಿದೆ. ದೇವರ ದರ್ಶನಕ್ಕೆ ಧರ್ಮ ದರ್ಶನ ಸೇರಿದಂತೆ 50ರೂ ಮತ್ತು 300 ರೂ ಗಳ ವಿಶೇಷ ದರ್ಶನದ ವ್ಯವಸ್ಥೆ ಮಾಡಲಾಗಿದೆ. ವಿಶೇಷ ದರ್ಶನ ಪಡೆಯಲು 65 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ 50 ರೂ. ಕೌಂಟರ್‍ನಲ್ಲಿ ಉಚಿತವಾಗಿ ದೇವಿ ದರ್ಶನ ಪಡೆಯುವ ವ್ಯವಸ್ಥೆ ಮಾಡಲಾಗಿದೆ.

ಚಾಮುಂಡಿಬೆಟ್ಟಕ್ಕೆ ತೆರಳಲು ಸಾಧ್ಯವಾಗದ ಭಕ್ತರು ತಮ್ಮ ಮನೆಗೆ ಸಮೀಪವಿರುವ ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಿ ದೇವರ ದರ್ಶನ ಮಾಡಿಕೊಂಡು ಬರುತ್ತಿರುವ ದೃಶ್ಯ ಕಂಡು ಬರುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು