Categories: ಸಮುದಾಯ

ಸಿಂಹವಾಹಿನಿ ಅಲಂಕಾರದಲ್ಲಿ ಕಂಗೊಳಿಸಿದ ಚಾಮುಂಡೇಶ್ವರಿ

ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರ ಚಾಮುಂಡಿಬೆಟ್ಟದಲ್ಲಿ ಅಧಿದೇವತೆ ಚಾಮುಂಡೇಶ್ವರಿ ಸಿಂಹವಾಹಿನಿ ಅಲಂಕಾರದಲ್ಲಿ ಕಂಗೊಳಿಸುವ ಮೂಲಕ ವಿವಿಧ ಕಡೆಗಳಿಂದ ಆಗಮಿಸಿದ್ದ ಸಹಸ್ರಾರು ಭಕ್ತರು ಹಾಗೂ ಹಲವು ಗಣ್ಯರಿಗೆ ದರ್ಶನ ನೀಡಿದ್ದಾಳೆ.

ಶುಕ್ರವಾರ ಮುಂಜಾನೆಯಿಂದಲೇ ರಾಜ್ಯದ ಮೂಲೆ ಮೂಲೆಯಿಂದ ಬೆಟ್ಟಕ್ಕೆ ಆಗಮಿಸಿದ್ದ ಸಹಸ್ರಾರು ಭಕ್ತರು ಸರತಿ ಸಾಲಿನಲ್ಲಿ ನಿಂತು ಜಯಘೋಷ ಕೂಗುತ್ತ ಚಾಮುಂಡೇಶ್ವರಿ ದರ್ಶನ ಪಡೆದರು. ಸಾವಿರಾರು ಮಂದಿ ಮೆಟ್ಟಿಲುಗಳ ಮೂಲಕ ಬೆಟ್ಟಕ್ಕೆ ಬಂದು ಭಕ್ತಿಭಾವ ಮೆರೆದರು. 5,100 ಹಾಗೂ 300 ರೂ ವಿಶೇಷ ದರ್ಶನದ ಸರತಿ ಸಾಲಿನಲ್ಲೂ ಹೆಚ್ಚು ಜನ ಕಂಡುಬಂದರು. ಎರಡನೇ ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಮುಂಜಾನೆ 3 ಗಂಟೆಯಿಂದಲೇ ಬೆಟ್ಟದಲ್ಲಿ ಪೂಜಾ ಕೈಂಕರ್ಯಗಳು ಆರಂಭಗೊಂಡವು.

ಪ್ರತಿ ವಾರದಂತೆ ಮೊದಲಿಗೆ ದೇವಿಗೆ ಅಭಿಷೇಕ, ರುದ್ರಾಭೀಷೇಕ, ಪಂಚಾಮೃತ ಅಭಿಷೇಕ ಸಲ್ಲಿಸಿದ ಬಳಿಕ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶ ನೀಡಲಾಯಿತು. ನಂತರ ಬೆಳಗ್ಗೆ 11 ಗಂಟೆಗೆ ಪೂಜೆ ಸಲ್ಲಿಸಿ, ಮಹಾಮಂಗಳಾರತಿ ನೆರವೇರಿಸಲಾಯಿತು. ದೇವಸ್ಥಾನದ ಪ್ರಧಾನ ಅರ್ಚಕ ಡಾ.ಶಶಿಶೇಖರ್ ದೀಕ್ಷಿತ್ ಸಮ್ಮುಖದಲ್ಲಿ ಶ್ರದ್ಧಾಭಕ್ತಿಯಿಂದ ನೆರವೇರಿಸಲಾಯಿತು.

