News Karnataka Kannada
Saturday, May 18 2024
ಸಮುದಾಯ

ಬೆಂಗಳೂರು: ಶ್ರೀ ಸತ್ಯಗಣಪತಿ ಶಿರಡಿ ಸಾಯಿ ಟ್ರಸ್ಟ್ ನಿಂದ ವೈಭವದ ಗುರುಪೂರ್ಣಿಮೆ

Sri Sathya Ganapathi Shirdi Sai Trust celebrates the grand Guru Purnima
Photo Credit : News Kannada

ಬೆಂಗಳೂರು: ಜೆ.ಪಿ. ನಗರದ ಶ್ರೀ ಸತ್ಯಗಣಪತಿ ಶಿರಡಿ ಸಾಯಿ ಟ್ರಸ್ಟ್ ನಿಂದ ಜುಲೈ 3 ರಂದು ವಿಶೇಷ ಗುರುಪೂರ್ಣಿಮೆ ಆಚರಿಸಲಾಗುವುದು. ಶಿರಡಿ ಸಾಯಿ ಬಾಬಾರಿಗೆ ವಿಶೇಷ ಅಲಂಕಾರ, ವೈಭವದ ಧಾರ್ಮಿಕ ಪೂಜಾ ವಿಧಿ ವಿಧಾನಗಳನ್ನು ಏರ್ಪಡಿಸಲಾಗುವುದು.

ಬಾಬಾರನ್ನು ಬಗೆ ಬಗೆಯ ಹೂವುಗಳು, ಹಣ್ಣುಗಳು, ಬಾದಾಮಿ, ಖರ್ಜೂರ, ಒಣಹಣ್ಣುಗಳು, ಬೆಲ್ಲದಿಂದ ಸಿಂಗರಿಸುತ್ತಿದ್ದು, ಕೆಂದು ಬಣ್ಣದ ಎಳನೀರಿನಿಂದ ವಿಶೇಷ ಅಲಂಕಾರ ಮಾಡಲಾಗುವುದು ಎಂದು  ಶ್ರೀ ಸತ್ಯಗಣಪತಿ ಶಿರಡಿ ಸಾಯಿ ಟ್ರಸ್ಟ್ ಅಧ್ಯಕ್ಷ ಲೋಕರಾಜ್ ತಿಳಿಸಿದ್ದಾರೆ.

ಗುರು ಪೂರ್ಣಿಮೆಯಂದು ಶಿರಡಿ ಸಾಯಿ ಬಾಬಾ ಅವರಿಗೆ ಅಭಿಷೇಕ, ಹೋಮ, ಪ್ರಸಾದ ಸೇವೆ, ಅಲಂಕಾರ ಸೇವೆ, ಸರ್ವ ಸೇವೆ ಒಳಗೊಂಡಂತೆ ಎಲ್ಲಾ ರೀತಿಯ ಪೂಜಾ ವಿಧಿ ವಿಧಾನಗಳನ್ನು ಏರ್ಪಡಿಸಲಾಗುವುದು.. ಸೋಮವಾರ ಬೆಳಿಗ್ಗೆಯಿಂದ ರಾತ್ರಿವರೆಗೆ ಭಕ್ತರಿಗೆ ನಿರಂತರವಾಗಿ ಪ್ರಸಾದ ವಿತರಣೆ ಮಾಡಲಾಗುತ್ತದೆ ಎಂದು ದೇವಸ್ಥಾನದ ಟ್ರಸ್ಟ್ ನ ಆಡಳಿತ ಮಂಡಳಿ ಮಾಹಿತಿ ನೀಡಿದೆ.

ಪ್ರತಿವರ್ಷ ಶ್ರೀ ಸತ್ಯಗಣಪತಿ ಶಿರಡಿ ಸಾಯಿ ಟ್ರಸ್ಟ್ ನಿಂದ ಅದ್ದೂರಿಯಾಗಿ ಗುರು ಪೂರ್ಣಿಮೆ ಆಚರಿಸುತ್ತಿದ್ದು, ಈ ಬಾರಿ ಮತ್ತಷ್ಟು ಸಂಭ್ರಮ ಮತ್ತು ವಿಶೇಷತೆಗಳೊಂದಿಗೆ ಸಾಯಿ ಬಾಬಾರ ಸ್ಮರಣೆಗೆ ವ್ಯವಸ್ಥೆ ಮಾಡಲಾಗಿದೆ. ಬಾಬಾರ ‘’ಸಬ್ ಕಾ ಮಾಲೀಕ್ ಏಕ್ ಹೇ’’ ಎಂಬ ಪರಿಕಲ್ಪನೆಯಡಿ ಬಡವ, ಬಲ್ಲಿದ ಬೇಧ-ಭಾವವಿಲ್ಲದೇ ಎಲ್ಲಾ ಸಮುದಾಯದವರಿಗೆ ಮುಕ್ತ ಸ್ವಾಗತ ಕೋರುತ್ತಿರುವುದಾಗಿ ಟ್ರಸ್ಟ್ ಅಧ್ಯಕ್ಷ ಲೋಕರಾಜ್‌ ಮನವಿ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು