Categories: ಸಮುದಾಯ

ಶಿವಮೊಗ್ಗ:  ಪಠ್ಯದ ಜತೆ ಸಮಾಜ ಸೇವಾ ಮನೋಭಾವನೆ ಬೆಳೆಸಿಕೊಳ್ಳಿ- ಡಾ.ಬಾಲಕೃಷ್ಣ ಹೆಗಡೆ

ಶಿವಮೊಗ್ಗ: ವಿದ್ಯಾರ್ಥಿ ದೆಸೆಯಲ್ಲಿಯೇ ಸಾಮಾಜಿಕ ಸೇವಾ ಮನೋಭಾವನೆಯನ್ನು ಯುವ ಸಮೂಹ ಬೆಳೆಸಿಕೊಳ್ಳಬೇಕು ಎಂದು ಕಮಲಾ ನೆಹರು ಸ್ಮಾರಕ ರಾಷ್ಟ್ರೀಯ ಮಹಿಳಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿ  ಡಾ.ಬಾಲಕೃಷ್ಣ ಹೆಗಡೆ ಕರೆ ನೀಡಿದರು.

ಅವರು ನಗರದ ಹೊರವಲಯದಲ್ಲಿರುವ ಪಶು ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಅಲ್ಲಿಯ ರಾಷ್ಟ್ರೀಯ ಸೇವಾ ಯೋಜನೆಯು  ಪರೋಪಕಾರಂನ ಸಹಯೋಗದಲ್ಲಿ ಆಯೋಜಿಸಿದ್ದ ಸ್ವಚ್ಛತಾ ಜಾಗೃತಿ, ಹಸಿರೀಕರಣ ಕಾರ್ಯಕ್ರಮದಲ್ಲಿ
ಪಾಲ್ಗೊಂಡು ಮಾತನಾಡುತ್ತಿದ್ದರು. ಇಂದಿನ ವಿದ್ಯಾರ್ಥಿಗಳು ಸೆಮಿಸ್ಟರ್ ಪದ್ಧತಿಂಗಳಲ್ಲಿ ಅಂಕ ಗಳಿಕೆಗೆ ಮಾತ್ರ ಹೆಚ್ಚು ಒತ್ತು ಕೊಡುತ್ತಿರುವುದಲ್ಲದೆ ಮೊಬೈಲ್ ಅಬ್ಬರದಲ್ಲಿ ಕೊಚ್ಚಿ ಹೋಗುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಸಮಾಜದಲ್ಲಿ ನಡೆಯುತ್ತಿರುವ ವಿದ್ಯಮಾನಗಳನ್ನು ಹೊರಗೆಡುಹಿದರು.

ನಾಲ್ಕು ಗೋಡೆಗಳ ಮಧ್ಯದ ಕಲಿಕೆಯ ಜತೆಗೆ ಹೊರ ಜಗತ್ತಿನ ಪರಿ ಜ್ಞಾನವೂ ವಿದ್ಯಾರ್ಥಿಗಳಿಗೆ ಇರಬೇಕು.  ಅದಕ್ಕೆ ಎನ್.ಎಸ್.ಎಸ್. ನಂಥಹ ಸಂಸ್ಥೆಗಳು ಸಹಾಯಕಾರಿ ಎಂದು ತಿಳಿಸಿದ ಅವರು ಸಮಾಜದಲ್ಲಿನ ಆಗು ಹೋಗು, ಗ್ರಾಮೀಣ ಪರಿಸರದ ಜ್ಞಾನ, ವಿವಿಧ ಭಾಷೆ, ವ್ಯಕ್ತಿತ್ವ ವಿಕಸನ ಇತ್ಯಾದಿಗಳನ್ನು ತಿಳಿದುಕೊಳ್ಳಲು ರಾ.ಸೇ.ಯೋ.ಯಲ್ಲಿ ತೊಡಗಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.

ಪರೋಪಕಾರಂನ ತ್ಯಾಗರಾಜ ಮಿತ್ಯಾಂತ ಮಾತನಾಡಿ ತಮ್ಮ ಸಂಸ್ಥೆಯಲ್ಲಿ ಯಾರೂ ನಾಯಕರಾಗಲೀ, ಪದಾಧಿಕಾರಿಗಳಾಗಲೀ
ಇಲ್ಲ. ಕಳೆದ ಐದು ವರ್ಷಗಳಿಂದ ನಗರ ಹಾಗೂ ಸುತ್ತಮುತ್ತಲಿನ ಗ್ರಾಮಾಂತರಗಳಲ್ಲಿ ಸ್ವಚ್ಛತೆ, ಪರಿಸರ ಜಾಗೃತಿ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದು ಇಂದು ಪರೋಪಕಾರಂ ಮನೆ ಮಾತಾಗಿದೆ. ಸಾರ್ವಜನಿಕರು ತಮ್ಮ ಸಂಸ್ಥೆಯ ಸಾಮಾಜಿಕ ಕಾಳಜಿಯನ್ನು ಗುರುತಿಸುವಂತಾಗಿದೆ ಎಂದು ಮಾಹಿತಿ ನೀಡಿದರು.

ಪಶುವೈದ್ಯ ಕಾಲೇಜಿನ ಎನ್.ಎಸ್.ಎಸ್.ಅಧಿಕಾರಿಗಳಾದ ಪ್ರೊ.ಧೂಳಪ್ಪನವರ್, ಪ್ರೊ.ಗಿರಿಧರ್, ಅನಿಲ್ ಕುಮಾರ್,  ಮೊದಲಾದವರು ಉಪಸ್ಥಿತರಿದ್ದರು. ಎನ್.ಎಸ್.ಎಸ್.ಸ್ವಯಂಸೇವಕರು ಕಾರ್ಯಕ್ರಮ ನಿರ್ವಹಿಸಿದರು.

Sneha Gowda

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

16 mins ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

30 mins ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

42 mins ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

58 mins ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

1 hour ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

1 hour ago