ಆಷಾಢ ಮಾಸದ ಪ್ರತಿ ಶುಕ್ರವಾರಗಳಲ್ಲೂ ಚಾಮುಂಡೇಶ್ವರಿಗೆ ವಿವಿಧ ರೀತಿಯ ಅಲಂಕಾರಗಳನ್ನು ಮಾಡಲಿದ್ದು, ಈ ವಾರ ದೇವಿಗೆ ಸಿಂಹವಾಹಿನಿ ಅಲಂಕಾರ ಮಾಡಲಾಗಿತ್ತು. ಗುಲಾಬಿ ಬಣ್ಣದ ಸೀರೆಯನ್ನುಟ್ಟು, ಸಿಂಹವಾಹಿನಿಯಾಗಿ, ವಿವಿಧ ಹೂವುಗಳಿಂದ ಸಿಂಗಾರಗೊಂಡು ಕಂಗೊಳಿಸುತ್ತಿದ್ದ ಚಾಮುಂಡೇಶ್ವರಿಯನ್ನು ಕಂಡು ಭಕ್ತರು ಪುನೀತರಾದರು. ಅಮ್ಮನ ಉತ್ಸವ ಮೂರ್ತಿಗೆ ನೀಲಿ ಬಣ್ಣದ ಸೀರೆಯನ್ನುಡಿಸಲಾಗಿತ್ತು. ದೇವಸ್ಥಾನವನ್ನು ವಿವಿಧ ಬಗೆಯ ಹೂಗಳಿಂದ ಸಿಂಗರಿಸಲಾಗಿತ್ತು.

2ನೇ ಆಷಾಢ ಶುಕ್ರವಾರದಂದು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ್ದ ಅಸಂಖ್ಯಾತ ಭಕ್ತರೊಂದಿಗೆ ಹಲವು ಗಣ್ಯರು ದೇವಿಯ ದರ್ಶನ ಪಡೆದರು. ಪ್ರಮುಖವಾಗಿ ಶಾಸಕ ಜಿ.ಟಿ.ದೇವೇಗೌಡ, ಮಾಜಿ ಶಾಸಕ ಎಂಟಿಬಿ ನಾಗರಾಜ್, ಎಂಎಲ್‌ಸಿ ಸೂರಜ್ ರೇವಣ್ಣ, ನಟರಾದ ಡಾಲಿ ಧನಂಜಯ್, ಧನ್ವೀರ್ ಸೇರಿದಂತೆ ಹಲವು ಗಣ್ಯರು ಬೆಟ್ಟಕ್ಕೆ ಭೇಟಿ ನೀಡಿ ಅಮ್ಮನ ದರ್ಶನ ಪಡೆದರು.

ಆಷಾಢ ಶುಕ್ರವಾರದ ಅಂಗವಾಗಿ ಬೆಟ್ಟಕ್ಕೆ ಭೇಟಿ ನೀಡಿದ ಭಕ್ತರಿಗೆ ಕಳೆದ ವಾರದಂತೆ ಅಚ್ಚುಕಟ್ಟಾಗಿ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. ಕಳೆದ 12 ವರ್ಷದಿಂದ ಪ್ರತಿ ವರ್ಷ ೨ನೇ ಆಷಾಢ ಶುಕ್ರವಾರದಲ್ಲಿ ಭಕ್ತರಿಗೆ ಅನ್ನ ಸಂತರ್ಪಣೆ ಮಾಡಿಸುವ ನಂಜನಗೂಡಿನ ಚಾಮುಂಡಿ ಟೌನ್‌ಶಿಪ್ ಹಾಗೂ ಕೊಯಮತ್ತೂರಿನ ದುರ್ಗಾ ಏಜೆನ್ಸಿಯ ಶಾಂತಿ ಮತ್ತು ತಂಬು ದಂಪತಿಯಿಂದ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. ಬೆಳಗ್ಗೆ 6.30ರಿಂದ ಆರಂಭವಾದ ಪ್ರಸಾದ ವಿತರಣೆ ರಾತ್ರಿ 7.30ರವರೆಗೂ ನಡೆಯಿತು.

Ashika S

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

4 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

4 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

4 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

4 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

6 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

6 hours ago